ನುಗ್ಗಿ ಹೊಡೆಯುತ್ತಿದ್ದೇವೆ ಉಗ್ರಗಾಮಿ ಪಾಕ್’ಗೆ, ಚೀನಾಕ್ಕೂ ಇಟ್ಟಿದ್ದೇವೆ ಚೆಕ್ ಮೇಟ್: ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Union Minister Pralhad Joshi: ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ನಡೆಯುತ್ತಿರುವ ಸಂಸದರ ಕ್ರೀಡೋತ್ಸವದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಹಾಗೂ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

Written by - Prashobh Devanahalli | Edited by - Bhavishya Shetty | Last Updated : Feb 21, 2024, 08:29 PM IST
    • ಸಂಸದರ ಕ್ರೀಡೋತ್ಸವದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ
    • ಪಾಕಿಸ್ತಾನದವರ ಮನೆಗೇ ನುಗ್ಗಿ ಹೊಡೆಯುತ್ತಿದ್ದೇವೆ
    • ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿಕೆ
ನುಗ್ಗಿ ಹೊಡೆಯುತ್ತಿದ್ದೇವೆ ಉಗ್ರಗಾಮಿ ಪಾಕ್’ಗೆ, ಚೀನಾಕ್ಕೂ ಇಟ್ಟಿದ್ದೇವೆ ಚೆಕ್ ಮೇಟ್: ಕೇಂದ್ರ ಸಚಿವ ಪ್ರಹ್ಲಾದ ಜೋಶಿ  title=
File Photo

ಧಾರವಾಡ: ದೇಶದಲ್ಲಿ ಉಗ್ರಗಾಮಿ ಚಟುವಟಿಕೆ ನಡೆಸುತ್ತಿದ್ದ ಪಾಕಿಸ್ತಾನದವರ ಮನೆಗೇ ನುಗ್ಗಿ ಹೊಡೆಯುತ್ತಿದ್ದೇವೆ. ಕಾಲು ಕೆದರಿ ಬರುತ್ತಿದ್ದ ಚೀನಾಕ್ಕೂ ಪ್ರತ್ಯುತ್ತರ ಕೊಡುತ್ತಿದ್ದೇವೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ.

ಜಿಲ್ಲೆಯ ನರೇಂದ್ರ ಗ್ರಾಮದಲ್ಲಿ ನಡೆಯುತ್ತಿರುವ ಸಂಸದರ ಕ್ರೀಡೋತ್ಸವದಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿ ಹಾಗೂ ಸಂಗೀತೋತ್ಸವ ಉದ್ಘಾಟಿಸಿ ಅವರು ಮಾತನಾಡಿದರು.

ಇದನ್ನೂ ಓದಿ: ಕೈ ಹಿಡಿಯಲಿದೆ ಗುರು ಬಲ... ಯಶಸ್ಸಿಗೆ ಮತ್ತೊಂದು ಹೆಸರಾಗುವರು ಈ 4 ರಾಶಿಯವರು, ಲಕ್ಷ ಲಕ್ಷ ಗಳಿಕೆಯ ಯೋಗ ಇವರದ್ದು!

ದೇಶದಲ್ಲಿ ಆರ್ಟಿಕಲ್ 370ನ್ನು ತೆಗೆದು ಹಾಕಿದ್ದೇವೆ. ಈ ಮೂಲಕ ಉಗ್ರರ ಚಟುವಟಿಕೆ ಸಂಪೂರ್ಣ ಹತ್ತಿಕ್ಕಲಾಗಿದೆ. ಈ ಮೊದಲು ಬೆಂಗಳೂರು, ಹೈದರಾಬಾದ್‍’ನಲ್ಲಿ ಬಾಂಬ್ ಸದ್ದು ಮಾಡುತ್ತಿತ್ತು. ಈಗ ಸದ್ದಡಗಿದೆ. ಆರ್ಟಿಕಲ್ 370ನ್ನು ತೆಗೆದು ಹಾಕಿ ಉಗ್ರರ ಚಟುವಟಿಕೆಯನ್ನು ಸಂಪೂರ್ಣ ಬಂದ್ ಮಾಡಲಾಗಿದೆ ಎಂದು ಹೇಳಿದರು.

ಮೋದಿ ಆಡಳಿತದಲ್ಲಿ ಭಾರತ ಸಶಕ್ತ:

ಆರ್ಟಿಕಲ್ 370 ರದ್ಧತಿ ಬಳಿಕ ಬಾಂಬ್ ಸ್ಫೋಟ ಸದ್ದು ಮಾಡದೆ ಓಡಿದೆ. ಮೊದಲು ದೇಶದೊಳಗೆ ಬಂದು ಬಾಂಬ್ ಹಾಕುತ್ತಿದ್ದರು. ಈಗ ನಾವು ಪಾಕಿಸ್ತಾನದ ಅವರ ಮನೆಗೇ ನುಗ್ಗಿ ಹೊಡೆಯುತ್ತಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಭಾರತ ಅಷ್ಟು ಸಶಕ್ತವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ಚೀನಾಗೂ ಎದುರುತ್ತರ ಕೊಡುತ್ತಿದ್ದೇವೆ. ಈಗ ಎಲ್ಲಿಯಾದರೂ ಬಾಂಬ್ ಹಾರುತ್ತಿವೆಯೇ? ಎಂದು ಪ್ರಶ್ನಿಸಿದ ಜೋಶಿ, ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟಿಕಲ್ 370 ತೆಗೆದುಹಾಕಿದ್ದೇ ಇದಕ್ಕೆಲ್ಲ ಕಾರಣ ಎಂದು ಹೇಳಿದರು.

ಇದನ್ನೂ ಓದಿ: ಒಂದೇ ಓವರ್’ನಲ್ಲಿ 6 ಸಿಕ್ಸರ್! ಯುವರಾಜ್ ಸಿಂಗ್ ಕ್ಲಬ್ ಸೇರಿದ ಮತ್ತೊಬ್ಬ ಭಾರತೀಯ ಬ್ಯಾಟ್ಸ್’ಮನ್

ಆರ್ಟಿಕಲ್ 370 ಕಿತ್ತೆಸೆದ ಪ್ರಧಾನಿ ಮೋದಿಗೆ 370 ಸೀಟು ಕೊಡಿ:

ದೇಶದಲ್ಲಿ ಆರ್ಟಿಕಲ್ 370ಯನ್ನು ಕಿತ್ತೆಸೆದ ಪ್ರಧಾನಿ ಮೋದಿ ಅವರನ್ನು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಿ. ಬಿಜೆಪಿಗೆ 370 ಸೀಟುಗಳನ್ನು ತಂದುಕೊಡಿ. ಇದೇ ಮೋದಿಜಿಗೆ ಕೊಡುವ ಗಿಫ್ಟ್ ಎಂದು ಸಚಿವ ಪ್ರಹ್ಲಾದ ಜೋಶಿ ಹೇಳಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News