ಶಿವಮೊಗ್ಗಕ್ಕೆ ನಾಳೆ ಪ್ರಧಾನಿ ಭೇಟಿ :ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮೋದಿ

Prime Minister : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ.

Written by - Zee Kannada News Desk | Last Updated : Mar 17, 2024, 06:57 PM IST
  • ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ
  • ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು.
  • ವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ.
ಶಿವಮೊಗ್ಗಕ್ಕೆ ನಾಳೆ ಪ್ರಧಾನಿ ಭೇಟಿ :ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮೋದಿ  title=

Prime Minister in shivamogga : ಶಿವಮೊಗ್ಗದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ ಮಾರ್ಚ್ 18ರಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಹಾಗೂ ಯುವಕರು, ಮಹಿಳೆಯರು, ರೈತರು ಸೇರಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಜನರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದರು. 

ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಲಿರುವ ಮೋದಿ ಬೃಹತ್ ಪೆಂಡಾಲ್‍ನಲ್ಲಿ ಜನರನ್ನು ವಾಹನದಲ್ಲಿ ವೀಕ್ಷಿಸುತ್ತ, ವೇದಿಕೆಗೆ ಆಗಮಿಸಲಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಭಾಗವಹಿಸುತ್ತಾರೆ. ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಉಡುಪಿ ಮತ್ತು ಚಿಕ್ಕಮಗಳೂರಿನ ಅಭ್ಯರ್ಥಿಗಳು ವೇದಿಕೆ ಮೇಲೆ ಇರಲಿದ್ದಾರೆ. 

ಇದನ್ನು ಓದಿ : Photo Review : 'ಫೋಟೋ ': ವಲಸೆ ಕಾರ್ಮಿಕರ ಲಾಕ್ ಡೌನ್ ಸಂಕಷ್ಟ ತೋರ್ಪಡಿಸುವ ನೈಜ ಘಟನಾಧಾರಿತ ಸಿನಿಮಾ

ಶಿವಮೊಗ್ಗದ ಸಂಸದ ಬಿ.ವೈ.ರಾಘವೇಂದ್ರ, ಚಿತ್ರದುರ್ಗದ ಸಂಸದ ನಾರಾಯಣಸ್ವಾಮಿ, ದಾವಣಗೆರೆಯ ಸಂಸದ ಸಿದ್ದೇಶ್ವರ್, ಗಾಯತ್ರಿ ಸಿದ್ದೇಶ್ವರ್, ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ನಾಯಕ ಕೋಟ ಶ್ರೀನಿವಾಸ ಪೂಜಾರಿ ವೇದಿಕೆ ಮೇಲೆ ಇರುತ್ತಾರೆ. ಮಂಗಳೂರಿನ ಅಭ್ಯರ್ಥಿ ಬೃಜೇಶ್ ಚೌಟ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಇದನ್ನು ಓದಿ : ಭಾರತಕ್ಕೆ ಕೊಹ್ಲಿ ವಾಪಾಸ್ : ಶೀಘ್ರದಲ್ಲೇ RCB ತಂಡದ ಪೂರ್ವ ಸಿದ್ಧತಾ ಕ್ಯಾಂಪ್ ಗೆ ಸೇರ್ಪಡೆ

ಪ್ರಧಾನಿಯವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುವ ಸಂದರ್ಭದಲ್ಲಿ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಿ.ಟಿ.ರವಿ, ಮಾಜಿ- ಹಾಲಿ ಶಾಸಕರು ವೇದಿಕೆಯಲ್ಲಿ ಇರುತ್ತಾರೆ ಎಂದು ತಿಳಿಸಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News