ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ-ಬಿಎಸ್ವೈ

ರಾಜ್ಯ ಸರ್ಕಾರ ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ನಿರ್ಧಿಸಿದ ಬೆನ್ನಲೇ ಈಗ ಬಿಎಸ್ವೈ ಅವರು ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ, ಆದರೆ  ತಮ್ಮ ಹೆಸರಿನ ಬದಲಾಗಿ ನಾಡಿಗೆ ಕೊಡುಗೆ ನೀಡಿರುವ ಇತರ ಮಹನೀಯರ ಹೆಸರನ್ನು ನಾಮಕರಣ ಮಾಡಬೇಕೆಂದು ಹೇಳಿದ್ದಾರೆ.

Written by - Zee Kannada News Desk | Last Updated : Apr 24, 2022, 04:38 PM IST
  • ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ-ಬಿಎಸ್ವೈ  title=

ಬೆಂಗಳೂರು: ರಾಜ್ಯ ಸರ್ಕಾರ ಶಿವಮೊಗ್ಗದಲ್ಲಿನ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ನಾಮಕರಣ ಮಾಡಲು ನಿರ್ಧಿಸಿದ ಬೆನ್ನಲೇ ಈಗ ಬಿಎಸ್ವೈ ಅವರು ವಿಮಾನ ನಿಲ್ದಾಣಕ್ಕೆ ತಮ್ಮ ಹೆಸರು ಬೇಡ, ಆದರೆ  ತಮ್ಮ ಹೆಸರಿನ ಬದಲಾಗಿ ನಾಡಿಗೆ ಕೊಡುಗೆ ನೀಡಿರುವ ಇತರ ಮಹನೀಯರ ಹೆಸರನ್ನು ನಾಮಕರಣ ಮಾಡಬೇಕೆಂದು ಹೇಳಿದ್ದಾರೆ.

ಈ ಕುರಿತಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಬಿಎಸ್ವೈ "ಶಿವಮೊಗ್ಗ ಜಿಲ್ಲೆಯ ಬಹುದಿನದ ವಿಮಾನ ನಿಲ್ದಾಣ ನನಸಾಗುತ್ತಿದೆ ಸೋಗಾನೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣದ ಕಾಮಗಾರಿಯನ್ನು ಇತ್ತೀಚೆಗೆ ತಾವು ವೀಕ್ಷಣೆ ಮಾಡಿದ ಸಂದರ್ಭದಲ್ಲಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕೆ ತಮಗೆ ಧನ್ಯವಾದಗಳು.No description available.

ಇದನ್ನೂ ಓದಿ : ಇಂದು ವರನಟ ಡಾ.ರಾಜ್ ಕುಮಾರ್ 94 ಹುಟ್ಟುಹಬ್ಬ: ಅಭಿಮಾನಿ ಸಂಘಗಳಿಂದ ರಥೋತ್ಸವ

ಶಿವಮೊಗ್ಗದ ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು.ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ ಪರಿಷತ್‌ ಸದಸ್ಯರು , ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ . ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ.ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾತ್ರ ಹಾಗೂ ನನ್ನನ್ನು ಸತತವಾಗಿ ಬೆಂಬಲಿಸಿ ಸಲುಹಿದ ಜಿಲ್ಲೆಯ ಜನತೆಗೆ ಸೇವೆ ಮಾಡಿದ್ದೇನೆಂಬ ಧನ್ಯತಾಭಾವ ನನ್ನದು . ಈ ಹಿನ್ನೆಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ" ಎಂದು ಅವರು ಪತ್ರದ ಮೂಲಕ ವಿರೋಧ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : Dr Rajkumar Birthday: ಸಿಎಂ ಬೊಮ್ಮಾಯಿ ಸೇರಿ ಗಣ್ಯರಿಂದ ಡಾ.ರಾಜ್ ಸ್ಮರಣೆ

ರಾಜ್ಯ ಸರ್ಕಾರ ಯಡಿಯೂರಪ್ಪನವರ ಹೆಸರನ್ನು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಲು ಘೋಷಿಸಿದ ಬೆನ್ನಲ್ಲೇ ಪರ ವಿರೋಧದ ಅಭಿಪ್ರಾಯಗಳು ವ್ಯಕ್ತವಾಗಿದ್ದವು. ಕೆಲವರು ಕುವೆಂಪು, ಶಾಂತವೇರಿ ಗೋಪಾಲಗೌಡರಂತಹ ಮಹನೀಯರ ಹೆಸರನ್ನು ನಾಮಕರಣ ಮಾಡುವುದು ಸೂಕ್ತ ಎಂದು ಸಾಮಾಜಿಕ ಮಾಧ್ಯಮದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News