Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ

Ayodhya Ram Mandir: ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಪ್ರಲ್ಹಾದ್ ಜೋಶಿ ಸಂತಸ ಹಂಚಿಕೊಂಡಿದ್ದಾರೆ.

Written by - Puttaraj K Alur | Last Updated : Mar 17, 2023, 09:10 PM IST
  • ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ ಆಯ್ಕೆಯಾಗಿದೆ
  • ರಾಜ್ಯಕ್ಕೆ ಈ ಸೇವೆ ಮಾಡುವ ಅವಕಾಶ ನೀಡಿದ ಪ್ರಭು ಶ್ರೀರಾಮನಿಗೆ ಶಿರಸಾಷ್ಟಾಂಗ ನಮಸ್ಕಾರ
  • ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದ್ದಕ್ಕೆ ಪ್ರಹ್ಲಾದ್ ಜೋಶಿ ಸಂತಸ
Ayodhya Ram Mandir: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ title=
ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ

ಬೆಂಗಳೂರು: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು ಕೇಂದ್ರ ಗಣಿ ಹಾಗೂ ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಈ ಬಗ್ಗೆ ಶುಕ್ರವಾರ ಸರಣಿ ಟ್ವೀಟ್ ಮೂಲಕ ಮಾಹಿತಿ ನೀಡಿರುವ ಅವರು, ‘ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ’ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ’ ಎಂದು ಸಂತಸ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ‘ಹರ್ ಘರ್ ಗಂಗಾ’ ಯೋಜನೆಗೆ ಬಜೆಟ್’ನಲ್ಲಿ 12 ಸಾವಿರ ಕೋಟಿ ರೂ.ಮೀಸಲಿಟ್ಟಿದ್ದೇವೆ: ಸಿಎಂ ಬೊಮ್ಮಾಯಿ

‘ಶಿಲ್ಪಿಗಳ ತವರೂರು ಎಂದೇ ಖ್ಯಾತವಾಗಿರುವ ಕಾರ್ಕಳದ ಈದು ಗ್ರಾಮದ ತುಂಗ ಪೂಜಾರಿಯವರ ಭೂಮಿಯಲ್ಲಿದ್ದ ಶಿಲೆ ಆಯ್ಕೆಯಾಗಿದ್ದು, ಪೂರ್ತಿ ವಿಶ್ವವೇ ಈ ಶಿಲೆಯಿಂದ ರೂಪುಗೊಳ್ಳಲಿರುವ ಭಗವಾನ್ ಶ್ರೀರಾಮನ ದರ್ಶನ ಪಡೆಯಲಿದೆ ಎಂಬುದು ನಮ್ಮನ್ನು ಪುಳಕಿತರನ್ನಾಗಿ ಹಾಗೂ ಪುನೀತರನ್ನಾಗಿಸುವಂತಹದಾಗಿದೆ’ ಎಂದು ಸಚಿವ ಪ್ರಲ್ಹಾದ್ ಜೋಶಿ ಖುಷಿ ವ್ಯಕ್ತಪಡಿಸಿದ್ದಾರೆ.

‘ಈ ಸೇವೆ ಮಾಡುವ ಅವಕಾಶವನ್ನು ರಾಜ್ಯಕ್ಕೆ ನೀಡಿದ ಪ್ರಭು ಶ್ರೀರಾಮನಿಗೆ ಶಿರಸಾಷ್ಟಾಂಗ ನಮಸ್ಕಾರಗಳು. ಜೈ ಶ್ರೀರಾಮ’ ಎಂದು ಸಚಿವರು ಟ್ವೀಟ್ ಮಾಡಿದ್ದಾರೆ. ಇನ್ನು ಶ್ರೀರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ 2023ರ ಡಿಸೆಂಬರ್ ತಿಂಗಳೊಳಗೆ ಶ್ರೀ ರಾಮಮಂದಿರದ ಗರ್ಭಗುಡಿ ನಿರ್ಮಾಣ ಕಾರ್ಯ ಪೂರ್ಣಗೊಳಿಸುವ ಗುರಿ ಹೊಂದಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ: ಸಚಿವ ಎಸ್.ಟಿ.ಸೋಮಶೇಖರ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News