ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ

ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

Written by - Prashobh Devanahalli | Last Updated : Apr 23, 2024, 02:28 PM IST
  • ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ.
  • ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ
ಕಾಂಗ್ರೆಸ್ ರಾಜ್ಯದ ಖಜಾನೆ ಲೂಟಿ ಮಾಡಿದೆ : ಪ್ರಲ್ಹಾದ ಜೋಶಿ ಆರೋಪ title=

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತ ನಡೆಸಿ ಖಜಾನೆ ಲೂಟಿ ಮಾಡಿದ್ದು, ಸರ್ಕಾರ ಪಾಪರ್ ಆಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ (Union Minister Pralhad Joshi) ಆರೋಪಿಸಿದರು.

ಹುಬ್ಬಳ್ಳಿಯಲ್ಲಿ ಇಂದು ಮಾದ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ  ಪ್ರಲ್ಹಾದ ಜೋಶಿ, ಬರ ಪರಿಹಾರದಲ್ಲಿ  ಕಾಂಗ್ರೆಸ್ ಪಕ್ಷ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯಕ್ಕೆ ಬರ ಪರಿಹಾರ (Drought Relief) ಬಿಡುಗಡೆಗೆ ಚುನಾವಣೆ ಆಯೋಗದ ಅನುಮತಿ ಕೇಳಿದ್ದು, ಅದನ್ನು ಅವರಿಗೆ ತಿಳಿಸಲಾಗಿದೆ. ಆದರೆ, ಎಲ್ಲಾ ನಾವೇ ಕೊಡುವುದಾದರೆ ಇಲ್ಲಿ ಕಾಂಗ್ರೆಸ್ ಸರ್ಕಾರ ಏನು ಮಾಡುತ್ತಿದೆ? ಎಂದು ಪ್ರಶ್ನಿಸಿದರು.

ಇದನ್ನೂ ಓದಿ- ದೇವೆಗೌಡರನ್ನು ಪ್ರಧಾನಿ ಮಾಡಿದ್ದು ಕಾಂಗ್ರೆಸ್ ಪಕ್ಷ: ಕೃಷ್ಣಭೈರೇಗೌಡ

ರಾಜ್ಯದಲ್ಲಿ ಹಿಂದೆ ಬಿ‌ಎಸ್ ಯಡಿಯೂರಪ್ಪ  (BS Yeddyurappa) ಸಿಎಂ ಆಗಿದ್ದಾಗ ಕೇಂದ್ರದ ಅನುದಾನ ಕಾಯದೆ, 15000, 20000 ಬರ ಪರಿಹಾರ ನೀಡಿದ್ದಾರೆ. ಆದರೆ ನೀವೇನು ಮಾಡಿದ್ದೀರಿ ಸಿದ್ದರಾಮಯ್ಯ (Siddaramaia)  ಅವರೇ? ರೈತರಿಗೆ ಬರೀ 2000 ಕೊಟ್ಟು ಕೈ ತೊಳೆದುಕೊಂಡಿದ್ದೀರಿ ಎಂದು ಜೋಶಿ ಹರಿ ಹಾಯ್ದರು.

ಕೇಂದ್ರ ಸರ್ಕಾರಕ್ಕೆ (Central Govt) ಎಲ್ಲಾ ರಾಜ್ಯಗಳು ಒಂದೇ. ತಾರತಮ್ಯ ಮಾಡಿಲ್ಲ. ಎಲ್ಲಾ ರಾಜ್ಯಗಳನ್ನು ಒಂದೇ ತಕಡಿಯಲ್ಲಿ ತೂಗುತ್ತದೆ ಎಂದು ಕೇಂದ್ರದ ಕ್ರಮವನ್ನು ಸಮರ್ಥಿಸಿಕೊಂಡ ಸಚಿವ ಜೋಶಿ, ಕಾಂಗ್ರೆಸ್ ಪಕ್ಷ ಇದರಲ್ಲಿ ರಾಜಕಾರಣ ಮಾಡುತ್ತಿದೆ ಎಂದು ಕಿಡಿ ಕಾರಿದರು.

900 ಕೋಟಿ ಮುಂಗಡ: ಕೇಂದ್ರ ಸರ್ಕಾರ ಬರ ಪರಿಹಾರಕ್ಕಾಗಿ ರಾಜ್ಯಕ್ಕೆ ಮುಂಗಡವಾಗಿಯೇ 900 ಕೋಟಿ ರು. ಬಿಡುಗಡೆ ಮಾಡಿದೆ. ಯುಪಿಎ ಅವಧಿಗಿಂತ ಹೆಚ್ಚೇ ಅನುದಾನವನ್ನು ನಾವು ನೀಡಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಸ್ಪಷ್ಟಪಡಿಸಿದರು.

ಬಿ‌ಎಸ್‌ವೈ ನೀಡಿದಂತೆ ನಿಮ್ಮಿಂದೇಕೆ ಸಾಧ್ಯವಾಗಿಲ್ಲ?: 
ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ಕೇಂದ್ರದಿಂದ ಬರದಿದ್ದರೂ ಹೆಚ್ಚು ಬರ ಪರಿಹಾರ ನೀಡಿದ್ದು, ಈಗ ನಿಮ್ಮಿಂದೇಕೆ ಸಾಧ್ಯವಾಗುತ್ತಿಲ್ಲ? ಎಂದು ಪ್ರಶ್ನಿಸಿದರು ಸಚಿವ ಜೋಶಿ.

ಇದನ್ನೂ ಓದಿ- ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಮರಿತಿಬ್ಬೇಗೌಡ ವಾಗ್ದಾಳಿ

ಇದೇ ವಾರದಲ್ಲಿ ಮೋದಿ ಪ್ರಚಾರ: 
ಉತ್ತರ ಕರ್ನಾಟ ಭಾಗದಲ್ಲಿ ಇದೇ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು.

ಏ.28ರಂದು ಉತ್ತರ ಕನ್ನಡ ಪ್ರವಾಸ ಕೈಗೊಂಡಿದ್ದಾರೆ. ಉತ್ತರ ಕರ್ನಾಟ ಭಾಗದಲ್ಲೂ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News