ಫ್ರೀಡ್ಜ್‌ ನೀರು, ತಂಪು ಪಾನೀಯ ಬಳಕೆ ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು..?

ಕೋವಿಶೀಲ್ಡ್‌ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್‌ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್‌ಕ್ರೀಮ್‌ ಸೇವಿಸಬಾರದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. 

Written by - Puttaraj K Alur | Last Updated : May 4, 2024, 03:55 PM IST
  • ಫ್ರೀಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸುತ್ತೋಲೆ ಹೊರಡಿಸಿಲ್ಲ
  • ಚಿಕ್ಕಬಳ್ಳಾಪುರ ಕಾಲೇಜುಗಳ ಪ್ರಕಟಣೆ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ
  • ಇದು ಸತ್ಯಕ್ಕೆ ದೂರವಾದ ಮಾಹಿತಿ, ಸಾರ್ವಜನಿಕರು ಸುಳ್ಳು ಮಾಹಿತಿ ನಂಬಬೇಡಿ ಎಂದು ಹೇಳಿಕೆ
ಫ್ರೀಡ್ಜ್‌ ನೀರು, ತಂಪು ಪಾನೀಯ ಬಳಕೆ ಬಗ್ಗೆ ಆರೋಗ್ಯ ಇಲಾಖೆ ಹೇಳಿದ್ದೇನು..? title=
ಆರೋಗ್ಯ ಇಲಾಖೆಯಿಂದ ಸ್ಪಷ್ಟನೆ!

ಬೆಂಗಳೂರು: ಫ್ರೀಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಸುತ್ತೋಲೆ ಹೊರಡಿಸಿಲ್ಲವೆಂದು ರಾಜ್ಯ ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

ಕೋವಿಶೀಲ್ಡ್‌ ಲಸಿಕೆ ಬಗ್ಗೆ ಚಿಕ್ಕಬಳ್ಳಾಪುರದ ಸಿದ್ದರಾಮಯ್ಯ ಲಾ ಕಾಲೇಜು ಮತ್ತು ಡಾ. ಶ್ರೀ ಜಚನಿ ಪ್ರರ್ಥಮ ದರ್ಜೆ ಕಾಲೇಜುಗಳು ಪ್ರಕಟಣೆ ಹೊರಡಿಸಿದ್ದವು. ʼಕೋವಿಶೀಲ್ಡ್‌ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು, ದಿಢೀರ್‌ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುವುದಾಗಿ ವರದಿ ಆಗುತ್ತಿದೆ. ಹೀಗಾಗಿ ಆರೋಗ್ಯ ಇಲಾಖೆ ತಿಳಿಸಿರುವ ಮಾಹಿತಿ ಪ್ರಕಾರ, ವಿದ್ಯಾರ್ಥಿಗಳು, ಪೋಷಕರು ಫ್ರಿಡ್ಜ್‌ ನೀರು, ತಂಪು ಪಾನೀಯಗಳನ್ನು ಕುಡಿಯಬಾರದು. ಐಸ್‌ಕ್ರೀಮ್‌ ಸೇವಿಸಬಾರದುʼ ಎಂದು ತಿಳಿಸಲಾಗಿತ್ತು. 

ಇದನ್ನೂ ಓದಿ: Prajwal Revanna Case: ನಿಷ್ಪಕ್ಷಪಾತ ತನಿಖೆ ನಡೆಸಿ ಎಷ್ಟೇ ಪ್ರಭಾವಿಗಳು ಶಾಮೀಲಾಗಿದ್ದರೂ ಅವರನ್ನು ಕಾನೂನಿನ ಕೈಗೆ ಒಪ್ಪಿಸುತ್ತೇವೆ"

ಈ ಪ್ರಕಟಣೆ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಆರೋಗ್ಯ ಇಲಾಖೆ ಮತ್ತು ಚಿಕ್ಕಬಳ್ಳಾಪುರದ ಸರ್ವೇಕ್ಷಣ ಅಧಿಕಾರಿಗಳು ತಪ್ಪು ಮಾಹಿತಿ ನೀಡಿದ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಮುಂದಾಗಿದೆ. ಜಿಲ್ಲಾಧಿಕಾರಿ ನೇತೃತ್ವದ ಡಿಜಾಸ್ಟರ್‌ ಮ್ಯಾನೇಜ್‌ಮೆಂಟ್‌ ಕಮಿಟಿ ಕೋವಿಶೀಲ್ಡ್‌ ಬಗ್ಗೆ ಹೊರಡಿಸಿರುವ ಪ್ರಕಟಣೆ ಬಗ್ಗೆ ಸ್ಪಷ್ಟನೆ ನೀಡುವಂತೆ ನೋಟಿಸ್‌ ನೀಡಿದೆ. 

ಕಾಲೇಜುಗಳ ಆಡಳಿತ ಮಂಡಳೀ ಹೊರಡಿಸಿರುವ ಸೂಚನಾ ಪತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಯಾಗಿದೆ. ಈ ಸಂಬಂಧ ಪ್ರತಿಕ್ರಿಯಿಸಿರುವ ಆರೋಗ್ಯ ಇಲಾಖೆ ಸ್ಷಪ್ಟನೆ ನೀಡಿದ್ದು, ʼಇದು ಸತ್ಯಕ್ಕೆ ದೂರವಾದ ಮಾಹಿತಿ, ನಾವು ಯಾವುದೇ ಸುತ್ತೋಲೆಯನ್ನು ಹೊರಡಿಸಿಲ್ಲʼವೆಂದು ತಿಳಿಸಿದೆ. 

ಇದನ್ನೂ ಓದಿ: ಪೆನ್ ಡ್ರೈವ್ ವಿಚಾರದಲ್ಲಿ ಕುಮಾರಸ್ವಾಮಿ ಆಗಾಗ್ಗೆ ನಿಲುವು ಬದಲಿಸುತ್ತಿರುವುದೇಕೆ?: ಡಿಸಿಎಂ ಡಿ.ಕೆ. ಶಿವಕುಮಾರ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News