ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಸಾಗರೋತ್ತರ ಅಧ್ಯಯನ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪ್ರಬುದ್ದ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

Written by - Zee Kannada News Desk | Last Updated : Apr 13, 2023, 03:37 PM IST
  • ಈ ಸಂಬಂಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಈ ಯೋಜನೆಗಳ ಸದುಪಯೋಗ ಪಡೆಯಲು ಸೂಚಿಸಿದೆ
  • ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಬಹುದು
ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು:  ರಾಷ್ಟ್ರೀಯ ಸಾಗರೋತ್ತರ ಅಧ್ಯಯನ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಪ್ರಬುದ್ದ ಯೋಜನೆಯಡಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಇದನ್ನೂ ಓದಿ: MP Kumaraswamy: ಕೈ ತಪ್ಪಿದ್ದ ಟಿಕೆಟ್‌ : ಬಿಜೆಪಿಗೆ ರಾಜೀನಾಮೆ ನೀಡಿದ ಎಂ. ಪಿ ಕುಮಾರಸ್ವಾಮಿ !

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ, ಅಲೆಮಾರಿ ಹಾಗೂ ಅರೇ ಅಲೆಮಾರಿ ಬುಡಕಟ್ಟುಗಳು ಮತ್ತು ಭೂರಹಿತ ಕೃಷಿ ಕಾರ್ಮಿಕರು ಮತ್ತು ಸಾಂಪ್ರದಾಯಿಕ ಕುಶಲಕರ್ಮಿಗಳ ವರ್ಗದ ಅಭ್ಯರ್ಥಿಗಳಿಗೆ ವಿದೇಶಿ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಅಧ್ಯಯನ ಹಾಗೂ ಪಿ.ಹೆಚ್.ಡಿ ಅಧ್ಯಯನ ಮಾಡಲು ಕೇಂದ್ರ ವಲಯ ಯೋಜನೆ ಆದ ರಾಷ್ಟ್ರೀಯ ಸಾಗರೋತ್ತರ ವಿದ್ಯಾರ್ಥಿವೇತನ ಜಾರಿಗೊಳಿಸಲಾಗಿದೆ. ಈ ಸಂಬಂಧ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಈ ಯೋಜನೆಗಳ ಸದುಪಯೋಗ ಪಡೆಯಲು ಸೂಚಿಸಿದೆ.

ಇದನ್ನೂ ಓದಿ: ಬೆಂಗಳೂರಿನ ನಾಗರಿಕರೇ ಎಚ್ಚರ! ಈ ಬಾರಿಯ ಮಳೆಗೆ ನಿಮ್ಮ ಏರಿಯಾವು ನೀರಿನಿಂದ ಮುಳುಗಡೆ ಆಗಬಹುದು ಹುಷಾರ್..!!

ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಅಪರ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರುಗಳ ಕಚೇರಿ ಸಮಾಜ ಕಲ್ಯಾಣ ಇಲಾಖೆ ದೂ.ಸಂ-0836-2447201, 2440194, 2278066, 08370-284159, 08304-290464, 08380-229937 ಇಲ್ಲಿಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

Trending News