ಬರೀ ಈ ನೀರನ್ನು ಕುಡಿದು ನೋಡಿ 15 ದಿನಗಳಲ್ಲಿ ಸಣ್ಣಗಾಗುವುದು ಗ್ಯಾರಂಟಿ ! ಹಠಮಾರಿ ಬೊಜ್ಜು ಕೂಡಾ ಕರಗಿ ನೀರಾಗುವುದು !

Best Remedy to loose weight : ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಕೆಲವೇ ಕೆಲವು ದಿನಗಳಲ್ಲಿ ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು. ದೇಹದಲ್ಲಿರುವ ಹೆಚ್ಚುವರಿ ಬೊಜ್ಜನ್ನು ಕೂಡಾ ಕರಗಿಸಬಹುದು.

Weight loss Tips : ತೂಕ ಹೆಚ್ಚಾಗುತ್ತಿದೆ ಎಂದರೆ ದೇಹ ದಂಡನೆ ಮಾಡಿಕೊಂಡೇ ತೂಕವನ್ನು ಕಳೆದುಕೊಳ್ಳಬೇಕು ಎಂದೇನಿಲ್ಲ. ಕೆಲವು ಮನೆಮದ್ದುಗಳನ್ನು ಬಳಸುವ ಮೂಲಕ ಕೆಲವೇ ಕೆಲವು ದಿನಗಳಲ್ಲಿ ತೂಕವನ್ನು ಸುಲಭವಾಗಿ ಕಳೆದುಕೊಳ್ಳಬಹುದು. ದೇಹದಲ್ಲಿರುವ ಹೆಚ್ಚುವರಿ ಬೊಜ್ಜನ್ನು ಕೂಡಾ ಕರಗಿಸಬಹುದು. ಅಂಥದ್ದೇ ಒಂದು ಮನೆ ಮದ್ದಿನ ಬಗ್ಗೆ ನಾವಿಲ್ಲಿ ಮಾಹಿತಿ ನೀಡುತ್ತಿದ್ದೇವೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಕೆಲವು ಮಸಾಲೆಯನ್ನು ನಾವು ನಿತ್ಯದ ಅಡುಗೆಯಲ್ಲಿ ಬಳಸುತ್ತೇವೆ. ಅಂಥಹ ಮಸಾಲೆಯಲ್ಲಿ ಒಂದು ಜೀರಿಗೆ. ಜೀರಿಗೆ ಫೈಬರ್ ಮತ್ತು ಪೊಟ್ಯಾಸಿಯಮ್‌ನ ಉತ್ತಮ ಮೂಲವಾಗಿದೆ. ಜೀರಿಗೆ ಬೀಜಗಳನ್ನು ತಿನ್ನುವುದು ದೇಹದ  ರೋಗ ನಿರೋಧಕ ಶಕ್ತಿಯನ್ನು ಕೂಡಾ ಹೆಚ್ಚಿಸುತ್ತದೆ. ಜೊತೆಗೆ ಇದು ತೂಕ ನಷ್ಟದಲ್ಲಿ ಅತ್ಯಂತ  ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. 

2 /5

ಜೀರಿಗೆ ಮತ್ತು ಕರಿಬೇವಿನ ಎಲೆಯ ನೀರು ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಾತ್ರಿ ಒಂದು ಲೋಟ ನೀರಿಗೆ 1 ಚಮಚ ಜೀರಿಗೆ ಮತ್ತು 5-7 ಕರಿಬೇವಿನ ಎಲೆಗಳನ್ನು ಹಾಕಿಡಿ. ಬೆಳಿಗ್ಗೆ ಈ ನೀರನ್ನು ಫಿಲ್ಟರ್ ಮಾಡಿ  ಕುಡಿಯಿರಿ.ಪ್ರತಿದಿನ ಹೀಗೆ ಮಾಡುವುದರಿಂದ ತೂಕ ಕಳೆದುಕೊಳ್ಳುವುದು ಸಾಧ್ಯವಾಗುತ್ತದೆ. 

3 /5

ಜೀರಿಗೆ ಮತ್ತು ಕೊತ್ತಂಬರಿ ಎರಡೂ ತೂಕವನ್ನು ಕಡಿಮೆ ಮಾಡುವಲ್ಲಿ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಜೀರಿಗೆ ಮತ್ತು ಕೊತ್ತಂಬರಿ ಬೀಜಗಳನ್ನು ರಾತ್ರಿಯಿಡಿ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಈ ನೀರನ್ನು ಕುಡಿಯಬೇಕು. ಅಥವಾ ಜೀರಿಗೆ ಮತ್ತು ಕೊತ್ತಂಬರಿ ಬೀಜವನ್ನು ನೀರಿನಲ್ಲಿ ಹಾಕಿ ಕುದಿಸಿ ಕೂಡಾ ಆ ನೀರನ್ನು ಕುಡಿಯಬಹುದು.  

4 /5

ಜೀರಿಗೆಯಂತೆ, ನಿಂಬೆ ಕೂಡಾ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ . 2 ಚಮಚ ಜೀರಿಗೆ ಬೀಜಗಳನ್ನು ಒಂದು ಲೋಟ ನೀರಿನಲ್ಲಿ ನೆನೆಸಿಡಿ. ಬೆಳಿಗ್ಗೆ ಈ ನೀರನ್ನು ಚೆನ್ನಾಗಿ ಕುದಿಸಿ. ಈ ನೀರಿಗೆ ನಿಂಬೆ ರಸ ಬೆರೆಸಿ ಕುಡಿಯಿರಿ.ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿದರೆ  ಸುಲಭವಾಗಿ ತೂಕ ಕಡಿಮೆಯಾಗುತ್ತದೆ. 

5 /5

ಜೀರಿಗೆ, ನಿಂಬೆಯಂತೆ ಚಕ್ಕೆ ಕೂಡಾ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ. ಜೀರಿಗೆ ಮತ್ತು ಚಕ್ಕೆಯನ್ನು ನೀರಿನಲ್ಲಿ ಹಾಕಿ  ಕುದಿಸಿ ಆ ನೀರನ್ನು ಕುಡಿಯಬಹುದು. ಇದಕ್ಕಾಗಿ, 1 ಚಮಚ ಜೀರಿಗೆ ಮತ್ತು  ಚಕ್ಕೆ ತುಂಡುಗಳನ್ನು ಒಂದು ಲೋಟ ನೀರಿನಲ್ಲಿ ಹಾಕಿ ರಾತ್ರಿಯಿಡೀ ನೆನೆಸಿಡಬೇಕು. ಬೆಳಿಗ್ಗೆ ಅದೇ ನೀರನ್ನು ಕುದಿಸಿ ಕುಡಿಯಬೇಕು.  ( ಸೂಚನೆ: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ.)