ಶುಗರ್ ಫ್ಯಾಕ್ಟರಿ ʼಹಣೆಬರಹʼದ ಹಾಡಿಗೆ ಅರ್ಮಾನ್‌ ಮಲಿಕ್‌ ಧ್ವನಿ..!

Sugar factory movie : "ಶುಗರ್ ಫ್ಯಾಕ್ಟರಿ" ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ ಚಿತ್ರ. ಇದೀಗ ಈ ಚಿತ್ರದ ಮತ್ತೊಂದು ಸಾಂಗ್‌ ರಿಲೀಸ್‌ ಆಗಿದ್ದು, ಅರ್ಮಾನ್‌ ಮಲೀಕ್‌ ಧ್ವನಿಯಲ್ಲಿ ಅದ್ಭುತವಾಗಿ ಮೂಡಿ ಬಂದಿದೆ.

1 /6

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ "ಶುಗರ್ ಫ್ಯಾಕ್ಟರಿ" ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. 

2 /6

ರಾಘವೇಂದ್ರ ಕಾಮತ್ ಬರೆದಿರುವ "ಹಣೆಬರಹ" ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ.   

3 /6

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.   

4 /6

ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು, ಟೀಸರ್ ಹಾಗೂ ಟ್ರೇಲರ್ ಕೂಡ ಎಲ್ಲರ ಮನ ಗೆದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24 ರಂದು ತೆರೆಗೆ ಬರುತ್ತಿದೆ.   

5 /6

ಡಾರ್ಲಿಂಗ್ ಕೃಷ್ಣ ಈವರೆಗೂ ಅಭಿನಯಿಸಿರುವ ಎಲ್ಲಾ ಚಿತ್ರಗಳಿಗಿಂತ "ಶುಗರ್ ಫ್ಯಾಕ್ಟರಿ" ಅಪಾರವೆಚ್ಚದಲ್ಲಿ ನಿರ್ಮಾಣವಾಗಿರುವ ಚಿತ್ರ ಎನ್ನಲಾಗುತ್ತಿದೆ. ಅಭಿಮಾನಿಗಳು ಈ ಚಿತ್ರದ ಬಿಡುಗಡೆಗೆ ಕಾತುರದಿಂದ ಕಾಯುತ್ತಿದ್ದಾರೆ‌.    

6 /6

ಆರ್ ಗಿರೀಶ್ ನಿರ್ಮಿಸಿರುವ ಈ ಚಿತ್ರದಲ್ಲಿ  ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯರಾಗಿ ಸೋನಾಲ್ ಮಾಂತೆರೊ, ಅದ್ವಿತಿ ಶೆಟ್ಟಿ, ರುಹಾನಿ ಶೆಟ್ಟಿ ಕೃಷ್ಣ ಅವರಿಗೆ ನಾಯಕಿಯರಾಗಿ ನಟಿಸಿದ್ದಾರೆ. ರಂಗಾಯಣ ರಘು ಕೂಡ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ.