ಟೀಸರ್‌ನಿಂದಲೇ ಮೋಡಿಮಾಡಿದ "ದಿಲ್ ಖುಷ್" : ಚಿತ್ರತಂಡಕ್ಕೆ ಶುಭಕೋರಿದ ಡಾರ್ಲಿಂಗ್ ಕೃಷ್ಣ

ಯುವಪ್ರತಿಭೆ ರಂಜಿತ್ "ದಿಲ್ ಖುಷ್" ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ. "ದಿಲ್ ಖುಷ್" ಎಂದರೆ ನಾಯಕ - ನಾಯಕಿ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರ.

Dil kush : ರೊಮ್ಯಾಂಟಿಕ್ ಕಾಮಿಡಿ ಕಥಾಹಂದರದ ಜೊತೆಗೆ ನವೀರಾದ ಪ್ರೇಮಕಥೆಯ, ಪ್ರಮೋದ್ ಜಯ ನಿರ್ದೇಶಿಸಿರುವ "ದಿಲ್ ಖುಷ್" ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟೀಸರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.   

1 /6

"ದಿಲ್ ಖುಷ್" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಕೊಡಗಿನ ಸೋಮವಾರಪೇಟೆ,‌ ಶನಿವಾರಸಂತೆ ಮುಂತಾದ ಕಡೆ ಚಿತ್ರೀಕರಣ ನಡೆದಿದೆ.‌ "ದಿಲ್ ಖುಷ್" ಎಂದರೆ ನಾಯಕ - ನಾಯಕಿ ಹೆಸರು. ದಿಲ್ಮಯ ನಾಯಕಿಯ ಹೆಸರಾದರೆ, ಕುಷಾಲ್ ನಾಯಕನ ಹೆಸರು. ಮನೆಮಂದಿಯಲ್ಲಾ ಕುಳಿತು ನೋಡುವ ಈ ಕೌಟುಂಬಿಕ ಚಿತ್ರವಿದು ಎನ್ನುತ್ತಾರೆ ನಿರ್ದೇಶಕ ಪ್ರಮೋದ್ ಜಯ. 

2 /6

ಯುವಪ್ರತಿಭೆ ರಂಜಿತ್ "ದಿಲ್ ಖುಷ್" ಚಿತ್ರದ ನಾಯಕನಾಗಿ, ಸ್ಪಂದನ ಸೋಮಣ್ಣ ನಾಯಕಿಯಾಗಿ ಅಭಿನಯಿಸಿದ್ದಾರೆ.  ರಂಗಾಯಣ ರಘು, ಅರುಣಾ ಬಾಲರಾಜ್,  ರಘು ರಾಮನಕೊಪ್ಪ, ರವಿ ಭಟ್, ಧರ್ಮಣ್ಣ ಕಡೂರು,  ಸೂರ್ಯ ಪ್ರವೀಣ್ ಮುಂತಾದವರು ಪ್ರಮುಖಪಾತ್ರಗಳಲ್ಲಿ ನಟಿಸಿದ್ದಾರೆ.    

3 /6

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ನೀಡಿರುವ ಐದು ಹಾಡುಗಳು ಚಿತ್ರದಲ್ಲಿದೆ.     

4 /6

ನಿವಾಸ್ ನಾರಾಯಣ್ ಅವರ  ಛಾಯಾಗ್ರಹಣವಿರುವ ಈ ಚಿತ್ರಕ್ಕೆ  ಜ್ಞಾನೇಶ್ ಬಿ ಮಠದ್ ಸಂಕಲನ, ಹೈಟ್ ಮಂಜು ನೃತ್ಯ ನಿರ್ದೇಶನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.  

5 /6

ರಂಜಿತ್ "ದಿಲ್ ಖುಷ್" ಚಿತ್ರದ ನಾಯಕ, ಸ್ಪಂದನ ಸೋಮಣ್ಣ ನಾಯಕಿ

6 /6

ರಂಜಿತ್ "ದಿಲ್ ಖುಷ್" ಚಿತ್ರದ ನಾಯಕ, ಸ್ಪಂದನ ಸೋಮಣ್ಣ ನಾಯಕಿ