Highest Paid actors: ಅತಿಹೆಚ್ಚು ಸಂಭಾವನೆ ಪಡೆಯುವ ಕನ್ನಡ ಚಿತ್ರರಂಗದ ಟಾಪ್ ನಟರು

Highest Paid Top Five Sandalwood actors: ಬಾಲಿವುಡ್‍ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್‍ಡಮ್‍ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ. ​

Highest Paid Sandalwood actors: ಇಡೀ ಭಾರತ ಮಾತ್ರವಲ್ಲದೆ ವಿಶ್ವವೇ ತಿರುಗಿ ನೋಡುವಂತಹ ಸಿನಿಮಾಗಳು ಇದೀಗ ಕನ್ನಡ ಚಿತ್ರರಂಗದಲ್ಲಿ ತಯಾರಾಗುತ್ತಿವೆ. ಬಾಕ್ಸ್ ಆಫೀಸ್‍ನಲ್ಲಿ ಸಖತ್ ಸದ್ದು ಮಾಡುತ್ತಿರುವ ಕನ್ನಡ ಚಿತ್ರಗಳು ದೇಶ-ವಿದೇಶಗಳಲ್ಲಿಯೂ ಅಪಾರ ಮೆಚ್ಚುಗೆ ಪಡೆಯುತ್ತಿವೆ. ಇತ್ತೀಚಿನ ಬಹುತೇಕ ಚಿತ್ರಗಳು ಪ್ಯಾನ್ ಇಂಡಿಯಾ ಮಾದರಿಯಲ್ಲಿ ಬಿಡುಗಡೆಯಾಗುತ್ತಿವೆ. ಕನ್ನಡದ ಕೆಲವು ಸ್ಟಾರ್ ನಟರು ಪ್ಯಾನ್ ಇಂಡಿಯಾ ಮತ್ತು ನ್ಯಾಷನಲ್ ಸ್ಟಾರ್‍ಗಳಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಈ ಪೈಕಿ ರಾಕಿಂಗ್ ಸ್ಟಾರ್ ಯಶ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ ಮುಂತಾದವರು ಸೂಪರ್ ಡೂಪರ್ ಹಿಟ್ ಸಿನಿಮಾಗಳನ್ನು ನೀಡುತ್ತಿದ್ದಾರೆ. ಬಾಲಿವುಡ್‍ ಚಿತ್ರರಂಗಕ್ಕೆ ಸೆಡ್ಡು ಹೊಡೆಯುವಂತಹ ಸಿನಿಮಾಗಳು ಕನ್ನಡದಲ್ಲಿ ನಿರ್ಮಾಣವಾಗುತ್ತಿವೆ. ಹೀಗಾಗಿ ಕನ್ನಡದ ನಟರು ತಮ್ಮ ಸ್ಟಾರ್‍ಡಮ್‍ಗೆ ತಕ್ಕಹಾಗೆ ಸಂಭಾವನೆಯನ್ನು ಪಡೆಯತ್ತಿದ್ದಾರೆ. ಅತಿಹೆಚ್ಚು ಸಂಭಾವನೆ ಪಡೆಯುವ ಟಾಪ್ ಕನ್ನಡ ನಟರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ರಾಕಿಂಗ್ ಸ್ಟಾರ್ ಯಶ್.. ಕನ್ನಡದ ಸ್ಟಾರ್ ನಟ ಯಶ್ ಇದೀಗ ನ್ಯಾಷನಲ್ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕೆಜಿಎಫ್-1 ಮತ್ತು 2 ಸಿನಿಮಾಗಳ ಮೂಲಕ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಗುರುತಿಸಿಕೊಂಡ ಯಶ್ ಕನ್ನಡ ಚಿತ್ರರಂಗದಲ್ಲಿಯೇ ಅತಿಹೆಚ್ಚು ಸಂಭಾವನೆ ಪಡೆಯುವ ನಟನೆಂಬ ಹೆಗ್ಗಳಿಕೆ ಹೊಂದಿದ್ದಾರೆ. ಮಾಹಿತಿ ಪ್ರಕಾರ ಯಶ್ ಪ್ರತಿ ಸಿನಿಮಾಕ್ಕೆ 50ರಿಂದ 100 ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ.

2 /5

‘ಡಿ-ಬಾಸ್’ ಖ್ಯಾತಿಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸ್ಯಾಂಡಲ್‍ವುಡ್‍ನಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ 2ನೇ ಸ್ಥಾನದಲ್ಲಿದ್ದಾರೆ. ಇತ್ತೀಚೆಗೆ ‘ಕ್ರಾಂತಿ’ ಸಿನಿಮಾ ಮೂಲಕ ಮಿಂಚಿದ್ದ ದರ್ಶನ್ ಪ್ರತಿ ಚಿತ್ರಕ್ಕೆ 22 ರಿಂದ 26 ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ. ‘ಕ್ರಾಂತಿ’ ಯಶಸ್ಸಿನ ನಂತರ ದರ್ಶನ್ ಅವರು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ‘ಕಾಟೇರ’ದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.   

3 /5

ಅಭಿನಯ ಚಕ್ರವರ್ತಿ ಖ್ಯಾತಿಯ ನಟ ಕಿಚ್ಚ ಸುದೀಪ್ ಸ್ಯಾಂಡಲ್‌ವುಡ್‌ನಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರು. ‘ವಿಕ್ರಾಂತ್ ರೋಣ’ ಮತ್ತು ‘ಕಬ್ಜಾ’ ಚಿತ್ರಗಳ ಬಳಿಕ ಸುದೀಪ್ ಇತ್ತೀಚೆಗಷ್ಟೇ ಹೊಸ ಸಿನಿಮಾಗೆ ಸಹಿ ಹಾಕಿದ್ದಾರೆ. ಕಿಚ್ಚ ತನ್ನ ಪ್ರತಿ ಸಿನಿಮಾಗೆ ಸುಮಾರು 20-25 ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ.   

4 /5

ರಿಯಲ್ ಸ್ಟಾರ್ ಖ್ಯಾತಿಯ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಉಪೇಂದ್ರ ಯಶಸ್ವಿ ನಟ, ನಿರ್ದೇಶಕ, ನಿರ್ಮಾಪಕ, ಚಿತ್ರಕಥೆಗಾರ ಆಗಿ ಹೆಸರು ಗಳಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ನಟನೆ, ನಿರ್ದೇಶನದ ಮೂಲಕ ಹೆಸರು ಮಾಡಿರುವ ಉಪೇಂದ್ರ ಪ್ರತಿ ಸಿನಿಮಾಕ್ಕೆ 10-15 ಕೋಟಿ ರೂ. ಸಂಭಾವನೆ ಪಡೆಯುತ್ತಾರಂತೆ.

5 /5

ಕಳೆದ ವರ್ಷ ಅತಿದೊಡ್ಡ ಬ್ಲಾಕ್‌ಬಸ್ಟರ್ ‘ಕಾಂತಾರ’ ಸಿನಿಮಾ ನೀಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಇದೀಗ ನ್ಯಾಷನಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ‘ಕಾಂತಾರ’ ರಿಷಬ್ ಶೆಟ್ಟಿಗೆ ದೊಡ್ಡ ಯಶಸ್ಸು ನೀಡಿದೆ. ‘ಕಾಂತಾರ’ ಚಿತ್ರಕ್ಕೆ ರಿಷಬ್ 10 ಕೋಟಿ ರೂ.ಗೂ ಅಧಿಕ ಸಂಭಾವನೆ ಪಡೆದಿದ್ದಾರಂತೆ. ಈ ಸಿನಿಮಾ ಬಳಿಕ ತಮ್ಮ ಸಂಭಾವನೆ ಹೆಚ್ಚಿಸಿಕೊಂಡಿರುವ ರಿಷಬ್ ಪ್ರತಿ ಸಿನಿಮಾಗೆ 10-15 ಕೋಟಿ ರೂ. ಪಡೆಯುತ್ತಾರಂತೆ.