Okra For Weight Loss: ತೂಕ ಇಳಿಕೆಗೆ ಒಂದು ಪರಿಣಾಮಕಾರಿ ಮನೆಮದ್ದು ಈ ತರಕಾರಿ! ಈ ರೀತಿ ಬಳಸಿ

Lady Finger Benefits - ಬೆಂಡೆಕಾಯಿ ಸೇವನೆಯಿಂದ ಒಂದಲ್ಲ ಹಲವು ಲಾಭಗಳಿವೆ. ಒಂದು ವೇಳೆ ನಿಮಗೂ ಕೂಡ ಈ ತರಕಾರಿ ಇಷ್ಟವಿಲ್ಲ ಎಂದಾದರೆ, ಇಂದಿನಿಂದಲೇ ಬೆಂಡೆಕಾಯಿ ಸೇವನೆಯನ್ನು ಆರಂಭಿಸಿ.
 

Okra Health Benefits - ಬೆಂಡೆಕಾಯಿಯಲ್ಲಿ ಹೇರಳಪ್ರಮಾಣದಲ್ಲಿ ವಿಟಮಿನ್ ಸಿ ಕಂಡುಬರುತ್ತದೆ. ಒಂದು ವೇಳೆ ನೀವು ನಿತ್ಯ 100 ಗ್ರಾಂ ಬೆಂಡೆಕಾಯಿಯನ್ನು ಸೇವಿಸಿದರೆ, ನಿಮ್ಮ ದೇಹಕ್ಕೆ ಬೇಕಾಗುವ ಒಟ್ಟು ವಿಟಮಿನ್ ಸಿಯ ಶೇ.38 ರಷ್ಟು ಬೇಡಿಕೆ ಈಡೇರಲಿದೆ. ಎಲ್ಲರಿಗೂ ತಿಳಿದಿರುವಂತೆ, ವಿಟಮಿನ್-ಸಿ ಅನೇಕ ರೋಗಗಳು ಮತ್ತು ಸೋಂಕುಗಳಿಂದ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಸಹಾಯ ಮಾಡುತ್ತದೆ. 

 

ಇದನ್ನೂ ನೋಡಿ-

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬೆಂಡೆಕಾಯಿಯು ದೇಹಕ್ಕೆ ಪೋಷಕಾಂಶಗಳನ್ನು ಒದಗಿಸುವುದರ ಜೊತೆಗೆ ನಮ್ಮ ದೇಹದ ತೂಕವನ್ನು ಸಹ ನಿಯಂತ್ರಿಸುತ್ತದೆ. ಇದು ಒಂದು ಹಸಿರು ತರಕಾರಿಯಾಗಿದ್ದು, ಇದರ ಸೇವನೆಯಿಂದ ಹಲವು ರೋಗಗಳು ದೂರವಿರುತ್ತವೆ. ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹ ಇದು ಬಹಳ ಸಹಕಾರಿಯಾಗಿದೆ. ಮಧುಮೇಹ ರೋಗಿಗಳಿಗೂ ಕೂಡ ಬೆಂಡೆಕಾಯಿ ವರದಾನಕ್ಕಿಂತ ಕಡಿಮೆಯಿಲ್ಲ. ಹಾಗಾದರೆ ಬೆಂಡೆಕಾಯಿ ಸೇವನೆಯಿಂದಾಗುವ ಇತರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳೋಣ ಬನ್ನಿ.  

2 /5

ಬೆಂಡೆಕಾಯಿ ಸೇವನೆಯಿಂದ ತೂಕ ಇಳಿಕೆಯಾಗುತ್ತದೆ: ತೂಕ ಇಳಿಕೆಗೆ ಬೆಂಡೆಕಾಯಿ ತುಂಬಾ ಪ್ರಯೋಜನಕಾರಿಯಾಗಿದೆ.  ಈ ತರಕಾರಿಯಲ್ಲಿ ಫೈಬರ್ ಪ್ರಮಾಣವು ತುಂಬಾ ಅಧಿಕವಾಗಿರುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ಇದರ ಸೇವನೆಯು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಂದರೆ, ಈ ತರಕಾರಿಯಲ್ಲಿ ನೀವು ಹೆಚ್ಚಿನ ಕ್ಯಾಲೊರಿಗಳನ್ನು ಪಡೆಯುವುದಿಲ್ಲ ಮತ್ತು ಇದು ತೂಕ ಇಳಿಕೆಗೆ ಸಹಕಾರಿ ಸಾಬೀತಾಗುತ್ತದೆ..  

3 /5

ಕ್ಯಾನ್ಸರ್ ರೋಗಿಗಳಿಗೂ ಕೂಡ ಇದು ಪರಿಹಾರ ನೀಡುತ್ತದೆ: ಕ್ಯಾನ್ಸರ್ ನಂತಹ ಮಾರಕ ಕಾಯಿಲೆಯಲ್ಲಿಯೂ ಕೂಡ ಬೆಂಡೆಕಾಯಿ ಸೇವನೆ ತುಂಬಾ ಪ್ರಯೋಜನಕಾರಿಯಾಗಿದೆ. ಒಂದು ವೇಳೆ ಇದನ್ನು ನೀವು ನಿಮ್ಮ ನಿತ್ಯದ ಆಹಾರದಲ್ಲಿ ಶಾಮೀಲುಗೊಳಿಸಿದರೆ, ಅದು ನಿಮ್ಮ ಕರುಳಿನಲ್ಲಿರುವ ವಿಷಕಾರಿ ಅಂಶಗಳನ್ನು ತೆಗೆದುಹಾಕುತ್ತದೆ. ಅಂದರೆ, ಇದು ಕರುಳಿ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.  

4 /5

ಮಧುಮೇಹ ರೋಗಿಗಳಿಗೂ ಲಾಭಕಾರಿಯಾಗಿದೆ: ಮಧುಮೇಹ ರೋಗಿಗಳಿಗೆ ಬೆಂಡೆಕಾಯಿ ವರದಾನಕ್ಕಿಂತ ಕಡಿಮೆಯಿಲ್ಲ. ನೀವು ಕೂಡ ಬೆಂಡೆಕಾಯಿಯನ್ನು ನಿಮ್ಮ ಆಹಾರದಲ್ಲಿ ಶಾಮೀಲುಗೊಳಿಸಿದರೆ, ನಿಮ್ಮ ರಕ್ತದಲ್ಲಿನ ಸಕ್ಕರೆಯು ನಿಯಂತ್ರಣದಲ್ಲಿರುತ್ತದೆ. ಆದರೆ, ಗಂಭೀರ ರೋಗಲಕ್ಷಣಗಳನ್ನು ಹೊಂದಿರುವವರು ಬೆಂಡೆಕಾಯಿ  ಸೇವಿಸುವ ಮೊದಲು ತಮ್ಮ ವೈದ್ಯರನ್ನು ಸಂಪರ್ಕಿಸಬೇಕು.  

5 /5

(Disclaimer- ಆತ್ಮೀಯ ಓದುಗರೇ, ನಮ್ಮ ಸುದ್ದಿಯನ್ನು ಓದಿದ್ದಕ್ಕಾಗಿ ಧನ್ಯವಾದಗಳು. ಈ ಸುದ್ದಿಯನ್ನು ನಿಮ್ಮಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಮಾತ್ರ ಬರೆಯಲಾಗಿದೆ. ಇದನ್ನು ಬರೆಯುವಲ್ಲಿ ನಾವು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯ ಸಹಾಯವನ್ನು ಪಡೆದುಕೊಂಡಿದ್ದೇವೆ. ನಿಮ್ಮ ಆರೋಗ್ಯಕ್ಕೆ ಸಂಬಂಧಿಸಿದ ಯಾವುದೇ ಮಾಹಿತಿಯನ್ನು ನೀವು ಎಲ್ಲಾದರು ಓದಿದ್ದರೆ, ಅದನ್ನು ಅನುಸರಿಸುವ ಮುನ್ನ ವೈದ್ಯರನ್ನು ಅಥವಾ ವಿಷಯ ತಜ್ನರನ್ನು ಸಂಪರ್ಕಿಸಿ.)