IND vs BAN 1st Test: ಭಾರತ-ಬಾಂಗ್ಲಾ ಮೊದಲ ಟೆಸ್ಟ್: ಎಲ್ಲಿ, ಯಾವಾಗ ಮತ್ತು ಹೇಗೆ ವೀಕ್ಷಣೆ; ಇಲ್ಲಿದೆ ಸಂಪೂರ್ಣ ಡೀಟೆಲ್ಸ್

IND vs BAN 1st Test, Live Streaming: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ (ಬುಧವಾರ) ನಡೆಯಲಿದೆ. ಚಿತ್ತಗಾಂಗ್‌ ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ.

Written by - Bhavishya Shetty | Last Updated : Dec 13, 2022, 06:33 AM IST
    • ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿ
    • ಮೊದಲ ಪಂದ್ಯ ಡಿಸೆಂಬರ್ 14ರಿಂದ ಬಾಂಗ್ಲಾದ ಚಿತ್ತಗಾಂಗ್‌ನಲ್ಲಿ ನಡೆಯಲಿದೆ
    • ಸರಣಿಯ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಭಾರತವನ್ನು ಮುನ್ನಡೆಸಲಿದ್ದಾರೆ
IND vs BAN 1st Test: ಭಾರತ-ಬಾಂಗ್ಲಾ ಮೊದಲ ಟೆಸ್ಟ್: ಎಲ್ಲಿ, ಯಾವಾಗ ಮತ್ತು ಹೇಗೆ ವೀಕ್ಷಣೆ; ಇಲ್ಲಿದೆ ಸಂಪೂರ್ಣ ಡೀಟೆಲ್ಸ್ title=
India-Bangladesh Test

IND vs BAN 1st Test, Live Streaming: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 14ರಿಂದ ಬಾಂಗ್ಲಾದ ಚಿತ್ತಗಾಂಗ್‌ನಲ್ಲಿ ನಡೆಯಲಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಅಂತಿಮ ಪಂದ್ಯವು ಟೀಮ್ ಇಂಡಿಯಾಕ್ಕೆ ಬಹಳ ಮಹತ್ವದ್ದಾಗಿದೆ. ಸರಣಿಯ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಭಾರತವನ್ನು ಮುನ್ನಡೆಸಲಿದ್ದು, ಚೇತೇಶ್ವರ ಪೂಜಾರ ಉಪನಾಯಕರಾಗಿದ್ದಾರೆ. ಏಕದಿನ ಪಂದ್ಯದಲ್ಲಿ ಗಾಯಗೊಂಡ ಪರಿಣಾಮ ನಿಯಮಿತ ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ.

ಇದನ್ನೂ ಓದಿ: World Test Championship: ಪಾಕಿಸ್ತಾನದ ಸೋಲಿನಿಂದ ಟೀಂ ಇಂಡಿಯಾಗೆ ಲಾಭ: 10 ವರ್ಷಗಳ ಬಳಿಕ ಕೈಸೇರುತ್ತಾ ಐಸಿಸಿ ಟ್ರೋಫಿ!

ಇನ್ನು ಇಂಡೋ ಬಾಂಗ್ಲಾ ಮೊದಲ ಟೆಸ್ಟ್ ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ವೀಕ್ಷಿಸಬೇಕು ಎಂಬ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಸಂಪೂರ್ಣ ವಿವರ:

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 14 ರಿಂದ (ಬುಧವಾರ) ನಡೆಯಲಿದೆ. ಚಿತ್ತಗಾಂಗ್‌ ನ ಜಹುರ್ ಅಹ್ಮದ್ ಚೌಧರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿದೆ.

ಇನ್ನು ಸೋನಿ ಸ್ಪೋರ್ಟ್ಸ್ ಟೆನ್ 3, ಸೋನಿ ಸ್ಪೋರ್ಟ್ಸ್ ಟೆನ್ 3 ಎಚ್‌ಡಿ (ಹಿಂದಿ), ಸೋನಿ ಸ್ಪೋರ್ಟ್ಸ್ ಟೆನ್ 4, ಸೋನಿ ಸ್ಪೋರ್ಟ್ಸ್ ಟೆನ್ 4 ಎಚ್‌ಡಿ (ತಮಿಳು ಮತ್ತು ತೆಲುಗು), ಸೋನಿ ಸ್ಪೋರ್ಟ್ಸ್ ಟೆನ್ 5, ಸೋನಿ ಟೆನ್ 5 HD ಇಂಗ್ಲೀಷ್ ಮತ್ತು ಸೋನಿ ಸ್ಪೋರ್ಟ್ಸ್‌ನಲ್ಲಿ ಭಾರತ ವಿರುದ್ಧ ಬಾಂಗ್ಲಾದೇಶ ಮೊದಲ ಟೆಸ್ಟ್ ಪಂದ್ಯದ ನೇರ ಪ್ರಸಾರವನ್ನು ನೀವು ಕಾಣಬಹುದು.

ಇದರ ಜೊತೆಗೆ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯವನ್ನು ನೀವು 'ಸೋನಿ ಲೈವ್' OTT ನಲ್ಲಿ ವೀಕ್ಷಿಸಬಹುದು.

ಪಿಚ್ ರಿಪೋರ್ಟ್:

ಬಾಂಗ್ಲಾದೇಶದ ಪಿಚ್‌ಗಳು ಸ್ಪಿನ್ ಬೌಲರ್‌ಗಳಿಗೆ ಸಹಾಯ ಮಾಡಲಿದ್ದು, ಈ ಟೆಸ್ಟ್ ಪಂದ್ಯದಲ್ಲಿ ಭಾರತದ ಪರ ಅನುಭವಿ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ ಸ್ಪಿನ್ ವಿಭಾಗದ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ರವಿಚಂದ್ರನ್ ಅಶ್ವಿನ್ ಭಾರತ ಪರ 86 ಟೆಸ್ಟ್ ಪಂದ್ಯಗಳಲ್ಲಿ 442 ವಿಕೆಟ್ ಪಡೆದಿದ್ದಾರೆ.

ಭಾರತದ ಸಂಭಾವ್ಯ ಪ್ಲೇಯಿಂಗ್ 11:

ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್ ಮತ್ತು ನವದೀಪ್ ಸೈನಿ.

ಇದನ್ನೂ ಓದಿ: Team India Captaincy: ಸಚಿನ್ ಬಳಿ ಬಂದಿದ್ದ ನಾಯಕತ್ವ, ಧೋನಿ ಕೈಹಿಡಿದದ್ದು ಹೇಗೆ? ಇದಕ್ಕೆ ಸಂಪೂರ್ಣ ಕಾರಣ ಇವರೇ

ಮೊದಲ ಟೆಸ್ಟ್‌ಗೆ ಟೀಂ ಇಂಡಿಯಾ ತಂಡ:

ಕೆಎಲ್ ರಾಹುಲ್ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ರಿಷಭ್ ಪಂತ್ (ವಿಕೆಟ್ ಕೀಪರ್), ಕೆಎಸ್ ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್ ಉಮೇಶ್ ಯಾದವ್, ಅಭಿಮನ್ಯು ಈಶ್ವರನ್, ನವದೀಪ್ ಸೈನಿ, ಸೌರಭ್ ಕುಮಾರ್, ಜಯದೇವ್ ಉನದ್ಕತ್.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News