IPL 2023: ತಮ್ಮ ಸರ್ಜರಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಕೆ.ಎಲ್. ರಾಹುಲ್

KL Rahul: 2023ರ ಐಪಿಎಲ್‌ನಲ್ಲಿ ಫೀಲ್ಡಿಂಗ್ ಮಾಡುವ ವೇಳೆ ತೊಡೆಯ ಗಾಯಕ್ಕೆ ಒಳಗಾಗಿದ್ದ  ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಇದೀಗ ತಮ್ಮ ಸರ್ಜರಿ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.  

Written by - Yashaswini V | Last Updated : May 10, 2023, 02:19 PM IST
  • ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ವಿರುದ್ಧ ಫೀಲ್ಡಿಂಗ್ ಮಾಡುವಾಗ ಬಲ ತೊಡೆಗೆ ಗಾಯವಾಗಿತ್ತು.
  • ನಂತರ ಅವರಿಗೆ ಬಿಸಿಸಿಐ ವೈದ್ಯಕೀಯ ತಂಡ ಶಸ್ತ್ರಚಿಕಿತ್ಸೆ ಮಾಡಿಸುವಂತೆ ಸಲಹೆ ನೀಡಿತ್ತು.
  • ಗಾಯದ ಕಾರಣದಿಂದಾಗಿ ಐಪಿಎಲ್ ಮತ್ತು ನಂತರದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ICC WTC ಫೈನಲ್ 2023) ನಿಂದ ರಾಹುಲ್ ಹೊರಗುಳಿಯಲ್ಪಟ್ಟರು.
IPL 2023: ತಮ್ಮ ಸರ್ಜರಿ ಬಗ್ಗೆ ಬಿಗ್ ಅಪ್ಡೇಟ್ ನೀಡಿದ ಕೆ.ಎಲ್. ರಾಹುಲ್  title=
KL Rahul Health Update

IPL 2023 KL Rahul Surgery Update (ಕೆ‌ಎಲ್ ರಾಹುಲ್ ಸರ್ಜರಿ ಅಪ್‌ಡೇಟ್) :  ಐಪಿಎಲ್‌ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ) ಪರ ಆಡುತ್ತಿದ್ದ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಮತ್ತು  ಎಲ್‌ಎಸ್‌ಜಿ ನಾಯಕ ಕೆ‌.ಎಲ್. ರಾಹುಲ್  ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ತಮ್ಮ ಶಸ್ತ್ರ ಚಿಕಿತ್ಸೆ ಬಗ್ಗೆ ಬಿಗ್ ಅಪ್ಡೇಟ್ ನೀಡಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ತಮ್ಮ ಆರೋಗ್ಯದ ಬಗ್ಗೆ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿರುವ ಟೀಂ ಇಂಡಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಕೆ‌.ಎಲ್. ರಾಹುಲ್, "ಎಲ್ಲರಿಗೂ ನಮಸ್ಕಾರ, ನನ್ನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸದ್ಯ ನಾನು ಆರಾಮವಾಗಿದ್ದೇನೆ. ಎಲ್ಲವನ್ನೂ ಸುಸೂತ್ರವಾಗಿ ನಡೆಸಿಕೊಟ್ಟ, ನನ್ನ ಬಗ್ಗೆ ಹೆಚ್ಚು ಕಾಳಜಿ ವಹಿಸಿದ್ದಕ್ಕಾಗಿ  ವೈದ್ಯರು ಮತ್ತು ಎಲ್ಲಾ ವೈದ್ಯಕೀಯ ಸಿಬ್ಬಂದಿಗೆ ಧನ್ಯವಾದಗಳು. ಇದೀಗ ನಾನು ಚೇತರಿಕೆಯ ಹಾದಿಯಲ್ಲಿದ್ದೇನೆ. ಮತ್ತೆ ಸಾಧ್ಯವಾದಷ್ಟು ಬೇಗ ಫೀಲ್ಡ್ ಗೆ ಮರಳಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ" ಎಂದು ಅವರು ಈ ಪೋಸ್ಟ್ ನಲ್ಲಿ ಬರೆದಿದ್ದಾರೆ. 

ಇದನ್ನೂ ಓದಿ- ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ಗೆ ಕೆಎಲ್ ರಾಹುಲ್ ಬದಲಿಗೆ ಇಶಾನ್ ಕಿಶನ್ ಗೆ ಸ್ಥಾನ

ವಾಸ್ತವವಾಗಿ, ಐಪಿಎಲ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ)  ತಂಡದ ವಿರುದ್ಧ ಫೀಲ್ಡಿಂಗ್ ಮಾಡುವಾಗ ಬಲ ತೊಡೆಗೆ ಗಾಯವಾಗಿತ್ತು. ನಂತರ ಅವರಿಗೆ ಬಿಸಿಸಿಐ ವೈದ್ಯಕೀಯ ತಂಡ ಶಸ್ತ್ರಚಿಕಿತ್ಸೆ ಮಾಡಿಸುವಂತೆ ಸಲಹೆ ನೀಡಿತ್ತು. ಗಾಯದ ಕಾರಣದಿಂದಾಗಿ  ಐಪಿಎಲ್ ಮತ್ತು ನಂತರದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ICC WTC ಫೈನಲ್ 2023) ನಿಂದ ರಾಹುಲ್ ಹೊರಗುಳಿಯಲ್ಪಟ್ಟರು.

ಇದನ್ನೂ ಓದಿ- ಅಂದು Team India ವಿಶ್ವಕಪ್ ಗೆಲ್ಲುತ್ತಿದ್ದಂತೆ ವಕೀಲರ ಪುತ್ರಿಯನ್ನೇ ಪಟಾಯಿಸಿ ಮದುವೆಯಾಗಿದ್ದ ಈ ಆರಂಭಿಕ ಆಟಗಾರ!

ಗಮನಾರ್ಹವಾಗಿ, ಐಪಿಎಲ್‌ನಲ್ಲಿ ಕೆ.ಎಲ್. ರಾಹುಲ್ ನಾಯಕತ್ವದಲ್ಲಿ ಒಟ್ಟು 9 ಪಂದ್ಯಗಳಲ್ಲಿ ಆಡಿರುವ ಲಕ್ನೋ ಸೂಪರ್ ಜೈಂಟ್ಸ್ (ಎಲ್‌ಎಸ್‌ಜಿ)  5 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ರಾಹುಲ್ ಬಳಿಕ ಲಕ್ನೋ ತಂಡದ ನಾಯಕತ್ವವನ್ನು  ಕೃನಾಲ್ ಪಾಂಡ್ಯ ಅವರಿಗೆ ವಹಿಸಲಾಗಿದ್ದು ಇವರ ನಾಯಕತ್ವದಲ್ಲಿ ತಂಡ ಇದುವರೆಗೂ ಎರಡು ಪಂದ್ಯಗಳನ್ನು ಆಡಿದ್ದು ಎರಡರಲ್ಲೂ ಸೋಲು ಅನುಭವಿಸಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News