ನಗರದ ಖಾಸಗಿ ಹೋಟೆಲ್ ನಲ್ಲಿ ಎರಡು ದಿನಗಳು ನಡೆದ "Manthan" ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾಧ್ಯಮಗೋಷ್ಠಿ ನಡೆಸಿದ ಸಚಿವ ಗಡ್ಕರಿ, ರಾಜ್ಯ ಸರ್ಕಾರ ಜತೆ ನಡೆಸಿದ "Bengaluru de-congestion" ಸಭೆ ಕುರಿತು ವಿವರಣೆ ನೀಡಿದರು.
Tejaswi Surya : ನಗರದಲ್ಲಿ ಪ್ರವಾಹ ರೀತಿ ಪರಿಸ್ಥಿತಿ ಉಂಟಾಗಿದ್ದು, ಬೆಂಗಳೂರು ದಕ್ಷಿಣ ಲೋಕಸಭೆ ಸಂಸದ ತೇಜಸ್ವಿ ಸೂರ್ಯ ಇನ್ಸ್ಟಾಗ್ರಾಮ್ ನಲ್ಲಿ ದೋಸೆ ತಿನ್ನುತ್ತಿರುವ ವಿಡಿಯೋ ಪೋಸ್ಟ್ ಹಾಕಿದಕ್ಕೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಧಾರಾಕಾರ ಮಳೆ ಸುರಿಯುತ್ತಿದ್ದ ವೇಳೆ ವಿದ್ಯುತ್ ಕಂಬ ಟಚ್ ಆಗಿ ಕರೆಂಟ್ ಶಾಕ್ನಿಂದ ಯುವತಿ ಮೃತಪಟ್ಟಿರುವ ದಾರುಣ ಘಟನೆ ನಿನ್ನೆ ರಾತ್ರಿ ವೈಟ್ ಫೀಲ್ಡ್ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದಿದೆ.
ಬೆಂಗಳೂರಿನ ದಿಕ್ಕು ದಿಕ್ಕುಗಳಲ್ಲೂ ಮಳೆ ಅಲ್ಲೋಲ ಕಲ್ಲೋಲ ಸೃಷಿಸಿದೆ. ನಗರದೆಲ್ಲೆಡೆ ಇನ್ನೂ ಐದು ದಿನ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮೌಡ್ಯಕ್ಕೆ ಬಲಿಯಾದ ದಂಪತಿ ಮನೆಯಲ್ಲಿ ಸಾವಾಗುತ್ತೆ ಎಂದು ಹೇಳಿದನ್ನ ಬೆದರಿ ಎರಡು ಲಕ್ಷ ಮೌಲ್ಯದ ಚಿನ್ನಾಭರಣ ಕಳೆದುಕೊಂಡ ಘಟನೆ ಜ್ಞಾನಭಾರತಿಯಲ್ಲಿ ನಡೆದಿದೆ. ವರದರಾಜು ಎಂಬುವವರ ತಂದೆ ಇತ್ತೀಚೆಗೆ ಮೃತಪಟ್ಟಿದ್ದರು.
cobra promotion in bangalore : ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ಕೋಬ್ರಾ ರಿಲೀಸ್ ಗೆ ಸಜ್ಜಾಗಿದೆ. ಇದೇ 31ರಂದು ವಿಶ್ವಾದ್ಯಂತ ಚಿತ್ರ ತೆರೆಗಪ್ಪಳಿಸ್ತಿದ್ದು, ಈ ಹಿನ್ನೆಲೆ ಚಿತ್ರತಂಡ ಭರ್ಜರಿ ಪ್ರಮೋಷನ್ ನಡೆಸುತ್ತಿದೆ.
ಪ್ರತಿಷ್ಟಿತಾ ಮಾರುಕಟ್ಟೆಯಾದ ಕಲಾಸಿಪಾಳ್ಯ ಮಾರುಕಟ್ಟೆಯನ್ನ ಸ್ಥಳಾಂತರ ಮಾಡುವ ನಿರ್ಧಾರದ ಮೊದಲ ಭಾಗವಾಗಿ ಇಂದು ಪ್ರಕ್ರಿಯೆ ಪ್ರಾರಂಭ ಮಾಡಿದೆ. ಆನೇಕಲ್ ಸಮೀಪದ ಗೂಳಿಮಂಗಲ ಗ್ರಾಮದಲ್ಲಿ ಅತ್ಯಾಧುನಿಕ ತರಕಾರಿ ಮಾರುಕಟ್ಟೆ ನಿರ್ಮಾಣಕ್ಕೆ ನಿರ್ಧಾರ ಮಾಡಿದೆ.
ಬೆಂಗಳೂರಿನ ತ್ಯಾಗಿ ಸರ್ಕಲ್ ಪ್ಯಾಲೇಸ್ ಮಾಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. 40 ರಿಂದ 50 ಅಂಗಡಿಗಳಿರುವ ತ್ಯಾಗಿ ಸರ್ಕಲ್ ಪ್ಯಾಲೇಸ್ ಮಾಲ್ ನಲ್ಲಿ ಮಧ್ಯರಾತ್ರಿ ಸುಮಾರು 12.30ರ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ. ಎರಡು ಅಗ್ನಿಶಾಮಕ ದಳದ ವಾಹನಗಳಿಂದ ಅಗ್ನಿ ನಂದಿಸುವಲ್ಲಿ ಕಾರ್ಯ ನಡೆದಿದೆ.
ಬೆಂಗಳೂರಿನಲ್ಲಿ ಈ ಬಾರಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆಸಲಾಗ್ತಿದೆ. ಪಾದರಾಯನಪುರದಿಂದ ಟೌನ್ಹಾಲ್ವರೆಗೆ ಮೆರವಣಿಗೆಗೆ ತೀರ್ಮಾನ ಮಾಡಲಾಗಿದ್ದು, ಈ ಬಗ್ಗೆ ಗಣೇಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ರಾಜು ಮಾಹಿತಿ ನೀಡಿದ್ದಾರೆ.
SIIMA Awards 2022 : ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ "ಸೈಮಾ" ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10 ಹಾಗೂ 11ರಂದು ಬೆಂಗಳೂರಿನ ಅರಮನೆ ಆವರಣದಲ್ಲಿ ಅದ್ದೂರಿಯಾಗಿ ನಡೆಯಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.