ಬೇಸಿಗೆ ಸಂದರ್ಭದಲ್ಲಿ ಮಾತ್ರ ಬಿಯರ್ ಮಾರಾಟ ಚೇತರಿಕೆ ಕಾಣುತ್ತಿದ್ದ ಚಾಮರಾಜನಗರದಲ್ಲಿ ಈಗ ಬಿಯರ್ ಮಾರಾಟವೇ ಅಧಿಕವಾಗಿದ್ದು ಭಾರತೀಯ ಮದ್ಯಕ್ಕೆ ಹೋಲಿಸಿದರೇ ಬಿಯರ್ ಮಾರಾಟ ವೇಗ ಪಡೆದುಕೊಂಡಿದೆ.
Chamarajanagar Road accident: ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿ ಗ್ರಾಮದ ಹೊರವಲಯದ ರಸ್ತೆಯಲ್ಲಿ ಬೈಕ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲಿಯೇ ಬೈಕ್ ಸವಾರರಿಬ್ಬರು ದಾರುಣವಾಗಿ ಮೃತಪಟ್ಟಿರುವ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ.
ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವ ಸ್ಥಾನದಿಂದ ವಂಚಿತರಾಗಿದ್ದ ಚಾಮರಾಜನಗರ ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರಿಗೆ ನಿಗಮ ಮಂಡಲಿ ಅಧ್ಯಕ್ಷ ಸ್ಥಾನ ಕೊಡಲಾಗಿದೆ.ಮೈಸೂರು ಸೇಲ್ಸ್ ಇಂಟರ್ನ್ಯಾಷನಲ್ ಲಿಮಿಟೆಡ್ ನ ಅಧ್ಯಕ್ಷ ಸ್ಥಾನ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆದೇಶ ಹೊರಡಿಸಿದ್ದಾರೆ.
Crime News: ಕೊಳ್ಳೇಗಾಲ ತಾಲೂಕಿನ ಜಿನಕನಹಳ್ಳಿ ಗ್ರಾಮದ ಬಳಿ ದ್ವಿಚಕ್ರ ವಾಹನಕ್ಕೆ ಟ್ರ್ಯಾಕ್ಟರ್ನಲ್ಲಿ ಚಲಿಸುತ್ತಿದ್ದ ಕಟಾವು ಯಂತ್ರವು ಮುಖಾಮುಖಿ ಡಿಕ್ಕಿಯಾಗಿದೆ. ಪರಿಣಾಮ ಇಬ್ಬರು ಮಕ್ಕಳು ಸೇರಿ ನಾಲ್ವರು ಮೃತಪಟ್ಟಿದ್ದಾರೆ.
ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಡಾಂಬರೀಕರಣ ಮಾಡಿಸುವ ಉದ್ದೇಶದಿಂದ ಡಿ.18ರಿಂದ 20ರವರೆಗೆ ಮೂರು ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಹನೂರು ತಾಲೂಕಿನ ರಾಮಾಪುರದಿಂದ 6 ಕಿಮೀ ದೂರದ 50 ಅಡಿಗೂ ಅಧಿಕ ಕಂದಕದಲ್ಲಿ ಹಂತಕರು ಶವವನ್ನು ಟಾರ್ಪಾಲ್, ಬೆಡ್ ಶೀಟ್ ಹಾಕಿ ಮುಚ್ಚಿಟ್ಟಿದ್ದರು. ಬೆರಳಚ್ಚು ತಜ್ಞರು ಹಾಗೂ ಇನ್ನಿತರ ತಜ್ಞರು ಬಂದು ಸ್ಥಳ ಮಹಜರು ನಡೆಸಿ ಸಾಕ್ಷ್ಯಾಧಾರ ಕಲೆ ಹಾಕಿದ ಬಳಿಕ ಪೊಲೀಸರು ಹರಸಾಹಸ ಪಟ್ಟು ಶವವನ್ನು ಮೇಲಕ್ಕೆ ಎತ್ತಿದ್ದಾರೆ.
ರಾಮಾಪುರ ಪ್ರದೇಶದಲ್ಲಿ ಮಹದೇವಯ್ಯನವರ ಕಾರನ್ನು ಪೊಲೀಸರು ಪತ್ತೆ ಹಚ್ಚಿದ್ದರು. ಅದರಲ್ಲಿ ರಕ್ತದ ಕಲೆಗಳಿರುವುದು ಕಂಡುಬಂದಿತ್ತು. ಕಾರು ಪತ್ತೆಯಾದ ಬೆನ್ನಲ್ಲೇ ಖಾಕಿಪಡೆ ತನಿಖೆಯನ್ನು ಚುರುಕುಗೊಳಿಸಿತ್ತು. ಆದರೆ ಕೊಲೆಯಾದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಮಹಾದೇವಯ್ಯ ಅವರ ಕಾರ್ ಪತ್ತೆಯಾಗಿರುವ ಜಾಗದಲ್ಲಿ ಕಾರಿನ ಗಾಜು ಒಡೆದಿದ್ದು ರಕ್ತದ ಕಲೆಗಳು ಕೂಡ ಕಂಡು ಬಂದಿದೆ. ಚನ್ನಪಟ್ಟಣ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು ಬೆರಳಚ್ಚು ತಜ್ಞರು ಕಾರನ್ನು ಪರಿಶೀಲನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.