Lok Sabha Election 2024 : ಕಾಂಗ್ರೆಸ್ಅಭ್ಯರ್ಥಿ ಮತದಾರರಿಗೆ ಹಂಚಲು ಇರಿಸಲಾಗಿದ್ದ ಕುಕ್ಕರ್ಗಳ ಲೋಡ್ ಇದ್ದ ಲಾರಿಗಳ ಚಿತ್ರಗಳು, ವಿಡಿಯೋಗಳನ್ನು ಮಾಧ್ಯಮಗೋಷ್ಠಿಯಲ್ಲಿ ಬಿಡುಗಡೆ ಮಾಡಿದ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಕ್ರಮ ಕೈಗೊಳ್ಳುವಂತೆ ಕೇಂದ್ರ ಚುನಾವಣಾ ಆಯೋಗಕ್ಕೆ ಒತ್ತಾಯಿಸಿದರು.
Guarantee schemes: ಕೊಟ್ಟ ಮಾತಿನಂತೆ ನಡೆದುಕೊಂಡು ನಿಮ್ಮ ಓಟಿಗೆ ಗೌರವ ತಂದುಕೊಟ್ಟವರು ನಾವು: ಇದನ್ನು ನಿಮ್ಮ ಹೃದಯಕ್ಕೆ ಕೇಳಿಕೊಂಡು ತೀರ್ಮಾನಿಸಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
DK Shivakumar : ಬೆಂಗಳೂರಿನಲ್ಲಿ ಕುಡಿಯುವ ನೀರಿನ ಅಭಾವದ ಬಗ್ಗೆ ವಿರೋಧ ಪಕ್ಷಗಳು ರಾಜಕೀಯ ಟೀಕೆ ಬಿಟ್ಟು ರಚನಾತ್ಮಕ ಸಲಹೆ ಕೊಟ್ಟರೆ ಸ್ವೀಕರಿಸಲು ಸಿದ್ಧ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
DK Shivakumar : ನಾವು ಕೇವಲ ಅಭ್ಯರ್ಥಿಗಳ ಹೆಸರನ್ನು ಪ್ರಸ್ತಾಪ ಮಾಡುತ್ತೇವೆ ಅಷ್ಟೇ. ನಮ್ಮ ಪಕ್ಷದ ಸಿಇಸಿ ಸಮಿತಿ ಸದಸ್ಯರು ಅವರದೇ ಆದ ಮೂಲಗಳಿಂದ ಮಾಹಿತಿ ಪಡೆದುಕೊಂಡಿರುತ್ತಾರೆ. ಇವರೆಲ್ಲ ಸೇರಿ ಚರ್ಚೆ ಮಾಡಿ ತೀರ್ಮಾನ ಮಾಡುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದರು.
ರಾಜ್ಯದ 28 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡುತ್ತೀರಾ ಎಂದು ಕೇಳಿದಾಗ, "ಒಂದೇ ಹಂತದಲ್ಲಿ ಪಟ್ಟಿ ಬಿಡುಗಡೆ ಮಾಡಲು ಆಗುವುದಿಲ್ಲ. ಒಂದೆರಡು ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡುತ್ತೇವೆ" ಎಂದು ತಿಳಿಸಿದರು.
ಕಾಂಗ್ರೆಸ್ ನಾಯಕರ ಕೊಲೆ ಬೆದರಿಕೆ ಮೇಲ್ ವಿಚಾರ
ಮೇಲ್ ಬಂದಿದೆ ಅದನ್ನು ನಾವು ಕಳಿಸಿ ಕೊಟ್ಟಿದ್ದೇವೆ
ತನಿಖೆ ಆಗುತ್ತೆ ರಾಜ್ಯವನ್ನು ಸುಭೀಕ್ಷವಾಗಿ ಇಡಬೇಕು
ತುಮಕೂರಿನಲ್ಲಿ ಕಾಡಸಿದ್ದೇಶ್ವರ ಮಠದಲ್ಲಿ ಡಿಕೆಶಿ ಹೇಳಿಕೆ
ನಿನ್ನೆ ಬಿಜೆಪಿ ಇಂದು ಕಾಂಗ್ರೆಸ್ ನಾಯಕರ 'ಲೋಕ'ತಂತ್ರ
ಕುಂದಾನಗರಿ ಕಬ್ಜ ಮಾಡಿಕೊಳ್ಳಲು ಕಾಂಗ್ರೆಸ್ ನಾಯಕರ ಪ್ಲಾನ್
ಇಂದು ಕುಂದಾನಗರಿ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮನ
ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿರು ಸಿಎಂ ಸಿದ್ದರಾಮಯ್ಯ
DK Shivakumar : ಮಂಡ್ಯದಲ್ಲಿ ಬಿಜೆಪಿ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾಗ ಬಿಜೆಪಿ ಸರ್ಕಾರ ಅವರನ್ನು ಯಾಕೆ ಬಂಧನ ಮಾಡಲಿಲ್ಲ? ಬಿಜೆಪಿಯವರು ಕೇಸರಿ ಶಾಲು ಹಾಕಿ ಘೋಷಣೆ ಕೂಗಿದ್ದರು ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನ ಪರಿಸ್ಥಿತಿಯನ್ನು ಕಂಡು ಕೇಂದ್ರ ಸರ್ಕಾರ ಈಗಲಾದರೂ ಮೇಕೆದಾಟು ಯೋಜನೆಗೆ ಅನುಮತಿ ನೀಡಿ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.
DCM DK Shivakumar Statement: ಪಾಕ್ ಪರ ಘೋಷಣೆ ಪ್ರಕರಣದಲ್ಲಿ ಪೊಲೀಸರಿಗೆ ತನಿಖೆ ನಡೆಸಲು ಸ್ವಾತಂತ್ರ್ಯ ನೀಡಿದ್ದೇವೆ. ಈ ಬಗ್ಗೆ ಗೃಹಸಚಿವರು ಹೇಳಿಕೆ ನೀಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ ಎಂದು ನಮ್ಮ ರಾಜ್ಯಸಭಾ ಸದಸ್ಯರು ಕೂಡ ಅವತ್ತೇ ಹೇಳಿಕೆ ನೀಡಿದ್ದಾರೆ.
ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7 ತಾರೀಕಿನ ವೇಳೆಗೆ ನೋಂದಣಿ ಮಾಡಿಸದಿದ್ದರೆ ಸೀಜ್ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಖಡಕ್ ಎಚ್ಚರಿಕೆ ನೀಡಿದರು.
ನಾವು ಮಾಡುವ ನೀರಾವರಿ ಯೋಜನೆ, ಕುಡಿಯುವ ನೀರಿನ ಯೋಜನೆ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಏಕೆ ಮಾಡಲಿಲ್ಲ? ಕೇವಲ ನಿಮ್ಮನ್ನು ಭಾವನಾತ್ಮಕವಾಗಿ ಮರುಳು ಮಾಡಿದರೆ ಸಾಕಾ? ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ
2013-2018 ರ ಅವಧಿಯಲ್ಲಾಗಲೀ, ಎರಡನೇ ಬಾರಿ CM ಆಗಿರುವ ಅವಧಿಯಲ್ಲಾಗಲೀ LOC ಗೆ ಐದು ಪೈಸೆ ಲಂಚ ಯಾರಾದರೂ ನನಗೆ ಕೊಟ್ಟಿದ್ದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಿಎಂ ಸಿದ್ದರಾಮಯ್ಯ ಸವಾಲು
DK Shivakumar: ಕುಡಿಯುವ ನೀರಿನ ದಂಧೆ ತಡೆಯಲು ಕೊಳವೆಬಾವಿ ಹಾಗೂ ಅವುಗಳಿಂದ ನೀರು ಪೂರೈಕೆ ಮಾಡುವ ಟ್ಯಾಂಕರ್ ಗಳು ಮಾ.7 ರ ಒಳಗಾಗಿ ನೋಂದಣಿ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದೇವೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.