ಚುನಾವಣೆಗಳನ್ನು ಸುಗಮ ಮತ್ತು ಸುಲಲಿತವಾಗಿ ನಡೆಸಲು ಕೇಂದ್ರ ಚುನಾವಣಾ ಆಯೋಗ ಹಲವು ಆಪ್ ಗಳನ್ನು ಸಿದ್ಧಪಡಿಸಿದ್ದು, ಮುಕ್ತ ಮತ್ತು ನ್ಯಾಯ ಸಮ್ಮತ ನಡೆಸಲು ಆಪ್ಗಳು ಚುನಾವಣಾ ಪ್ರಕ್ರಿಯೆಯನ್ನು ಸುಲಭಗೊಳಿಸಿದೆ. ಮೊಬೈಲ್ ತಂತ್ರಜ್ಞಾನದಿಂದ ಸಾರ್ವಜನಿಕರು ಕೂತಲ್ಲಿಯೇ ತಮ್ಮ ಅಂಗೈಯಲ್ಲಿ ಮತದಾರ ಗುರುತಿನ ಚೀಟಿ ಬಗ್ಗೆ ಇರುವ ಸಂದೇಹ, ಚುನಾವಣೆ ಪ್ರಕ್ರಿಯೆ, ತಮ್ಮ ವ್ಯಾಪ್ತಿಯ ಅಭ್ಯರ್ಥಿಗಳ ಮಾಹಿತಿ ಸಂಬಂಧಿಸಿದಂತೆ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ನ್ಯಾಯಸಮ್ಮತ ಮತ್ತು ಪಾರದರ್ಶಕ ಚುನಾವಣೆಗಳನ್ನು ನಡೆಸಲು ಸಾರ್ವಜನಿಕರ ಪಾತ್ರ ಅತ್ಯಮೂಲ್ಯವಾಗಿದೆ. ಅದೇರೀತಿಯಾಗಿ ಮುಕ್ತ, ಪಾರದರ್ಶಕ ಚುನಾವಣೆ ನಡೆಸಲು ಮತ್ತು ಚುನಾವಣಾ ಅಕ್ರಮ ತಡೆಯಲು ಭಾರತದ ಚುನಾವಣಾ ಆಯೋಗವು ಸಿ-ವಿಜಿಲ್ (C-Vigil) ಮೊಬೈಲ್ ಅಪ್ಲಿಕೇಶನ್ ಅನ್ನು ಅಭಿವೃದ್ಧಿಪಡಿಸಿದೆ.
ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಕ್ರಮ ಅಧಿಕಾರದ ದುರುಪಯೋಗ ಮಾತ್ರವಲ್ಲ ವಿರೋಧ ಪಕ್ಷಗಳನ್ನು ಹಣಿಯುವ ಸರ್ವಾಧಿಕಾರಿ ನಡೆಯಾಗಿದೆ. ಕಾನೂನುಬಾಹಿರವಾದ ಈ ಕ್ರಮವನ್ನು ತಕ್ಷಣ ಹಿಂದಕ್ಕೆ ಪಡೆಯುವಂತೆ ಚುನಾವಣಾ ಆಯೋಗ ಕೇಂದ್ರ ಸರ್ಕಾರಕ್ಕೆ ನಿರ್ದೆಶನ ನೀಡಬೇಕು ಎಂದು ಆಗ್ರಹಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗ ಈಗ ಲೋಕಸಭಾ ಚುನಾವಣೆ ದಿನಾಂಕ ಘೋಷಣೆ ಮಾಡಿರುವ ಬೆನ್ನಲ್ಲೇ ಪಕ್ಷಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಬ್ಯುಸಿಯಾಗಿವೆ. ಅಷ್ಟೇ ಅಲ್ಲದೆ ಗೆಲುವಿಗಾಗಿ ಹೊಸ ರಣತಂತ್ರವನ್ನು ರೂಪಿಸುತ್ತಿವೆ.ಒಟ್ಟು ಏಳು ಹಂತಗಳಲ್ಲಿ ನಡೆಯುವ ಚುನಾವಣೆ ಹಲವು ಆಸಕ್ತಿಕರ ಸಂಗತಿಗಳಿಗೆ ಈ ಬಾರಿ ಸಾಕ್ಷಿಯಾಗಲಿದೆ.
Lok Sabha Election 2024: ಲೋಕಸಭೆ ಚುನಾವಣೆಗೆ ಇಂದು ಚುನಾವಣಾ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ಮೊದಲ ಹಂತದ ಚುನಾವಣೆ ನಡೆಯಲಿರುವ 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ.
Lokasabha Election 2024:ಮಹಾರಾಷ್ಟ್ರದಲ್ಲಿ ನಿಯೋಜಿಸಲಾದ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರು ಮತ್ತು ಹೆಚ್ಚುವರಿ ಆಯುಕ್ತರು ಅಥವಾ ಇತರ ನಿಗಮಗಳ ಉಪ ಆಯುಕ್ತರನ್ನು ಸಮಾನವಾಗಿ ವರ್ಗಾಯಿಸಲು ಮುಖ್ಯ ಕಾರ್ಯದರ್ಶಿಗೆ ಸೂಚಿಸಲಾಗಿದೆ.
Electoral Bond SC Hearing: ಚುನಾವಣಾ ಬಾಂಡ್’ಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಹಸ್ತಾಂತರಿಸುವಂತೆ SBIಗೆ ಆದೇಶ ನೀಡಲಾಗಿದೆ ಎಂದು ವಿಚಾರಣೆಯ ಸಂದರ್ಭದಲ್ಲಿ ಸಿಜೆಐ ಹೇಳಿದರು. ಆದರೆ SBI ಚುನಾವಣಾ ಬಾಂಡ್ ಸಂಖ್ಯೆಯ ಬಗ್ಗೆ ಮಾಹಿತಿ ನೀಡಿಲ್ಲ. ಈ ಹಿನ್ನೆಲೆಯಲ್ಲಿ SBIಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದ್ದು, ಸೋಮವಾರದೊಳಗೆ ಉತ್ತರ ನೀಡುವಂತೆ ಸೂಚಿಸಲಾಗಿದೆ.
ಯುವಜನತೆಯನ್ನು ಮತದಾನ ಮಾಡುವಂತೆ ಪ್ರೇರೇಪಿಸಲು ಭಾರತೀಯ ಚುನಾವಣಾ ಆಯೋಗ ದೇಶಕ್ಕಾಗಿ ನನ್ನ ಮೊದಲ ಮತ ಎಂಬ ಅಭಿಯಾನವನ್ನು ಹಮ್ಮಿಕೊಂಡಿದೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಈ ಅಭಿಯಾನದ ಮೂಲಕ ಯುವಜನತೆಯನ್ನು ವಿಶೇಷವಾಗಿ ಮೊದಲ ಬಾರಿ ಮತದಾನ ಮಾಡುತ್ತಿರುವವರು ಪ್ರಜಾಪ್ರಭುತ್ವದ ಈ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ದೇಶ ಕಟ್ಟುವಲ್ಲಿ ಕೊಡುಗೆ ನೀಡುವಂತೆ ಜಾಗೃತಿ ಮೂಡಿಸಲಾಗುತ್ತಿದೆ.
Lok Sabha Elections 2024 Schedule:MCC ಅಡಿಯಲ್ಲಿ, ರಾಜಕೀಯ ಪಕ್ಷಗಳು ಮತ್ತು ಅಭ್ಯರ್ಥಿಗಳು ಅನುಸರಿಸಬೇಕಾದ ಕೆಲವು ನಿಯಮಗಳಿವೆ. ಈ ನಿಯಮಗಳು ಉಲ್ಲಂಘನೆಯಾದಲ್ಲಿ ಚುನಾವಣಾ ಆಯೋಗ ಕಠಿಣ ಕ್ರಮ ಕೈಗೊಳ್ಳುತ್ತದೆ.
Lok Sabha Election Date: ಚುನಾವಣಾ ಆಯೋಗವು ಲೋಕಸಭಾ ಚುನಾವಣಾ ವೇಳಾಪಟ್ಟಿಯನ್ನು ಘೋಷಿಸಲು ಸಮಯ ನಿಗದಿಪಡಿಸಿದೆ. ಈ ಕುರಿತಂತೆ ಚುನಾವಣಾ ಆಯೋಗವು ಸಾಮಾಜಿಕ ಮಾಧ್ಯಮದ ಲೈವ್ ಸ್ಟ್ರೀಮ್ಗಳ ಮೂಲಕ ಸಾರ್ವತ್ರಿಕ ಚುನಾವಣೆಗಳು ಮತ್ತು ರಾಜ್ಯ ವಿಧಾನಸಭೆಗಳ ವೇಳಾಪಟ್ಟಿಯನ್ನು ಪ್ರಕಟಿಸಲಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಸಮಿತಿಯು ಘೋಷಿಸಿದಂತೆ ಮಾಜಿ ಅಧಿಕಾರಿ ಸುಖಬೀರ್ ಸಿಂಗ್ ಸಂಧು ಮತ್ತು ಜ್ಞಾನೇಶ್ ಕುಮಾರ್ ಅವರನ್ನು ನೂತನ ಚುನಾವಣಾ ಆಯುಕ್ತರಾಗಿ ಆಯ್ಕೆ ಮಾಡಲಾಗಿದ್ದು, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಗುರುವಾರ ಆಯ್ಕೆಯನ್ನು ಖಚಿತಪಡಿಸಿದ್ದಾರೆ.
Electoral Bonds: ಭಾರತದ ಸರ್ಕಾರಿ ವಲಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಎಲೆಕ್ಟೋರಲ್ ಬಾಂಡ್ ಎಂದರೆ ಚುನಾವಣಾ ಬಾಂಡ್ ಯೋಜನೆಯ ಡೇಟಾವನ್ನು ಚುನಾವಣಾ ಆಯೋಗಕ್ಕೆ (ಇಸಿ) ಸಲ್ಲಿಸಿದೆ.
Voter List: ಮತದಾರರು ತಮ್ಮ ಮತದಾರರ ಮಾಹಿತಿಯನ್ನು (ಹೆಸರು, ತಂದೆಯ ಹೆಸರು, ಸಂಬAಧ, ಲಿಂಗ, ಜನ್ಮ ದಿನಾಂಕ ವಿಳಾಸ ಮತ್ತು ಪೋಟೊ) ಪರಿಶೀಲಿಸಿಕೊಂಡು ಖಾತರಿಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಭಾರತ ಚುನಾವಣಾ ಆಯೋಗವು, ಲೋಕಸಭಾ ಸಾರ್ವತ್ರಿಕ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ ಜನೆವರಿ 1. 2024ರ ಅರ್ಹತಾ ದಿನಾಂಕದ ಮತದಾರರ ಪಟ್ಟಿ ಪರಿಷ್ಕರಣೆಯ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.