ರಾಂಚಿಯಲ್ಲಿ ಭಾನುವಾರ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಟೆಸ್ಟ್ ಮತ್ತು ಏಕದಿನ ಕ್ರಿಕೆಟ್ನಲ್ಲಿ ದ್ವಿಶತಕ ಬಾರಿಸಿದ 4 ನೇ ಬ್ಯಾಟ್ಸ್ಮನ್ ಎನಿಸಿಕೊಂಡರು.
India vs South Africa: ಎರಡನೇ ಟೆಸ್ಟ್ನಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಒಂದು ಇನ್ನಿಂಗ್ಸ್ ಮತ್ತು 137 ರನ್ಗಳಿಂದ ಸೋಲಿಸಿತು. ಈ ಮೂಲಕ ಭಾರತ ಸರಣಿಯಲ್ಲಿ 2–0 ಮುನ್ನಡೆ ಸಾಧಿಸಿದೆ.
ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ನಲ್ಲಿ ದಕ್ಷಿಣ ಆಫ್ರಿಕಾ ತಂಡವು ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ 275 ರನ್ ಗಳಿಗೆ ಸರ್ವ ಪತನ ಕಂಡಿದೆ. ಆ ಮೂಲಕ ಭಾರತ ತಂಡ ಈಗ 326 ರನ್ ಗಳ ಮುನ್ನಡೆಯನ್ನು ಕಾಯ್ದುಕೊಂಡಿದೆ.
ಪುಣೆಯಲ್ಲಿನ ಎಂಸಿಎಎಸ್ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಮಾಯಂಕ್ ಅಗರವಾಲ್ ಅವರ ಶತಕ(108) ರನ್ ಗಳ ನೆರವಿನಿಂದಾಗಿ ಭಾರತ ಮೂರು ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿದೆ.
ವಿಶಾಖ್ ಪಟ್ಟಣದ ವೈ.ಎಸ್.ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭಾರತ ಎರಡನೇ ಇನಿಂಗ್ಸ್ ನಲ್ಲಿ ಮೂರು ವಿಕೆಟ್ ನಷ್ಟಕ್ಕೆ 243 ರನ್ ಗಳಿಸಿದೆ.
ವಿಶಾಖ್ ಪಟ್ಟಣದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತದ ಆಲ್ ರೌಂಡರ್ ರವೀಂದ್ರ ಜಡೇಜಾ ತಮ್ಮ 200 ನೇ ಟೆಸ್ಟ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ 10ನೇ ಭಾರತೀಯ ಬೌಲರ್ ಎನಿಸಿಕೊಂಡರು.
ವಿಶಾಖ್ ಪಟ್ಟಣದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮಾಯಾಂಕ್ ಅಗರ್ವಾಲ್ ತಮ್ಮ ಚೊಚ್ಚಲ ಟೆಸ್ಟ್ ಶತಕವನ್ನು ದ್ವಿಶತಕಕ್ಕೆ ಪರಿವರ್ತಿಸಿದ ನಂತರ 502 /7 ಕ್ಕೆ ನಾಯಕ ವಿರಾಟ್ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಘೋಷಿಸಿದರು.
ದಕ್ಷಿಣ ಆಫ್ರಿಕಾ ಅತ್ಯಂತ ಅಪಾಯಕಾರಿ ತಂಡ. ಕೆಲ ಪ್ರಮುಖ ಆಟಗಾರರು ಇಂಜ್ಯುರಿಗಳಿಂದಾಗಿ ತಂಡದಿಂದ ಹೊರಗುಳಿದಿರುಬಹುದು, ಆದರೆ ತಂಡದ ಯುವ ಆಟಗಾರರನ್ನು ಕಡೆಗಣಿಸುವಂತಿಲ್ಲ ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.