Lok Sabha Election 2024: ಗ್ಯಾರಂಟಿ ಗ್ಯಾರಂಟಿ ಎನ್ನುತ್ತಾ ರಾಜ್ಯ ಸರ್ಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ರಾಜ್ಯದಲ್ಲಿ ಒಂದೇ ಒಂದು ಅಭಿವೃದ್ಧಿ ಕಾರ್ಯ ಕೈಗೊಂಡಿಲ್ಲ. ಕಡೇ ಪಕ್ಷ ರಸ್ತೆಗಳಿಗೆ ಒಂದು ಬುಟ್ಟಿ ಮಣ್ಣು ಸಹ ಹಾಕಿಲ್ಲವೆಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದರು.
BJP complaint against Yatindra Siddaramaiah: ಕೇಂದ್ರ ಗೃಹ ಸಚಿವ ಅಮಿತ್ ಶಾ ಒಬ್ಬ ಗೂಂಡಾ, ರೌಡಿ, ಗುಜರಾತ್ನಲ್ಲಿ ಅವರ ಮೇಲೆ ಕೊಲೆ ಆರೋಪವಿದೆ. ಅವರನ್ನು ಗಡಿಪಾರು ಮಾಡಲಾಗಿದ್ದು, ಅಂತಹವರನ್ನು ಮುಂದಿಟ್ಟುಕೊಂಡು ಪ್ರಧಾನಿ ಮೋದಿ ರಾಜಕೀಯ ಮಾಡಿದ್ದಾರೆ ಅಂತಾ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದರು.
BJP-JDS alliance: ದೇವೇಗೌಡರೇ, ಎಪ್ಪತ್ತು ವರ್ಷಗಳ ಕಾಲ ರಾಜಕೀಯದಲ್ಲಿದ್ದು ಕನ್ನಡಿಗರ ಪ್ರೀತಿ-ಅಭಿಮಾನವನ್ನು ಉಂಡು ಬೆಳೆದ ನೀವು ʼನಾವು ಪ್ರಧಾನಿ ಮೋದಿಯವರ ಹೆಸರಿನಲ್ಲಿಯೇ ಚುನಾವಣೆ ನಡೆಸುತ್ತೇವೆ” ಎಂಬ ಶರಣಾಗತಿಯ ಹೇಳಿಕೆಯನ್ನು ನೀಡುವಾಗ ಕನಿಷ್ಠ ನಿಮ್ಮ ಆತ್ಮಾಭಿಮಾನವೂ ಕುಟುಕಲಿಲ್ಲವೇ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Prahlad Joshi: ಬರ ಪರಿಹಾರ ಹಾಗೂ ಅನುದಾನ ಹಂಚಿಕೆಯಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ವ್ಯವಸ್ಥಿತವಾಗಿ ಸುಳ್ಳು ಪ್ರಚಾರ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
Lok sabha Election 2024: ರಾಜ್ಯದಲ್ಲಿ ಕಳೆದೊಂದು ವರ್ಷದಿಂದ ನಮ್ಮ ಸರ್ಕಾರ ಇದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚಿನ ಸೀಟು ಗೆಲ್ಲಿಸದಿದ್ದರೆ ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ಗುಬ್ಬಿ ಶಾಸಕ ಎಸ್.ಆರ್.ಶ್ರೀನಿವಾಸ್ ಹೇಳಿದ್ದಾರೆ.
ತಮಿಳುನಾಡಿನ ಸಿಎಂ ಎಂ.ಕೆ.ಸ್ಟಾಲಿನ್ ತಮ್ಮ ಪ್ರಣಾಳಿಕೆಯಲ್ಲಿ ಮೇಕೆದಾಟು ಯೋಜನೆ ಜಾರಿಯಾಗಲು ಬಿಡಲ್ಲ ಎಂದು ಘೋಷಿಸಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ನಿಲುವನ್ನು ತಿಳಿಸಬೇಕು ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ.
CM Siddaramaiah: ವಿಮಾನನಿಲ್ದಾಣದ ಬಳಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಬೇಕೆಂದು ಟ್ಯಾಕ್ಸಿ ಚಾಲಕರು ಹಾಗೂ ಇತರೆ ಚಾಲಕರ ಬೇಡಿಕೆಯಂತೆ 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ.
ಅವರು ಇಂದು ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳ ಸವಲತ್ತುಗಳನ್ನು ನೀಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.