Viral Video: ಎರಡು ನೌಕಾಪಡೆ ಹೆಲಿಕಾಪ್ಟರ್ ಡಿಕ್ಕಿಯಾಗಿ ಪತನ, 10 ಮಂದಿ ಸಾವು!

Military helicopters collided: ಮುಂದಿನ ತಿಂಗಳು ನಡೆಯಲಿದ್ದ ನೌಕಾಪಡೆಯ ೯೦ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್‌ಗಳು ನಾರ್ತ್‌ ಪೆರಾಕ್‌ ಸ್ಟೇಟ್‌ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದವು. ಈ ವೇಳೆ ಪರಸ್ಪರ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ.

Written by - Puttaraj K Alur | Last Updated : Apr 23, 2024, 04:43 PM IST
  • ಮಲೇಷ್ಯಾ ನೌಕಾಪಡೆಯ ಎರಡು ಸೇನಾ ಹೆಲಿಕಾಪ್ಟರ್‌ಗಳು ಪರಸ್ಪರ ಡಿಕ್ಕಿಯಾಗಿ ಪತನ
  • ನೌಕಾಪಡೆಯ ೯೦ನೇ ವಾರ್ಷಿಕೋತ್ಸವದದ ಅಂಗವಾಗಿ ಕಸರತ್ತು ನಡೆಸುತ್ತಿದ್ದ ಹೆಲಿಕಾಪ್ಟರ್‌ಗಳು
  • ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿರುವ ಹೆಲಿಕಾಪ್ಟರ್‌ ದುರಂತ
Viral Video: ಎರಡು ನೌಕಾಪಡೆ ಹೆಲಿಕಾಪ್ಟರ್ ಡಿಕ್ಕಿಯಾಗಿ ಪತನ, 10 ಮಂದಿ ಸಾವು! title=
ಹೆಲಿಕಾಪ್ಟರ್‌ ದುರಂತ!

ನವದೆಹಲಿ: ಅಭ್ಯಾಸದ ವೇಳೆ ಮಲೇಷ್ಯಾ ನೌಕಾಪಡೆಯ ಎರಡು ಸೇನಾ ಹೆಲಿಕಾಪ್ಟರ್‌ಗಳು ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಮೃತಪಟ್ಟಿರುವ ಘಟನೆ ನಡೆದಿದೆ. ಪೆರಾಕ್‌ನ ಲುಮುಟ್‌ನಲ್ಲಿ ಮಂಗಳವಾರ ಈ ದುರ್ಘಟನೆ ನಡೆದಿದೆ.

ಮುಂದಿನ ತಿಂಗಳು ನಡೆಯಲಿದ್ದ ನೌಕಾಪಡೆಯ ೯೦ನೇ ವಾರ್ಷಿಕೋತ್ಸವದ ಅಂಗವಾಗಿ ಹೆಲಿಕಾಪ್ಟರ್‌ಗಳು ನಾರ್ತ್‌ ಪೆರಾಕ್‌ ಸ್ಟೇಟ್‌ನ ನೌಕಾ ನೆಲೆಯಲ್ಲಿ ಕಸರತ್ತು ನಡೆಸುತ್ತಿದ್ದವು. ಈ ವೇಳೆ ಪರಸ್ಪರ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ವೈಮಾನಿಕ ಕಸರತ್ತು ನಡೆಸುತ್ತಿದ್ದ ಎಲ್ಲಾ ೧೦ ಸಿಬ್ಬಂದಿಗಳು ಘಟನೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

ಇದನ್ನೂ ಓದಿBaba Vanga Predictions: 2024ರ ಬಗ್ಗೆ ಭಯಾನಕ ಭವಿಷ್ಯವಾಣಿ ನುಡಿದಿರುವ ಬಾಬಾ ವಂಗಾ

ಸ್ಥಳಕ್ಕೆ ಪೆರಾಕ್ ಅಗ್ನಿಶಾಮಕ ಮತ್ತು ಪಾರುಗಾಣಿಕಾ ಇಲಾಖಾ ಸಿಬ್ಬಂದಿ ಆಗಮಿಸಿದ್ದು, ಮೃತಪಟ್ಟವರ ಶವಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ವೈದ್ಯಕೀಯ ಮತ್ತು ಪೊಲೀಸ್ ಅಧಿಕಾರಿಗಳು ಸಹ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನಡೆ ನಡೆಸಿದ್ದಾರೆ. 

ಮಲೇಷ್ಯಾದ ಸೇನಾ ಹೆಲಿಕಾಪ್ಟರ್‌ ಪರಸ್ಪರ ಡಿಕ್ಕಿಯಾಗಿ ಕೆಳಗೆ ಬಿದ್ದಿರುವ ದೃಶ್ಯವನ್ನು ಸ್ಥಳೀಯರು ತಮ್ಮ ಮೊಬೈಲ್‌ನಲ್ಲಿ ಸೆರೆಹಿಡಿದ್ದಾರೆ. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.  

ಇದನ್ನೂ ಓದಿ: Earthquake: ತೈವಾನ್‌ನಲ್ಲಿ 6.3 ತೀವ್ರತೆಯ ಭಾರೀ ಭೂಕಂಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News