Viral Video: ಬಾಲಕಿಯನ್ನು ಕಿಡ್ನಾಪ್‌ ಮಾಡಲು ಯತ್ನಿಸಿದ ವ್ಯಕ್ತಿ, CCTVಯಲ್ಲಿ ಭಯಾನಕ ದೃಶ್ಯ ಸೆರೆ

Scary Viral Video: ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ. ​

Written by - Puttaraj K Alur | Last Updated : Apr 22, 2024, 07:17 PM IST
  • ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ
  • ಬಾಲಕಿಯನ್ನು ಕಿಡ್ನಾಪ್‌ ಮಾಡಲು ಪ್ರಯತ್ನಿಸುತ್ತಿರುವ ವಿಡಿಯೋ ಸಖತ್‌ ವೈರಲ್‌
  • ಸೈಕಲ್‌ನಲ್ಲಿ ಬಂದ ವ್ಯಕ್ತಿಯು ಬಾಲಕಿಯನ್ನು ಕಿಡ್ನಾಪ್‌ ಮಾಡಲು ಯತ್ನಿಸಿದ್ದಾನೆ
Viral Video: ಬಾಲಕಿಯನ್ನು ಕಿಡ್ನಾಪ್‌ ಮಾಡಲು ಯತ್ನಿಸಿದ ವ್ಯಕ್ತಿ, CCTVಯಲ್ಲಿ ಭಯಾನಕ ದೃಶ್ಯ ಸೆರೆ title=
ಬಾಲಕಿಯ ಕಿಡ್ನಾಪ್‌ಗೆ ಯತ್ನ!

ನವದೆಹಲಿ: ವ್ಯಕ್ತಿಯೊಬ್ಬ ಅಪ್ರಾಪ್ತ ಬಾಲಕಿಯನ್ನು ಅಪಹರಿಸಲು ಯತ್ನಿಸಿರುವ ಘಟನೆ ನಡೆದಿದೆ. ಈ ಘಟನೆ ಪಾಕಿಸ್ತಾನದಲ್ಲಿ ನಡೆದಿದ್ದು, ಬಾಲಕಿಯನ್ನು ಕಿಡ್ನಾಪ್‌ ಮಾಡಲು ವ್ಯಕ್ತಿಯೊಬ್ಬ ಪ್ರಯತ್ನಿಸುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. 

ಬಾಲಕಿಯನ್ನು ಅಪಹರಿಸಲು ಯತ್ನಿಸುತ್ತಿರುವ ಸಂಪೂರ್ಣ ದೃಶ್ಯಾವಳಿ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶೇರ್‌ ಆದ ಕೆಲವೇ ಗಂಟೆಗಳಲ್ಲಿ ಈ ವಿಡಿಯೋವನ್ನು ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ವೈರಲ್‌ ಆಗಿರುವ ವಿಡಿಯೋದಲ್ಲಿ ಮಾಸ್ಕ್​​ ಧರಿಸಿದ ವ್ಯಕ್ತಿಯೊಬ್ಬ ಸೈಕಲ್‌ನಲ್ಲಿ ಬರುತ್ತಾನೆ. ನಿರ್ಜನ ಪ್ರದೇಶದಲ್ಲಿ ಬಾಲಕಿಯನ್ನು ತನ್ನತ್ತ ಕರೆಯುತ್ತಿರುವುದನ್ನು ಕಾಣಬಹುದು. 

ಇದನ್ನೂ ಓದಿ: ಭಾರತದ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಪಡಿತರ : ಸಿಎಂ ಯೋಗಿ ಆದಿತ್ಯನಾಥ್

ಬಾಲಕಿ ಆತನ ಬಳಿಗೆ ಹೋಗುತ್ತಿದ್ದಂತೆಯೇ ಆತ ಅವಳನ್ನು ಹಿಡಿದುಕೊಳ್ಳುತ್ತಾನೆ. ನಂತರ ಅವಳ ಬಾಯಿ ಮುಚ್ಚಲು ಪ್ರಯತ್ನಿಸುತ್ತಾನೆ. ಆದರೆ ಆಕೆ ಆತನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿ, ಕೂಗಾಡುತ್ತಾಳೆ. ಕೂಡಲೇ ಆತ ಸ್ಥಳದಿಂದ ಸೈಕಲ್‌ನಲ್ಲಿ ಎಸ್ಕೇಪ್‌ ಆಗುತ್ತಾನೆ. 

ಅಂದಹಾಗೆ ಈ ಬಾಲಕಿ ಪಾಕಿಸ್ತಾನದ ಅಲ್ಪಸಂಖ್ಯಾತ ಹಿಂದೂ ಸಮುದಾಯಕ್ಕೆ ಸೇರಿದವಳು ಎಂದು ಹೇಳಲಾಗಿದೆ. ಆಕೆಯನ್ನು ಮುಸ್ಲಿಂ ವ್ಯಕ್ತಿಯೊಬ್ಬ ಅಪಹರಿಸಲು ಪ್ರಯತ್ನಿಸುತ್ತಿದ್ದಾನೆ ಅಂತಾ ಆರೋಪಿಸಲಾಗಿದೆ. ಈ ವಿಡಿಯೋವನ್ನು ನೋಡಿದ ಅನೇಕರು ಆಘಾತ ವ್ಯಕ್ತಪಡಿಸಿದ್ದು, ಮಕ್ಕಳ ಬಗ್ಗೆ ವಿಶೇಷ ಗಮನಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಮಕ್ಕಳನ್ನು ಒಬ್ಬೊಬ್ಬರನ್ನೇ ಬಿಟ್ಟರೆ ಅಪರಿಚಿತರ ಪಾಲಾಗುತ್ತಾರೆ. ಹೀಗಾಗಿ ಎಚ್ಚರಿಕೆ ವಹಿಸಬೇಕು ಅಂತಾ ಹೇಳಿದ್ದಾರೆ. 

ಇದನ್ನೂ ಓದಿ: Mahanadi Tragedy: ಒಡಿಶಾದ ಮಹಾನದಿಯಲ್ಲಿ ಮುಳುಗಿದ 60 ಜನರಿದ್ದ ದೋಣಿ, 2 ಸಾವು.. ಹಲವರು ನಾಪತ್ತೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News