ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಪ್ರಾಣಪಾಯದಿಂದ ಪಾರು

 ಇಂದು ಪಾಕಿಸ್ತಾನದಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಾಯಗೊಂಡಿದ್ದಾರೆ.

Written by - Zee Kannada News Desk | Last Updated : Nov 3, 2022, 10:34 PM IST
  • ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಕಂಟೈನರ್ ಮೌಂಟೆಡ್-ಟ್ರಕ್ ಮೇಲೆ ಗುಂಡು ಹಾರಿಸಲಾಯಿತು.
  • ಸ್ಥಳೀಯ ಮಾಧ್ಯಮಗಳ ಪ್ರಕಾರ, ಇಮ್ರಾನ್ ಖಾನ್ ಅಪಾಯದಿಂದ ಪಾರಾಗಿದ್ದಾರೆ.
  • ಕ್ಷಿಪ್ರ ಚುನಾವಣೆಗೆ ಆಗ್ರಹಿಸಿ ಇಮ್ರಾನ್ ಖಾನ್ ಇಸ್ಲಾಮಾಬಾದ್‌ಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು ಎನ್ನಲಾಗಿದೆ.
ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲೆ ಗುಂಡಿನ ದಾಳಿ, ಪ್ರಾಣಪಾಯದಿಂದ ಪಾರು title=

ಇಸ್ಲಾಮಾಬಾದ್:  ಇಂದು ಪಾಕಿಸ್ತಾನದಲ್ಲಿ ಪ್ರತಿಭಟನಾ ಮೆರವಣಿಗೆ ವೇಳೆ ಅಪರಿಚಿತ ಬಂದೂಕುಧಾರಿಗಳು ಗುಂಡಿನ ದಾಳಿ ನಡೆಸಿದ್ದರಿಂದ ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಗಾಯಗೊಂಡಿದ್ದಾರೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ, ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಮ್ರಾನ್ ಖಾನ್ ಪ್ರಯಾಣಿಸುತ್ತಿದ್ದ ಕಂಟೈನರ್ ಮೌಂಟೆಡ್-ಟ್ರಕ್ ಮೇಲೆ ಗುಂಡು ಹಾರಿಸಲಾಯಿತು. ಅಚ್ಚರಿ ಎನ್ನವಂತೆ  ಇಮ್ರಾನ್ ಖಾನ್ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಅವರು ಚುನಾವಣೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು ಎನ್ನಲಾಗಿದೆ.

Banaras Movie Review: 'ಮುಕ್ತ'ವಾಗಿ ಬದುಕು ಕಟ್ಟಿಕೊಳ್ಳೋಕೆ 'ಬನಾರಸ್ 'ಗೆ ಹಾರಿದ ಜೈದ್ ಖಾನ್..!

ಗುಜ್ರಾನ್‌ವಾಲಾದ ಅಲ್ಲಾವಾಲಾ ಚೌಕ್‌ನಲ್ಲಿ ಇಮ್ರಾನ್ ಖಾನ್ ಅವರ ಸ್ವಾಗತ ಶಿಬಿರದ ಬಳಿ ಗುಂಡಿನ ದಾಳಿಯ ನಂತರ ಅಸ್ತವ್ಯಸ್ತವಾಗಿರುವ ದೃಶ್ಯಗಳು ಕಂಡು ಬಂದವು ಎಂದು ಸ್ಥಳೀಯ ಚಾನೆಲ್ ಜಿಯೋ ನ್ಯೂಸ್ ವರದಿ ಮಾಡಿದೆ. ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಅದು ಹೇಳಿದೆ.

ಇದನ್ನೂ ಓದಿ : Naga Chaitanya : ಸಮಂತಾರನ್ನು ಭೇಟಿಯಾಗಲಿದ್ದಾರಾ ನಾಗ ಚೈತನ್ಯ?

ಈ ಹಿಂದೆ 2007 ರಲ್ಲಿ ಇಸ್ಲಾಮಾಬಾದ್‌ನಿಂದ ಸುಮಾರು 200 ಕಿ.ಮೀ ದೂರದಲ್ಲಿರುವ ರ್ಯಾಲಿಯಲ್ಲಿ ಮಾಜಿ ಪ್ರಧಾನಿ ಬೆನಜೀರ್ ಭುಟ್ಟೊ ಅವರು ಗುಂಡಿಕ್ಕಿ  ಹತ್ಯೆಗೈಯಲಾಗಿತ್ತು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News