ಪಶ್ಚಿಮ ಆಸ್ಟ್ರೇಲಿಯಾದಲ್ಲಿ 6.6 ತೀವ್ರತೆಯಲ್ಲಿ ಭೂಕಂಪ

ಭೂಕಂಪದ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. 

Last Updated : Jul 14, 2019, 12:32 PM IST
ಪಶ್ಚಿಮ ಆಸ್ಟ್ರೇಲಿಯಾದಲ್ಲಿ 6.6 ತೀವ್ರತೆಯಲ್ಲಿ ಭೂಕಂಪ title=

ಕ್ಯಾನ್‌ಬೆರಾ: ಪಶ್ಚಿಮ ಆಸ್ಟ್ರೇಲಿಯಾದಲ್ಲಿ ಭಾನುವಾರ 6.6 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದೆ ಎಂದು ಯುರೋಪಿಯನ್-ಮೆಡಿಟರೇನಿಯನ್ ಭೂಕಂಪನ ಕೇಂದ್ರ ತಿಳಿಸಿದೆ. 

ಬ್ರೂಮ್ ಪಟ್ಟಣದಿಂದ ಸುಮಾರು 213 ಕಿಲೋಮೀಟರ್ ದೂರದಲ್ಲಿ 2 ಕಿಲೋಮೀಟರ್ ಆಳದಲ್ಲಿ ಮಧ್ಯಾಹ್ನ 3:38 ರ ಸುಮಾರಿಗೆ ಭೂಕಂಪ ಸಂಭವಿಸಿದೆ.

ಭೂಕಂಪದ ಪರಿಣಾಮವಾಗಿ ಯಾವುದೇ ಪ್ರಾಣಹಾನಿ ಅಥವಾ ಆಸ್ತಿಗೆ ಹಾನಿ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಯಾವುದೇ ಸುನಾಮಿ ಎಚ್ಚರಿಕೆ ನೀಡಿಲ್ಲ ಎಂದು ಎಎನ್ಐ ವರದಿ ಮಾಡಿದೆ.
 

Trending News