Dhaka Commercial complex fire : ಢಾಕಾದ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ - 43 ಕ್ಕೂ ಅಧಿಕ ಸಾವು, ಹಲವರಿಗೆ ಗಾಯ

Dhaka Commercial complex fire :  ಢಾಕಾದಲ್ಲಿ ಆರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ  ಕನಿಷ್ಠ 43 ಜನರು ಸಾವನ್ನಪ್ಪಿದ್ದಾರೆ. 22 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.  

Written by - Ranjitha R K | Last Updated : Mar 1, 2024, 11:58 AM IST
  • ಢಾಕಾದಲ್ಲಿ ಆರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ಬೆಂಕಿ
  • ಬೆಂಕಿ ಅವಘಡದಲ್ಲಿ 43 ಮಂದಿ ಸಾವು
  • ಅನೇಕರಿಗೆ ಗಾಯ , ಆಸ್ಪತ್ರೆಗೆ ದಾಖಲು
Dhaka Commercial complex fire : ಢಾಕಾದ ವಾಣಿಜ್ಯ ಸಂಕೀರ್ಣದಲ್ಲಿ ಬೆಂಕಿ ಅವಘಡ - 43 ಕ್ಕೂ ಅಧಿಕ ಸಾವು, ಹಲವರಿಗೆ ಗಾಯ   title=

Dhaka Commercial complex fire :  ಢಾಕಾದಲ್ಲಿ ಆರು ಅಂತಸ್ತಿನ ವಾಣಿಜ್ಯ ಕಟ್ಟಡದಲ್ಲಿ ನಿನ್ನೆ ಬೆಂಕಿ ಅವಘಡ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕನಿಷ್ಠ 43 ಜನರು ಸಾವನ್ನಪ್ಪಿದ್ದಾರೆ. ಢಾಕಾದ ಬೈಲಿ ರೋಡ್ ಪ್ರದೇಶದ ಕಟ್ಟಡದಲ್ಲಿ ಈ ಬೆಂಕಿ ಅವಘಡ ಸಂಭವಿಸಿದೆ ಎಂದು ಆರೋಗ್ಯ ಸಚಿವ ಸಮಂತಾ ಲಾಲ್ ಸೇನ್ ಹೇಳಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮೂಲಕ ಅಗ್ನಿಶಾಮಕ ದಳದವರು ಬದುಕುಳಿದವರನ್ನು ಕಟ್ಟಡದಿಂದ ಹೊರ ತೆಗೆದಿದ್ದಾರೆ. ಘಟನೆಯಲ್ಲಿ ಕನಿಷ್ಠ 22 ಮಂದಿ ಗಾಯಗೊಂಡಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. 

ಕಟ್ಟಡದ ಮೊದಲ ಮಹಡಿಯಲ್ಲಿರುವ ಜನಪ್ರಿಯ ರೆಸ್ಟೋರೆಂಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅನೇಕ ಜನರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದ್ದಾರೆ. ಬೆಂಕಿ ತ್ವರಿತವಾಗಿ ಮೇಲಿನ ಮಹಡಿಗಳಿಗೆ  ಹಬ್ಬಿದ್ದು, ಹೆಚ್ಚಿನ ನಷ್ಟ ಸಂಭವಿಸಲು ಕಾರಣವಾಗಿದೆ. ಅಗ್ನಿಶಾಮಕ ಸಿಬ್ಬಂದಿ ಎರಡು ಗಂಟೆಯೊಳಗೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದರಾದರೂ ಅಷ್ಟರಲ್ಲಾಗಲೇ ಅಪಾರ ನಷ್ಟ ಉಂಟಾಗಿತ್ತು.

ಇದನ್ನೂ ಓದಿ : ಇಸ್ರೇಲ್ - ಹಮಾಸ್ ಯುದ್ಧ : ಪ್ಯಾಲೆಸ್ಟೀನ್ ಜನರ ಸಾವಿನ ಸಂಖ್ಯೆ 30 ಸಾವಿರಕ್ಕೆ ಏರಿಕೆ

ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು  33 ಜನರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಇನ್ನು ಶೇಖ್ ಹಸೀನಾ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಬರ್ನ್ ಮತ್ತು ಪ್ಲಾಸ್ಟಿಕ್ ಸರ್ಜರಿ ಆಸ್ಪತ್ರೆಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ ಎಂದು ಸಮಂತಾ ಲಾಲ್ ಸೇನ್ ತಿಳಿಸಿದ್ದಾರೆ. 

ಅಪಘಾತದ ತನಿಖೆಗೆ ಸರ್ಕಾರ ಆದೇಶಿಸಿದೆ. ಅಗ್ನಿಶಾಮಕ ದಳದ ಅಧಿಕೃತ ಹೇಳಿಕೆಯ ಪ್ರಕಾರ, ತಂಡವು ಸುಮಾರು 75 ಜನರನ್ನು ಜೀವಂತವಾಗಿ ರಕ್ಷಿಸಿದೆ. ರೆಸ್ಟೋರೆಂಟ್‌ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ.    ಕಟ್ಟಡದ ಪ್ರತಿಯೊಂದು ಮಹಡಿಯಲ್ಲಿ ರೆಸ್ಟೋರೆಂಟ್‌ಗಳಿರುವುದರಿಂದ ಬೆಂಕಿ ಇಷ್ಟು ವೇಗವಾಗಿ ಹರಡಿತು ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : ಪ್ರತಿ ವರ್ಷ 59 ​​ಲಕ್ಷ ಕತ್ತೆಗಳು ಸಾಯುತ್ತಿವೆ; ಕಾರಣ ತಿಳಿದರೆ ನೀವು ಆಶ್ಚರ್ಯ ಪಡುತ್ತೀರಿ!

ಪ್ರತ್ಯಕ್ಷದರ್ಶಿಗಳು  ಹೇಳಿದ್ದೇನು ? : 
ಬೈಲಿ ರಸ್ತೆಯಲ್ಲಿರುವ ಕಟ್ಟಡವು ಮುಖ್ಯವಾಗಿ ರೆಸ್ಟೋರೆಂಟ್‌ಗಳು, ಬಟ್ಟೆ ಮತ್ತು ಮೊಬೈಲ್ ಫೋನ್ ಅಂಗಡಿಗಳನ್ನು ಹೊಂದಿದೆ. ಈ ಪ್ರದೇಶ ಜನನಿಬಿಡವಾಗಿರುತ್ತದೆ.   ರೆಸ್ಟೋರೆಂಟ್‌ನಲ್ಲಿದ್ದ ಹಲವು ಮಂದಿ ತಮ್ಮ ಪ್ರಾಣ ಉಳಿಸಿಕೊಳ್ಳಲು ಕಿಟಕಿಯಿಂದ ಕೆಳಗೆ ಜಿಗಿದಿದ್ದಾರೆ. ಇದರಿಂದಾಗಿ  ಅವರಿಗೆ ಸಾಕಷ್ಟು ಗಾಯಗಳಾಗಿವೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ 

  

Trending News