ಮಹಿಳೆಯರು ಮಂತ್ರಿಯಾಗಲು ಸಾಧ್ಯವಿಲ್ಲ, ಅವರು ಮಕ್ಕಳನಷ್ಟೇ ಹೆರಬೇಕು: ತಾಲಿಬಾನ್ ವಕ್ತಾರ

ಮಹತ್ವದ ಜವಾಬ್ದಾರಿಗಳನ್ನು ಹೆಣ್ಣುಮಕ್ಕಳಿಗೆ ವಹಿಸಿದರೆ ಅವರ ಕುತ್ತಿಗೆ ಮೇಲೆ ಹೆಚ್ಚಿನ ಭಾರವನ್ನು ಹೇರಿದಂತಾಗುತ್ತದೆ.

Written by - Puttaraj K Alur | Last Updated : Sep 10, 2021, 10:53 AM IST
  • ಮಹಿಳೆಯರ ಹಕ್ಕುಗಳನ್ನು ಗೌರವಿಸುವುದಾಗಿ ಹೇಳಿಕೆ ನೀಡಿದ್ದ ತಾಲಿಬಾನ್ ನಾಯಕರಿಂದ ತದ್ವಿರುದ್ಧ ಹೇಳಿಕೆ
  • ಮಹಿಳೆಯರು ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ ತಾಲಿಬಾನ್ ವಕ್ತಾರ ಸಯ್ಯದ್ ಜೆಕ್ರುಲ್ಲಾ ಹಾಶಮಿ
  • ಮಹಿಳೆಯರ ಕೆಲಸ ಕೇವಲ ಮಕ್ಕಳನ್ನು ಹೆರುವುದಷ್ಟೇ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಉಗ್ರ ಸಂಘಟನೆ ನಾಯಕ
ಮಹಿಳೆಯರು ಮಂತ್ರಿಯಾಗಲು ಸಾಧ್ಯವಿಲ್ಲ, ಅವರು ಮಕ್ಕಳನಷ್ಟೇ ಹೆರಬೇಕು: ತಾಲಿಬಾನ್ ವಕ್ತಾರ  title=
ಮಹಿಳೆಯರು ಮಕ್ಕಳನಷ್ಟೇ ಹೆರಬೇಕು ಎಂದ ತಾಲಿಬಾನ್ ವಕ್ತಾರ (Photo Courtesy: @Zee News)

ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ನೇತೃತ್ವದ ಸರ್ಕಾರ(Taliban Govt.)ದ ಸಚಿವರು ಪ್ರಮಾಣವಚನ ಸ್ವೀಕರಿಸಲು ಸಜ್ಜಾಗಿದ್ದಾರೆ. ತಮ್ಮ ಸರ್ಕಾರದಲ್ಲಿ ಮಹಿಳೆಯರ ಹಕ್ಕುಗಳನ್ನು ಗೌರವಿಸುವುದಾಗಿ ತಾಲಿಬಾನ್ ನಾಯಕರು ಹೇಳಿಕೊಂಡಿದ್ದರು. ಆದರೆ ಉಗ್ರ ಸಂಘಟನೆಯ ವಕ್ತಾರರು ಮಾತ್ರ ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ಮುಂದುವರೆಸಿದ್ದಾರೆ. ಮಹಿಳೆಯರ ಹಕ್ಕುಗಳ ಬಗ್ಗೆ ತಲೆಕೆಡಿಸಿಕೊಳ್ಳದೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವ್ಯಾಪಕ ಟೀಕೆಗೆ ಗುರಿಯಾಗುತ್ತಿದ್ದಾರೆ.

ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಾಲಿಬಾನ್ ವಕ್ತಾರ ಸಯ್ಯದ್ ಜೆಕ್ರುಲ್ಲಾ ಹಾಶಮಿ(Sayed Zekrullah Hashimi) ಮಹಿಳೆಯರು ಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಮಹತ್ವದ ಜವಾಬ್ದಾರಿಗಳನ್ನು ಹೆಣ್ಣುಮಕ್ಕಳಿಗೆ ವಹಿಸಿದರೆ ಅವರ ಕುತ್ತಿಗೆ ಮೇಲೆ ಹೆಚ್ಚಿನ ಭಾರವನ್ನು ಹೇರಿದಂತಾಗುತ್ತದೆ. ಹೀಗಾಗಿ ಮಹಿಳೆಯರು ಕೇವಲ ಜನ್ಮ ನೀಡಬೇಕಷ್ಟೇ ಎಂದು ಹೇಳಿದ್ದಾರೆ.  

ಇದನ್ನೂ ಓದಿ: Afghanistan: ತಾಲಿಬಾನ್ ಆಳ್ವಿಕೆಯಲ್ಲಿ ಅಫ್ಘಾನಿಸ್ತಾನ ಹೇಗಿರುತ್ತೆ? ತಾಲಿಬಾನ್‌ನ ನಾಯಕ ಹೇಳಿದ್ದೇನು?

ಅಫ್ಘಾನ್ ಸರ್ಕಾರ(Afghanistan Govt.)ದ ವಿರುದ್ಧ ಮಹಿಳೆಯರು ಪ್ರತಿಭಟನೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಮಹಿಳಾ ಪ್ರತಿಭಟನಾಕಾರರು ಅಫ್ಘಾನಿಸ್ತಾನದಲ್ಲಿ ಎಲ್ಲ ಮಹಿಳೆಯರನ್ನು ಪ್ರತಿನಿಧಿಸಲು ಸಾಧ್ಯವಿಲ್ಲ’ ಎಂದಿದ್ದಾರೆ. ಅಫ್ಘಾನ್ ಮಹಿಳೆಯರು ತಮ್ಮ ಜೀವವನ್ನು ಪಣಕ್ಕಿಟ್ಟು ದಂಗೆಕೋರ ಗುಂಪಿನ ವಿರುದ್ಧ ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಸಮಯದಲ್ಲಿ ತಾಲಿಬಾನ್‌ನ ಈ ಹೇಳಿಕೆ  ಬಂದಿದೆ. ಈ ಹೇಳಿಕೆಗಳು ತಾಲಿಬಾನ್ ತನ್ನ ಹಳೆಯ ದಾರಿಯತ್ತ ಸಾಗಬಹುದು ಎಂಬ ಆತಂಕವನ್ನು ಹುಟ್ಟುಹಾಕಿವೆ.

ಕಾಬೂಲ್‌ನಲ್ಲಿ ಅಫ್ಘಾನಿಸ್ತಾನ(Afghanistan)ದ ಹೊಸ ಮಧ್ಯಂತರ ಸರ್ಕಾರವನ್ನು ವಿರೋಧಿಸುತ್ತಿರುವ ಅಫ್ಘಾನ್ ಮಹಿಳೆಯರು ತಾಲಿಬಾನ್‌ನಿಂದ ದೂರ ಓಡಿಸಲ್ಪಟ್ಟರು ಎಂದು ಸ್ಥಳೀಯ ಮಾಧ್ಯಮ ವರದಿ ಮಾಡಿದೆ. ತಾಲಿಬಾನ್ ಭಿನ್ನಮತವನ್ನು ಹತ್ತಿಕ್ಕುವಲ್ಲಿ ಮಹಿಳಾ ಪ್ರತಿಭಟನಾಕಾರರ ವಿರುದ್ಧ ಚಾಟಿ ಮತ್ತು ಲಾಠಿಗಳನ್ನು ಪ್ರಯೋಗ ಮಾಡಲಾಗಿದೆ ಎಂದು ವರಿಯಾಗಿದೆ.  

ಇದನ್ನೂ ಓದಿ: ಕ್ವಾರಂಟೈನ್ ಉಲ್ಲಂಘಿಸಿ ಕೊರೊನಾ ಹರಡಿದ್ದ ವ್ಯಕ್ತಿಗೆ 5 ವರ್ಷ ಜೈಲುಶಿಕ್ಷೆ..!

1996 ರಿಂದ 2001ರವರೆಗೆ ತಾಲಿಬಾನ್(Afghanistan) ಆಳ್ವಿಕೆಯಲ್ಲಿ ಮಹಿಳೆಯರಿಗೆ ಕೆಲಸ ಮಾಡಲು ಅವಕಾಶವಿರಲಿಲ್ಲ. ಯುವತಿಯರು ಶಾಲೆಗೆ ಹೋಗಲು ಸಾಧ್ಯವಿರಲಿಲ್ಲ. ಮಹಿಳೆಯರು ತಮ್ಮ ಮನೆಯಿಂದ ಹೊರಗೆ ಹೋಗಲು ಬಯಸಿದರೆ ಮುಖವನ್ನು ಮುಚ್ಚಿಕೊಳ್ಳಬೇಕಾಗಿತ್ತು. ಈಗಾಗಲೇ ಅಪ್ಘಾನಿಸ್ತಾನದಲ್ಲಿ ಹೊಸ ಸರ್ಕಾರದ ಹುಮ್ಮಸ್ಸಿನಲ್ಲಿರುವ ತಾಲಿಬಾನ್ ನಾಯಕರು ಆಳ್ವಿಕೆ ನಡೆಸಲು ಸಜ್ಜಾಗಿದ್ದಾರೆ. ಶರಿಯಾ ಸೇರಿದಂತೆ ಅನೇಕ ಕಟ್ಟುನಿಟ್ಟಿನ ಕಾನೂನು ಜಾರಿಗೊಳಿಸುವುದಾಗಿ ಹೇಳಿದ್ದಾರೆ. ಇದರಿಂದ ಭೀತಿಯಲ್ಲಿರುವ ಅಫ್ಘಾನ್ ಪ್ರಜೆಗಳು ದೇಶಬಿಟ್ಟು ತೆರಳಲು ಪ್ರಯತ್ನಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News