ಮೆಗಾ ಸ್ಟಾರ್‌ ಚಿರಂಜೀವಿಗೆ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ..!

Chiranjeevi Receives Padma Vibhushan : 2024 ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ನಟ ಚಿರಂಜೀವಿ ಅವರಿಗೆ ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ನೀಡಿ ಗೌರವಿಸಿತು. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ಪದ್ಮ ಪ್ರಶಸ್ತಿ ಪ್ರದಾನ ಸಮಾರಂಭದ ಅಂಗವಾಗಿ ಚಿರಂಜೀವಿಯವರು ರಾಷ್ಟ್ರಪತಿಯವರ ಕೈಯಿಂದ ಈ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕರಿಸಿದರು.    

Written by - Krishna N K | Last Updated : May 10, 2024, 12:00 PM IST
    • ಚಿರಂಜೀವಿ ಅವರಿಗೆ 2024 ರ ದೇಶದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿ ಗೌರವ
    • ಚಿರಂಜೀವಿಯವರು ರಾಷ್ಟ್ರಪತಿಯವರ ಕೈಯಿಂದ ಈ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕರಿಸಿದರು.
    • ತೆಲುಗು ಸಿನಿರಂದದಿಂದ ಈ ಪ್ರಶಸ್ತಿಯನ್ನು ಪಡೆದ ಮೂರನೇ ವ್ಯಕ್ತಿಯಾಗಿ ಚಿರಂಜೀವಿಯವರು ಹೊರ ಹೊಮ್ಮಿದ್ದಾರೆ.
ಮೆಗಾ ಸ್ಟಾರ್‌ ಚಿರಂಜೀವಿಗೆ ರಾಷ್ಟ್ರಪತಿಗಳಿಂದ ಪದ್ಮವಿಭೂಷಣ ಪ್ರಶಸ್ತಿ ಪ್ರದಾನ ..! title=

Megastar Chiranjeevi receives Padma Vibhushan : ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮೆಗಾಸ್ಟಾರ್ ಚಿರಂಜೀವಿ ಅವರಿಗೆ 2024 ರ ದೇಶದ ಎರಡನೇ ಅತ್ಯುನ್ನತ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪದ್ಮ ಪ್ರಶಸ್ತಿಗಳ ಪ್ರದಾನ ಕಾರ್ಯಕ್ರಮದಲ್ಲಿ, ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಟ ಚಿರಂಜೀವಿ ಅವರಿಗೆ ದೇಶದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣವನ್ನು ಪ್ರದಾನ ಮಾಡಿದರು.

ಅಕ್ಕಿನೇನಿ ನಾಗೇಶ್ವರ ರಾವ್ ಮತ್ತು ಎಸ್‌ಪಿ ಬಾಲಸುಬ್ರಹ್ಮಣ್ಯಂ ನಂತರ ಟಾಲಿವುಡ್ ಚಲನಚಿತ್ರೋದ್ಯಮದಿಂದ ಈ ಪ್ರಶಸ್ತಿಯನ್ನು ಪಡೆದ ಮೂರನೇ ವ್ಯಕ್ತಿಯಾಗಿ ಚಿರಂಜೀವಿಯವರು ಹೊರ ಹೊಮ್ಮಿದ್ದಾರೆ. ಈ ಪ್ರಶಸ್ತಿ ಕಾರ್ಯಕ್ರಮದಲ್ಲಿ ಚಿರಂಜೀವಿ ಅವರ ಪತ್ನಿ ಸುರೇಖಾ, ಪುತ್ರ ರಾಮ್ ಚರಣ್ ಮತ್ತು ಸೊಸೆ ಉಪಾಸ ಕೂಡ ಭಾಗವಹಿಸಿದ್ದರು. ಹಿರಿಯ ನಟಿ ವೈಜಯಂತಿ ಮಾಲಾ ಬಾಲಿ ಅವರಿಗೂ ರಾಷ್ಟ್ರಪತಿಗಳು ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿದರು.

ಇದನ್ನೂ ಓದಿ:ರಾಜ್ಯಕ್ಕೆ ಟಾಪ್‌ ಬಂದ ರೈತನ ಮಗಳು ಅಂಕಿತಾಗೆ ಅಭಿನಂದನೆ ಸಲ್ಲಿಸಿದ ಧ್ರುವ ಸರ್ಜಾ..!

ಇನ್ನು ಚಿರಂಜೀವಿ ಸಿನಿಮಾಗಳ ವಿಚಾರಕ್ಕೆ ಬಂದರೆ ಸದ್ಯ ಅವರು ರಾಜಕೀಯದಿಂದ ದೂರ ಉಳಿದಿದ್ದು, ಈ ಚುನಾವಣೆಯಲ್ಲಿ ಬಿಜೆಪಿ, ಟಿಡಿಪಿ ಮತ್ತು ಜನಸೇನಾ ಮೈತ್ರಿಕೂಟದ ಅಭ್ಯರ್ಥಿಗಳಿಗೆ ಬೆಂಬಲ ಘೋಷಿಸಿದ್ದಾರೆ. ಸದ್ಯ ವಶಿಷ್ಠ ನಿರ್ದೇಶನದ 'ವಿಶ್ವಂಭರ' ಸಿನಿಮಾದಲ್ಲಿ ಬ್ಯುಸಿ ಇರುವ ನಟ, ಮುಂದಿನ ವರ್ಷ ಸಂಕ್ರಾಂತಿಯ ಈ ಚಿತ್ರದ ಮೂಲಕ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.

 ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News