Kannappa first look : ʼಕಣ್ಣಪ್ಪʼ ಚಿತ್ರದ ಫಸ್ಟ್‌ ಲುಕ್‌..! ವಿಷ್ಣು ಮಂಚು ಅವತಾರಕ್ಕೆ ಫ್ಯಾನ್ಸ್‌ ಫಿದಾ

Vishnu manchu Kannappa movie : ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ತಮ್ಮ ಲುಕ್‌ ಮೂಲಕವೇ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಮಿಂಚು ಹರಿಸಿದ್ದಾರೆ. ಬೆರಗುಗೊಳಿಸುವ ದೃಶ್ಯದಲ್ಲಿ, ಬಿಲ್ಲು ಮತ್ತು ಬಾಣದೊಂದಿಗೆ ಕಣ್ಣಪ್ಪನಾಗಿ ವಿಷ್ಣು ಮಂಚು ಎದುರಾಗಿದ್ದಾರೆ. 

Written by - YASHODHA POOJARI | Edited by - Krishna N K | Last Updated : Mar 8, 2024, 05:31 PM IST
    • ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಮಿಂಚು ಹರಿಸಿದ್ದಾರೆ.
    • ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್‌ ಸಖತ್ತಾಗಿದೆ.
    • ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮತ್ತೊಂದು ಹೊಸ ಲುಕ್‌
Kannappa first look : ʼಕಣ್ಣಪ್ಪʼ ಚಿತ್ರದ ಫಸ್ಟ್‌ ಲುಕ್‌..! ವಿಷ್ಣು ಮಂಚು ಅವತಾರಕ್ಕೆ ಫ್ಯಾನ್ಸ್‌ ಫಿದಾ title=

Kannappa movie first look : ಬಹುಭಾಷೆಗಳಲ್ಲಿ ಬಿಡುಗಡೆಯಾಗಲಿರುವ ‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಸಿನಿಮಾ ಘೋಷಣೆ ಆದಾಗಿನಿಂದ ಒಂದಲ್ಲ ಒಂದು ರೀತಿ ಸದ್ದು ಮಾಡುತ್ತಲೇ ಇದೆ. ವಿಷ್ಣು ಮಂಚು ನಾಯಕನಾಗಿ ನಟಿಸುತ್ತಿರುವ ಈ ಸಿನಿಮಾದಲ್ಲಿ ಬಹುತಾರಾಗಣವೂ ಚಿತ್ರದ ಹೈಲೈಟ್. ಮುಕೇಶ್‍ ಕುಮಾರ್ ಸಿಂಗ್‍ ನಿರ್ದೇಶನದ ‘ಕಣ್ಣಪ್ಪ’ ಸಿನಿಮಾದ ಫಸ್ಟ್‌ ಲುಕ್‌ ಈಗಾಗಲೇ ಕುತೂಹಲ ಮೂಡಿಸಿತ್ತು. ಈಗ ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಮತ್ತೊಂದು ಹೊಸ ಲುಕ್‌ ಹೊರತಂದಿದೆ ಚಿತ್ರತಂಡ.

ಫಸ್ಟ್ ಲುಕ್ ಪೋಸ್ಟರ್‌ನಲ್ಲಿ ತಮ್ಮ ಲುಕ್‌ ಮೂಲಕವೇ ಭಕ್ತ ಕಣ್ಣಪ್ಪನಾಗಿ ವಿಷ್ಣು ಮಂಚು ಮಿಂಚು ಹರಿಸಿದ್ದಾರೆ. ಬೆರಗುಗೊಳಿಸುವ ದೃಶ್ಯದಲ್ಲಿ, ಬಿಲ್ಲು ಮತ್ತು ಬಾಣದೊಂದಿಗೆ ಕಣ್ಣಪ್ಪನಾಗಿ ವಿಷ್ಣು ಮಂಚು ಎದುರಾಗಿದ್ದಾರೆ. ಜಲಪಾತದಿಂದ ಹೊರಹೊಮ್ಮುತ್ತ, ಇಟ್ಟ ಗುರಿಯತ್ತ ಬಾಣ ನೆಟ್ಟಿದ್ದಾನೆ ಕಣ್ಣಪ್ಪ. ಭಕ್ತಿಪ್ರಧಾನದ ಜತೆಗೆ ಆಕ್ಷನ್- ಪ್ಯಾಕ್ಡ್ ಸೀಕ್ವೆನ್ಸ್‌ಗಳೂ ಚಿತ್ರದಲ್ಲಿ ಭರ್ಜರಿಯಾಗಿ ಇರಲಿದೆ ಎಂಬುದನ್ನು ಸದ್ಯದ ಕಿರು ಝಲಕ್‌ನಲ್ಲಿ ಕಾಣಬಹುದಾಗಿದೆ. 

ಇದನ್ನೂ ಓದಿ:ಮಿಲನಾ ನಾಗರಾಜ್ ಪ್ರೆಗ್ನೆಂಟ್.! ಮಗು ಹುಟ್ಟವ ಮೊದಲೇ ಹೆಸರಿಟ್ಟ ಸ್ಟಾರ್‌ ಜೋಡಿ

24 ಫ್ರೇಮ್ಸ್‌ ಫ್ಯಾಕ್ಟರಿ ಮತ್ತು AVA ಎಂಟರ್‌ಟೈನ್‌ಮೆಂಟ್‌ ಸಂಸ್ಥೆಗಳು ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿವೆ. ಬಿಗ್‌ ಬಜೆಟ್‌ನಲ್ಲಿ ಮೂಡಿಬರುತ್ತಿರುವ ಈ ಸಿನಿಮಾ ಬಹುತೇಕ ವಿದೇಶದಲ್ಲಿಯೇ ಶೂಟಿಂಗ್‌ ಮಾಡಿಕೊಳ್ಳುತ್ತಿದೆ. ನ್ಯೂಜಿಲೆಂಡ್‌ನ ಸುಂದರ ವಾತಾವರಣದಲ್ಲಿ ಭರ್ಜರಿಯಾಗಿಯೇ ಈ ಚಿತ್ರದ ಎರಡನೇ ಶೆಡ್ಯೂಲ್‌ ಚಿತ್ರೀಕರಣ ನಡೆಯುತ್ತಿದೆ. ಈ ಶೂಟಿಂಗ್‌ಲ್ಲಿ 600 ಮಂದಿ ಭಾಗವಹಿಸಿದ್ದು ವಿಶೇಷ. ಈಗ ಇದೇ ಕಣ್ಣಪ್ಪ ತಂಡದಿಂದ ಶಿವರಾತ್ರಿಗೆ ಬಿಗ್‌ ಸರ್ಪ್ರೈಸ್‌ ಹೊರಬಂದಿದೆ. 

ಟಾಲಿವುಡ್‌ನಲ್ಲಿ ನಟ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ; ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ ತಾರಾಗಣದ ವಿಚಾರವಾಗಿಯೂ ಈ ಸಿನಿಮಾ ಸದ್ದು ಮಾಡುತ್ತಿದೆ. ಸದ್ಯ ಟಾಲಿವುಡ್‌ನ ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍ ಮತ್ತು ಸ್ಯಾಂಡಲ್‌ವುಡ್‌ನ ಶಿವರಾಜಕುಮಾರ್ ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಜತೆಗೆ ಮೋಹನ್‌ ಬಾಬು, ಶರತ್‌ ಕುಮಾರ್‌, ಬ್ರಹ್ಮಾನಂದಂ ಸಹ ಈ ಸಿನಿಮಾದಲ್ಲಿರಲಿದ್ದಾರೆ. 

ಇದನ್ನೂ ಓದಿ:ಮಹಾ ಶಿವರಾತ್ರಿಯಂದು ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ ಲವ್ ಯು ಶಂಕರ

ಈ ಸಿನಿಮಾ ಮೂಡಿಬರುತ್ತಿರುವ ರೀತಿಗೆ ಸ್ವತಃ ವಿಷ್ಣು ಮಂಚು ಥ್ರಿಲ್‌ ಆಗಿದ್ದಾರೆ. "ಕಣ್ಣಪ್ಪ ಸಿನಿಮಾ ಚಿತ್ರೀಕರಣ ಕೆಲಸಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಳ್ಳೆಯ ತಂಡದ ಜತೆಗೆ ನಿರೀಕ್ಷೆಗೂ ಮೀರಿ ಚಿತ್ರ ಮೂಡಿಬರುತ್ತಿರುವುದು ಖುಷಿ ನೀಡಿದೆ. ಕಣ್ಣಪ್ಪ ಇಲ್ಲಿ ಒಬ್ಬ ಶಿವನ ಭಕ್ತನಾಗಿ ಮಾತ್ರವಲ್ಲ, ಒಬ್ಬ ಯೋಧನಂತೆಯೂ ಕಾಣಿಸಲಿದ್ದಾನೆ. ಈ ಚಿತ್ರದ ಝಲಕ್‌ ಹೇಗಿರಲಿದೆ ಎಂಬುದನ್ನು ನಿಮ್ಮ ಮುಂದಿಡಲು ತುಂಬ ಉತ್ಸುಕನಾಗಿದ್ದೇನೆ" ಎಂದಿದ್ದಾರೆ ವಿಷ್ಣು ಮಂಚು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News