ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹಕ್ಕೆ ಮಮತಾನಿಂದ ಬೆಂಬಲ

    

Last Updated : Apr 20, 2018, 06:09 PM IST
ಚಂದ್ರಬಾಬು ನಾಯ್ಡು ಉಪವಾಸ ಸತ್ಯಾಗ್ರಹಕ್ಕೆ ಮಮತಾನಿಂದ ಬೆಂಬಲ  title=

ನವದೆಹಲಿ: ಆಂದ್ರಪ್ರದೇಶದ ವಿಶೇಷ ಸ್ಥಾನಮಾನಕ್ಕೆ ಆಗ್ರಹಿಸಿ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಇಂದು ಒಂದು ದಿನದ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. ಇದಕ್ಕೆ ಈಗ ಪಶ್ಚಿಮದ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀ ಬೆಂಬಲ ಸೂಚಿಸಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು "ನಾವು 5 ಕೋಟಿ ಆಂದ್ರ ಪ್ರದೇಶದ ಜನರಿಗಾಗಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಮಾಡುತ್ತಿರುವ ಉಪವಾಸಕ್ಕೆ ಬೆಂಬಲ ನೀಡುತ್ತೇವೆ" ಎಂದು ಟ್ವೀಟ್ ಮಾಡಿದ್ದಾರೆ.

ಚಂದ್ರಬಾಬು ನಾಯ್ಡು  ಅವರು 'ಧರ್ಮ ಪೋರಾಟ ದೀಕ್ಷಾ' ಎಂದು ಕರೆಯಲಾಗುವ ಒಂದು ದಿನದ ಉಪವಾಸ ಸತ್ಯಾಗ್ರವನ್ನು ಇಂದು ಬೆಳಗ್ಗೆ 7 ಗಂಟೆ ಪ್ರಾರಂಭಿಸಿದರು.ಇಂದೇ ಸಾಯಂಕಾಲ ಉಪವಾಸವನ್ನು  ಮುಗಿಸಲಿದ್ದಾರೆ ಎಂದು ಹೇಳಲಾಗಿದೆ.

ಇತ್ತೀಚಿಗೆ ಚಂದ್ರಬಾಬು ನಾಯ್ಡು ಸರ್ಕಾರವು ಆಂದ್ರ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡದ ಹಿನ್ನಲೆಯಲ್ಲಿ  ಮೋದಿ ಸರ್ಕಾರಕ್ಕೆ ನೀಡಿರುವ ಬೆಂಬಲವನ್ನು ಹಿಂಪಡೆದು ಸರ್ಕಾರದಿಂದ ಹೊರನಡೆದಿದ್ದರು.

Trending News