CBI-ED ವಿರುದ್ಧ ಪ.ಬಂಗಾಳ ವಿಧಾನ ಸಭೆಯಲ್ಲಿ ಪ್ರಸ್ತಾಪ ಮಂಡನೆ, ಮಮತಾ ಬ್ಯಾನರ್ಜಿ ಹೇಳಿದ್ದೇನು?

West Bengal News: ಈ ಕುರಿತು ಹೇಳಿಕೆ ನೀಡಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರು ಸಿಬಿಐ, ಇಡಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ನನಗನಿಸುತ್ತಿಲ್ಲ. ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಈ ರೀತಿ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

Written by - Nitin Tabib | Last Updated : Sep 19, 2022, 08:26 PM IST
  • ಪಶ್ಚಿಮ ಬಂಗಾಳದ ವಿಧಾನಸಭೆಯು ರಾಜ್ಯದಲ್ಲಿ ಕೇಂದ್ರೀಯ ಸಂಸ್ಥೆಗಳ "ದಬ್ಬಾಳಿಕೆ" ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ.
  • ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ,
  • ಪ್ರಧಾನಿ ಮೋದಿ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ.
CBI-ED ವಿರುದ್ಧ ಪ.ಬಂಗಾಳ ವಿಧಾನ ಸಭೆಯಲ್ಲಿ ಪ್ರಸ್ತಾಪ ಮಂಡನೆ, ಮಮತಾ ಬ್ಯಾನರ್ಜಿ ಹೇಳಿದ್ದೇನು? title=
Resolution Against CBI-ED

West Bengal Assembly: ಪಶ್ಚಿಮ ಬಂಗಾಳದ ವಿಧಾನಸಭೆಯು ರಾಜ್ಯದಲ್ಲಿ ಕೇಂದ್ರೀಯ ಸಂಸ್ಥೆಗಳ "ದಬ್ಬಾಳಿಕೆ" ವಿರುದ್ಧ ನಿರ್ಣಯವನ್ನು ಅಂಗೀಕರಿಸಿದೆ. ಈ ಪ್ರಸ್ತಾವನೆಗೆ ಸಂಬಂಧಿಸಿದಂತೆ ಮಾತನಾಡಿರುವ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಸಿಬಿಐ, ಇಡಿಯನ್ನು ದುರ್ಬಳಕೆ ಮಾಡುತ್ತಿದ್ದಾರೆ ಎಂದು ನಾನು ಭಾವಿಸುವುದಿಲ್ಲ, ಆದರೆ ಕೆಲವು ಬಿಜೆಪಿ ನಾಯಕರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಇದನ್ನು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸರ್ಕಾರ ಮತ್ತು ಪಕ್ಷದ ಕಾರ್ಯವೈಖರಿಯನ್ನು ಪ್ರತ್ಯೇಕವಾಗಿ ಇರಿಸುವಂತೆ ನಾನು ಪ್ರಧಾನಿ ಮೋದಿಯವರನ್ನು ಒತ್ತಾಯಿಸುತ್ತೇನೆ, ಅದು ದೇಶಕ್ಕೆ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.

ಈ ಪ್ರಸ್ತಾವನೆಯನ್ನು ನಿಯಮ 169 ರ ಅಡಿಯಲ್ಲಿ ರಾಜ್ಯ ವಿಧಾನ ಸಭೆಯ ಮೇಜಿನ ಮೇಲೆ ಇರಿಸಲಾಗಿದೆ. ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕರ ವಿರುದ್ಧ ಇಡಿ ಮತ್ತು ಸಿಬಿಐ ಕೆಲವು ಹೈ ಪ್ರೊಫೈಲ್ ಪ್ರಕರಣಗಳ ತನಿಖೆ ನಡೆಸುತ್ತಿರುವ ಸಮಯದಲ್ಲಿ ಪಶ್ಚಿಮ ಬಂಗಾಳ ಸರ್ಕಾರ ಈ ಕ್ರಮ ಕೈಗೊಂಡಿದೆ. ಕಳೆದ ಎರಡು ತಿಂಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಹಲವು ಟಿಎಂಸಿ ನಾಯಕರನ್ನು ಬಂಧಿಸಲಾಗಿದೆ.

ಇದನ್ನೂ ಓದಿ-Asaduddin Owaisi: ಹೈದರಾಬಾದ್ ಹೊರತುಪಡಿಸಿದರೆ ಭಾರತ ಅಪೂರ್ಣ, ಅಮಿತ್ ಶಾಗೆ ಒವೈಸಿ ತಿರುಗೇಟು

ಹಲವು ಟಿಎಂಸಿ ನಾಯಕರನ್ನು ಬಂಧಿಸಲಾಗಿದೆ
ಈ ಹಿಂದೆ ಮಾಜಿ ಸಚಿವ ಮತ್ತು ಅಮಾನತುಗೊಂಡ ಟಿಎಂಸಿ ನಾಯಕ ಪಾರ್ಥ ಚಟರ್ಜಿ ಅವರನ್ನು ಶಿಕ್ಷಕರ ನೇಮಕಾತಿ ಹಗರಣದಲ್ಲಿ ಬಂಧಿಸಲಾಗಿತ್ತು. ಇದರ ನಂತರ, ತೃಣಮೂಲ ಬಿರ್ಭೂಮ್ ಜಿಲ್ಲಾಧ್ಯಕ್ಷ ಅನುಬ್ರತಾ ಮಂಡಲ್ ಅವರನ್ನು ಪ್ರಾಣಿ ಕಳ್ಳಸಾಗಣೆ ಆರೋಪದಡಿ ಬಂಧಿಸಲಾಯಿತು. ಕಳೆದ ವರ್ಷ ತೃಣಮೂಲ ಹಿರಿಯ ನಾಯಕರಾದ ಫಿರ್ಹಾದ್ ಹಕೀಮ್ ಮತ್ತು ಸುಬ್ರತಾ ಮುಖರ್ಜಿ ಅವರನ್ನು ಸಿಬಿಐ ಬಂಧಿಸಿದ್ದನ್ನೂ ಕೂಡ ಈ ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ-Congress President: ಕಾಂಗ್ರೆಸ್ ಪಕ್ಷದಲ್ಲಿ ಸುಧಾರಣೆಯ ಅವಶ್ಯಕತೆ ಬೆಂಬಲಿಸಿ ಸೋನಿಯಾ ಭೇಟಿಯಾದ ಶಶಿ ತರೂರ್

ಸಿಎಂ ಸೋದರಳಿಯನ ವಿಚಾರಣೆಯೂ ನಡೆಯುತ್ತಿದೆ
ಕಲ್ಲಿದ್ದಲು ಕಳ್ಳಸಾಗಣೆ ಹಗರಣದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಮತ್ತು ತೃಣಮೂಲ ಸಂಸದ ಅಭಿಷೇಕ್ ಬ್ಯಾನರ್ಜಿ, ಅವರ ಪತ್ನಿ ರುಜಿರಾ ಬ್ಯಾನರ್ಜಿ, ಪಶ್ಚಿಮ ಬಂಗಾಳದ ಕಾನೂನು ಸಚಿವ ಮಲ್ಲೊಯ್ ಘಾಟಕ್ ಮತ್ತು ರಾಜ್ಯದಲ್ಲಿ ನಿಯೋಜಿಸಲಾದ ಹಲವಾರು ಐಪಿಎಸ್ ಅಧಿಕಾರಿಗಳನ್ನು ಸಹ ಇಡಿ ಈಗಾಗಲೇ ಪ್ರಶ್ನಿಸಿದೆ. ಪಶ್ಚಿಮ ಬಂಗಾಳದ ಶಿಕ್ಷಕರ ನೇಮಕಾತಿ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಪಾರ್ಥ ಚಟರ್ಜಿ ಮತ್ತು ಅವರ ಸಹಾಯಕಿ ಅರ್ಪಿತಾ ಮುಖರ್ಜಿ ಅವರಿಗೆ ಸೇರಿದ 48.22 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಜಪ್ತಿ ಮಾಡಿದೆ. ಪ್ರಸ್ತುತ ಈ ಪ್ರಕರಣದಲ್ಲಿ ಒಟ್ಟು 103.10 ಕೋಟಿ ರೂ.ಆಸ್ತಿಯನ್ನು ಜಪ್ತಿ ಮಾಡಲಾಗಿದೆ.

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News