ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ: ಸಚಿವ ಎಂ.ಬಿ.ಪಾಟೀಲ್‌ ಆಕ್ರೋಶ

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಇಲ್ಲಿಯವರೆಗೂ ನಮಗೆ NDRF ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲವೆಂದು ಸಚಿವ ಎಂ.ಬಿ.ಪಾಟೀಲ್‌ ಕಿಡಿಕಾರಿದ್ದಾರೆ.

Written by - Prashobh Devanahalli | Edited by - Puttaraj K Alur | Last Updated : Feb 12, 2024, 07:19 PM IST
  • ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡು ಸದನದೊಳಕ್ಕೆ ಬಂದು, ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ
  • ಅವರು ಜೈ ಶ್ರೀರಾಮ್ ಎನ್ನುತ್ತಾರೆ. ನಾವು ರಾಮನ ಜೊತೆಗೆ ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ಎಲ್ಲರಿಗೂ ಜೈಕಾರ ಹಾಕುತ್ತೇವೆ
  • ಕೇಸರಿ ಶಾಲು ಬರೀ ಬಿಜೆಪಿಯ ಸ್ವತ್ತಲ್ಲ ಎಂದು ಎಂದು ಆಕ್ರೋಶ ವ್ಯಕ್ತಪಡಿಸಿದ ಸಚಿವ ಎಂ.ಬಿ.ಪಾಟೀಲ್
ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ: ಸಚಿವ ಎಂ.ಬಿ.ಪಾಟೀಲ್‌ ಆಕ್ರೋಶ title=
ಬಿಜೆಪಿ ವಿರುದ್ಧ ಎಂ.ಬಿ.ಪಾಟೀಲ್‌ ಆಕ್ರೋಶ!

ಬೆಂಗಳೂರು: ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬರುವ ಮುನ್ನ ಕೊಟ್ಟಿದ್ದ ಮಾತಿನಂತೆ ಐದೂ ಗ್ಯಾರಂಟಿಗಳನ್ನು ಈಡೇರಿಸಿದ್ದು, ನಮ್ಮ ನಡೆ-ನುಡಿ ಎರಡೂ ಒಂದಾಗಿದೆ. ಬಜೆಟ್ ಅಧಿವೇಶನದ ಆರಂಭದಲ್ಲಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಇದನ್ನೇ ಹೇಳಲಾಗಿದೆ. ನಮ್ಮ ವಿರುದ್ಧ ಮಾತನಾಡುತ್ತಿರುವ ಬಿಜೆಪಿ ಸುಳ್ಳಿನ ಫ್ಯಾಕ್ಟರಿ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ತಿರುಗೇಟು ನೀಡಿದ್ದಾರೆ.

ಬಜೆಟ್ ಅಧಿವೇಶನದ ಮೊದಲ ದಿನ ಉಭಯ ಸದನಗಳನ್ನುದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣವನ್ನು ಬಿಜೆಪಿ ಟೀಕಿಸಿರುವ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಪಕ್ಷವು ಮಾತು ಮತ್ತು ಕೃತಿಗಳಲ್ಲಿ ಸದಾ ಒಂದಾಗಿದೆ. ಆದರೆ ಬಿಜೆಪಿ ಇದಕ್ಕೆ ತದ್ವಿರುದ್ಧವಾಗಿದೆ. ತಾವು ಅಧಿಕಾರಕ್ಕೆ ಬಂದರೆ ಸ್ವಿಸ್ ಬ್ಯಾಂಕಿನಲ್ಲಿರುವ ಕಪ್ಪು ಹಣವನ್ನೆಲ್ಲ ವಾಪಸ್ ತಂದು ಒಬ್ಬೊಬ್ಬರ ಖಾತೆಗೂ 15 ಲಕ್ಷ ರೂ. ಹಾಕುತ್ತೇವೆಂದರು, ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಯ ಮಾತುಗಳನ್ನಾಡಿದರು ಮತ್ತು ರೈತರ ಆದಾಯ ದ್ವಿಗುಣಗೊಳಿಸುವುದಾಗಿ ಹೇಳಿಕೊಂಡು ಬಂದರು. ಆದರೆ ಈ ಭರವಸೆಗಳ ಗತಿ ಏನಾಯಿತು ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಮ್ಮ ಅವಧಿಯ ಕೆಲಸಗಳನ್ನು ತಮ್ಮ ಸಾಧನೆ ಎಂದು ಹೇಳಿಕೊಂಡಿದ್ದಾರೆ: ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಬರಗಾಲ ತಾಂಡವವಾಡುತ್ತಿದೆ. ಕೇಂದ್ರದ ಅಧಿಕಾರಿಗಳು ಬಂದು ವರದಿ ಸಲ್ಲಿಸಿದ್ದು ಕೂಡ ಹಳೆಯ ಮಾತಾಯಿತು. ಆದರೆ ಕೇಂದ್ರದ ಬಿಜೆಪಿ ಸರ್ಕಾರವು ಇಲ್ಲಿಯವರೆಗೂ ನಮಗೆ NDRF ಅಡಿಯಲ್ಲಿ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಜೊತೆಗೆ ಈ ಪರಿಹಾರ ಹಣದ ಪ್ರಮಾಣವನ್ನು ಶೇ.10ರಷ್ಟು ಹೆಚ್ಚಿಸುವಂತೆ ಕೇಳಿಕೊಂಡೆವು. ಅದಕ್ಕೂ ಬಿಜೆಪಿ ಕಿವುಡಾಗಿದೆ. ಇನ್ನೊಂದೆಡೆಯಲ್ಲಿ ನಾವು ನಮ್ಮ ರೈತರಿಗೆ ಎಕರೆಗೆ 2,000 ರೂ.ಗಳಂತೆ ಪರಿಹಾರ ಕೊಟ್ಟಿದ್ದೇವೆ ಎಂದು ಹರಿಹಾಯ್ದರು.

ಬಿಜೆಪಿಯವರು ಕೇಸರಿ ಶಾಲು ಹಾಕಿಕೊಂಡು ಸದನದೊಳಕ್ಕೆ ಬಂದು, ಪ್ರಚೋದನಕಾರಿ ರೀತಿಯಲ್ಲಿ ವರ್ತಿಸಿದ್ದಾರೆ. ಅವರು ಬರೀ ಜೈ ಶ್ರೀರಾಮ್ ಎನ್ನುತ್ತಾರೆ. ನಾವು ರಾಮನ ಜೊತೆಗೆ ಅಂಬೇಡ್ಕರ್, ಬಸವಣ್ಣ, ವಾಲ್ಮೀಕಿ ಎಲ್ಲರಿಗೂ ಜೈಕಾರ ಹಾಕುತ್ತೇವೆ. ನಮ್ಮ ಮನೆಗಳಲ್ಲಿ, ಲಿಂಗಾಯತ ಮಠಗಳಲ್ಲಿ ಮೊದಲಿನಿಂದಲೂ ಕೇಸರಿ ವಸ್ತ್ರದ ಉಪಯೋಗವಿದೆ. ಕೇಸರಿ ಶಾಲುವೇನೂ ಬಿಜೆಪಿಯ ಸ್ವತ್ತಲ್ಲ ಎಂದು ಪಾಟೀಲ್‌ ಕುಟುಕಿದರು.

ಇದನ್ನೂ ಓದಿ: ಅಕ್ರಮ ಮರಳು ದಂಧೆಕೋರರಿಂದ ಪೊಲೀಸ್ ‌ಪೇದೆ ಮೇಲೆ ಹಲ್ಲೆ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News