Karnataka Bandh: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ

Cauvery Water Sharing Dispute: ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.

Written by - Puttaraj K Alur | Last Updated : Sep 28, 2023, 09:46 PM IST
  • ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ವಿರೋಧಿಸಿ ನಾಳೆ ಕರ್ನಾಟಕ ಬಂದ್‍ಗೆ ಕರೆ
  • ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೂ 144 ಸೆಕ್ಷನ್ ಜಾರಿ
  • ಬೆಂಗಳೂರಿನಲ್ಲಿ ಪೊಲೀಸ್ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ ಎಂದ ಬಿ.ದಯಾನಂದ್
Karnataka Bandh: ಇಂದು ಮಧ್ಯರಾತ್ರಿಯಿಂದಲೇ ಬೆಂಗಳೂರಲ್ಲಿ 144 ಸೆಕ್ಷನ್ ಜಾರಿ title=
ಇಂದಿನಿಂದಲೇ 144 ಸೆಕ್ಷನ್ ಜಾರಿ!

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ನಾಳೆ ಅಂದರೆ ಶುಕ್ರವಾರ(ಸೆ.29) ಕರ್ನಾಟಕ ಬಂದ್‍ಗೆ ಕರೆ ನೀಡಲಾಗಿದೆ. ಮಂಗಳವಾರವಷ್ಟೇ ಯಶಸ್ವಿಯಾಗಿ ಬೆಂಗಳೂರು ಬಂದ್ ಆಚರಿಸಿದ್ದ ರೈತರು ಮತ್ತು ವಿವಿಧ ಕನ್ನಡಪರ ಸಂಘಟನೆಗಳು ನಾಳೆ ಕರ್ನಾಟಕ ಬಂದ್‍ಗೆ ಕರೆ ನೀಡಿವೆ.

ಕರ್ನಾಟಕ ಬಂದ್ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪೊಲೀಸ್ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಸುದ್ದಿಗಾರರ ಜೊತೆಗೆ ಮಾತನಾಡಿರುವ ಅವರು, ‘ಬೆಂಗಳೂರಿನಲ್ಲಿ ಪ್ರತಿಭಟನಾ ಹಾಗೂ ರ್ಯಾಲಿಗಳಿಗೆ ಅವಕಾಶವಿಲ್ಲ. ಇಂದು ಮಧ್ಯರಾತ್ರಿಯಿಂದ ನಾಳೆ ಮಧ್ಯರಾತ್ರಿಯವರೆಗೂ 144 ಸೆಕ್ಷನ್ ಜಾರಿ ಮಾಡಲಾಗುತ್ತದೆ’ ಎಂದು ಹೇಳಿದರು.

ಇದನ್ನೂ ಓದಿ: ಫಿಕ್ ನಿಕ್ ಗೆ ಬಂದಿದ್ದ ತಂದೆ ಮಗ ಡ್ಯಾಂನಲ್ಲಿ ಮುಳುಗಿ ಸಾವು

ಸುಪ್ರೀಂಕೋರ್ಟ್ ಆದೇಶದ ಪ್ರಕಾರ ಯಾವುದೇ ಬಂದ್ ಮಾಡುವುದಾಗಲಿ, ಸಾರ್ವಜನಿಕ ಅಸ್ತವ್ಯಸ್ತತೆ ಮಾಡುವ ಹಾಗಿಲ್ಲ. ಫ್ರೀಡಂ ಪಾರ್ಕ್‍ನಲ್ಲಿ ಮಾತ್ರ ಪ್ರತಿಭಟನೆಗೆ ಅವಕಾಶ ಇದೆ. ಈ ರೀತಿ ಬಂದ್ ಮಾಡಿ ಸಾರ್ವಜನಿಕ ಆಸ್ಥಿ-ಪಾಸ್ತಿ ನಷ್ಟವಾದ್ರೆ ಆಯೋಜಕರೇ ಹೊಣೆಯಾಗುತ್ತಾರೆ. ಬಲವಂತವಾಗಿ ಬಂದ್ ಮಾಡುವವರ ಮೇಲೆ ನಾವು ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಅಂತಾ ಖಡಕ್ ಎಚ್ಚರಿಕೆ ಸಂದೇಶ ನೀಡಿದ್ದಾರೆ.

ಬೆಂಗಳೂರಿನ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಅಪರಾಧ ಹಿನ್ನಲೆ ಇರುವವರನ್ನು ಇಂದು ರಾತ್ರಿಯೇ ವಶಕ್ಕೆ ಪಡೆಯಲಾಗುತ್ತೆ. ಯಾರೇ ರಕ್ಷಣೆ ಕೇಳಿದರೂ ನಾವು ಸಹಾಯ ಮಾಡುತ್ತೇವೆ. ಕರ್ನಾಟಕ ಬಂದ್‍ನಲ್ಲಿ ಯಾವ ಸ್ಟಾರ್ ನಟರು ಭಾಗವಹಿಸುತ್ತಾರೆ ಅನ್ನೋದು ನಮಗೆ ಗೊತ್ತಿಲ್ಲ, ಆದರೆ ಕರ್ನಾಟಕ ಫಿಲ್ಮ್ ಚೇಂಬರ್ ಬಂದ್‍ಗೆ ಬೆಂಬಲ ನೀಡಿದೆ. ನಾವು ಯಾರಿಗೂ ನಿರ್ದೇಶನ ಮಾಡಲ್ಲ, ಸ್ವಯಂ ಪ್ರೇರಿತವಾಗಿ ಬಂದ್ ಮಾಡುವವರು ಮಾಡಬಹುದು ಅಂತಾ ಹೇಳಿದ್ದಾರೆ.

ಇದನ್ನೂ ಓದಿ: ಭಗತಸಿಂಗ್ ಜಯಂತಿ ಕಾರ್ಯಕ್ರಮ ವೇಳೆ ಗೋಡ್ಸೆ ಭಾವಚಿತ್ರ ಮೆರವಣಿಗೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News