ನೀರಿನ ಅಭಾವ ಉದ್ಬವವಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾದ ಪಾಲಿಕೆ ಹಾಗೂ ಜಲಮಂಡಳಿ!

Chief Secretary Rakesh Singh: ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಉದ್ಬವವಾಗದಂತೆ ಪಾಲಿಕೆ ಹಾಗೂ ಜಲಮಂಡಳಿಯು ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮಾನ್ಯ ಆಡಳಿತಗಾರರು ಹಾಗೂ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

Written by - Savita M B | Last Updated : Feb 24, 2024, 02:14 PM IST
  • ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ
  • ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿತಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು
  • ವಲಯ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನೀರಿನ ಅಭಾವ ಉದ್ಬವವಾಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಲು ಮುಂದಾದ ಪಾಲಿಕೆ ಹಾಗೂ ಜಲಮಂಡಳಿ!   title=

Lack of water: ಬಿಬಿಎಂಪಿ ವ್ಯಾಪ್ತಿಯಲ್ಲಿ ನೀರಿನ ಅಭಾವ ಕುರಿತು ಇಂದು ಪಾಲಿಕೆ ಕೇಂದ್ರ ಕಛೇರಿಯ ಸಭಾಂಗಣ-01ರಲ್ಲಿ ನಡೆದ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ ಪಟ್ಟಿ ಮಾಡಿಕೊಂಡು ಅಲ್ಲಿ ನೀರಿನ ಸಮಸ್ಯೆ ಬಗೆಹರಿಸಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕು. ನೀರಿನ ಅಭಾವ ಹೆಚ್ಚಿರುವ ಕಡೆ ಜಲಮಂಡಳಿ ಅಧಿಕಾರಿಗಳ ಜೊತೆ ಸಮನ್ವಯ ಮಾಡಿಕೊಂಡು ನಾಗರಿಕರಿಗೆ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು.

ಎಲ್ಲಾ ವಲಯ ಆಯುಕ್ತರು ನಿಮ್ಮ ಪ್ರದೇಶದಲ್ಲಿ ಎಲ್ಲೆಲ್ಲಿ ನೀರಿನ ಸಮಸ್ಯೆ ಇದೆ, ಎಷ್ಟು ಅನುದಾನದ ಅಗತ್ಯವಿದೆ ಎಂಬುದರ ಮಾಹಿತಿಯನ್ನು ಕೊಡಿ, ಕೂಡಲೆ ಅಗತ್ಯ ಅನುದಾನವನ್ನು ಒದಗಿಸಲಾಗುವುದು. 110 ಹಳ್ಳಿಗಳಿಗೆ ನಿರಿನ ಸಮಸ್ಯೆ ಬಗೆಹರಿಸಲು ಜಲಮಂಡಳಿಯ ಅಧಿಕಾರಿ/ಸಿಬ್ಬಂದಿಗಳನ್ನು ವಲಯ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಮಾತನಾಡಿ, ಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಸಮಸ್ಯೆ ಎದುರಾಗಬಾರದು. ಈ ನಿಟ್ಟಿನಲ್ಲಿ ಕೂಡಲೆ ಸೂಕ್ತ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ನೀರಿನ ಅಭಾವ ಬಾರದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪಾಲಿಕೆಯ ಮಹದೇವಪುರ, ಆರ್.ಆರ್.ನಗರ, ಬೊಮ್ಮನಹಳ್ಳಿ, ದಾಸರಹಳ್ಳಿ ಹಾಗೂ ಯಲಹಂಕ ವಲಯಗಳಿಗೆ(110 ಹಳ್ಳಿಗಳು ಸೇರಿದಂತೆ) ಬೋರ್ ವೆಲ್‌ಗಳನ್ನು ಕೊರೆಯಲು 131 ಕೋಟಿ ರೂ. ಅನುದಾನವನ್ನು ಹಂಚಿಕೆ ಮಾಡಲಾಗಿದ್ದು ಅವಶ್ಯಕತೆಯಿರುವ ಕಡೆ ಕೊಳವೆ ಬಾವಿಗಳನ್ನು ಕೊರೆಯಬೇಕು ಎಂದರು. 

ಇದನ್ನೂ ಓದಿ-ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯದ ವಿರುದ್ಧ ನಿರ್ಣಯ ಮಂಡನೆಗೆ ಬಿಜೆಪಿ ಬೆಂಬಲ ನೀಡಲಿ: ಡಿ ಕೆ ಶಿವಕುಮಾರ್

ನಗರದಲ್ಲಿ 58 ಕಡೆ ನೀರಿನ ಸಮಸ್ಯೆಯಿದ್ದು, ಮಹದೇವಪುರ 16, ಆರ್.ಆರ್ ನಗರ 25, ಬೊಮ್ಮನಹಲ್ಳಿ 5 ಕಡೆ, ಯಲಹಂಕ ಹಾಗೂ ದಾಸರಹಳ್ಳಿ ತಲಾ 3 ಕಡೆ ನೀರಿನ ಅಭಾವ ಹೆಚ್ಚಿದ್ದು, ಈ ಸಂಬಂಧ ಕೂಡಲೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಿ ಬೋರ್ ವೆಲ್‌ಗಳನ್ನು ಕೊರೆದು ನೀರಿನ ಅಭಾವವನ್ನು ಕಡಿಮೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದಲ್ಲಿ ಎಲ್ಲೆಲ್ಲಿ ಕುಡಿಯುವ ನೀರಿನ ಘಟಕಗಳು ನಿಂತಿವೆ, ಅಲ್ಲಿ ಕೂಡಲೆ ಬೋರ್ ವೆಲ್‌ಗಳನ್ನು ಹಾಕಿ ಆರ್.ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡಬೇಕು. ಆರ್.ಒ ಫ್ಲಾಂಟ್ ಗಳಿಗೆ ನೀರಿನ ವ್ಯವಸ್ಥೆ ಮಾಡುವವರೆಗೆ ತಾತ್ಕಾಲಿಕವಾಗಿ ನೀರಿನ ಟ್ಯಾಂಕರ್ ಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ನಗರದ ಸಿಎಂಸಿ, ಟಿಎಂಸಿ ಹಾಗೂ ಕೋರ್ ಏರಿಯಾಗಳಲ್ಲಿ ಈಗಾಗಲೇ ಪಾಲಿಕೆ ವತಿಯಿಂದ ಕೊರೆದಿರುವ ಕೊಳವೆ ಬಾವಿಗಳು ಪಾಲಿಕೆಯಿಂದ ಜಲಮಂಡಳಿಗೆ ಹಸ್ತಾಂತರಿಸಲಾಗಿದೆ. ಮುಂದೆ ಕೊಳವೆಬಾವಿಗಳ ಅವಶ್ಯಕತೆಯಿದ್ದಲ್ಲಿ ಜಲಮಂಡಳಿಯಿಂದಲೇ ಕೊಳವೆ ಬಾವಿ ಕೊರೆಯಲಿದ್ದು, ಪಾಲಿಕೆಯಿಂದ ಜಲಮಂಡಳಿಗೆ ಹಣ ನೀಡಲಾಗುತ್ತದೆ ಎಂದು ಹೇಳಿದರು.

ಜಲಮಂಡಳಿಯ ಅಧ್ಯಕ್ಷರಾದ ರಾಮ್ ಪ್ರಸಾತ್ ಮನೋಹರ್ ರವರು ಮಾತನಾಡಿ, ಬೆಂಗಳೂರು ವ್ಯಾಪ್ತಿಯಲ್ಲಿ ವಾರ್ಷಿಕವಾಗಿ 19 ಟಿಎಂಸಿ ನೀರನ್ನು ಹಂಚಿಕೆ ಮಾಡಲಾಗುತ್ತಿದ್ದು, ಪ್ರತಿನಿತ್ಯ ಸುಮಾರು 1472 ಎಂ.ಎಲ್.ಡಿ ನಿರನ್ನು ಸರಬರಾಜು ಮಾಡಲಾಗುತ್ತಿದೆ. ಫೆಬ್ರವರಿಯಿಂದ ಜುಲೈ 2024 ರವರೆಗೆ ಅಂದಾಜು 9.48 ಟಿಎಂಸಿ ನೀರು ಅವಶ್ಯಕತೆಯಿದೆ ಎಂದು ಹೇಳಿದರು. 

ನಗರದಲ್ಲಿ ಜಳಮಂಡಳಿಯಿಂದ 10.84 ಲಕ್ಷ ನೀರಿನ ಸಂಪರ್ಕ ಹೊಂದಿವೆ. ನಗರದಲ್ಲಿ 10955 ಕೊಳವೆ ಬಾವಿಗಳಲ್ಲಿ 1214 ಕೊಳವೆ ಬಾವಿಗಳು ಬತ್ತಿದ್ದು, 3700 ಕೊಳವೆ ಬಾವಿಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿದೆ. ಈ ಸಂಬಂಧ ಸರಿಪಡಿಸಬಹುದಾದ ಕೊಳವೆ ಬಾವಿಗಳನ್ನು ಗುರುತಿಸಿ ಅಂತಹವುಗಳನ್ನು ಫ್ಲಷಿಂಗ್ ಹಾಗೂ ರೀಡ್ರಿಲ್ ಮಾಡಲು ಕ್ರಮವಹಿಸಲಾಗುತ್ತಿದೆ ಎಂದರು. 

ಇದನ್ನೂ ಓದಿ-ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ

ನಗರದಲ್ಲಿ ನೀರಿನ ಸಮಸ್ಯೆ ಹೆಚ್ಚಿರುವ 257 ಸ್ಥಳಗಳನ್ನು ಗುರುತಿಸಿದ್ದು, ಆ ಪ್ರದೇಶಗಳಿಗೆ ನೀರಿನ ಸರಬರಾಜು ಮಾಡಲು 68 ಟ್ಯಾಂಕರ್ ಗಳ ಜೊತೆಗೆ 18 ಹೊಸ ಟ್ಯಾಂಕರ್ ಗಳನ್ನು ಖರೀದಿಸಲು ಮತ್ತು 200 ಖಾಸಗಿ ಟ್ಯಾಂಕರ್ ಗಳನ್ನು ಬಾಡಿಗೆಗೆ ಪಡೆಯಲು ಕ್ರಮವಹಿಸಲಾಗಿದೆ ಎಂದು ಹೇಳಿದರು. ಜೊತೆಗೆ ಕಾವೇರಿ 5ನೇ ಹಂತ ಏಪ್ರಿಲ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ತಿಳಿಸಿದರು.

ಸಿಂಟೆಕ್ಸ್ ಟ್ಯಾಂಕ್‌ಗಳ ಮೂಲಕ ನೀರಿನ ವ್ಯವಸ್ಥೆ:
ನಗರದ ಆರ್.ಆರ್ ನಗರ ವಲಯದಲ್ಲಿ ಈಗಾಗಲೇ ಪ್ರಮುಖ ಸ್ಥಳದಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅದೇ ರೀತಿ ಎಲ್ಲಾ ವಲಯಗಳಲ್ಲಿಯೂ ಪ್ರಮುಖ ಸ್ಥಳ, ಕೊಳಗೇರಿ ಪ್ರದೇಶ ಸೇರಿದಂತೆ ಇನ್ನಿತರೆ ಸ್ಥಳಗಳಲ್ಲಿ ಸಿಂಟೆಕ್ಸ್ ಟ್ಯಾಂಕ್‌ಗಳನ್ನು ಅಳವಡಿಸಿ ಜಲಮಂಡಳಿಯಿಂದ ನೀರಿನ ವ್ಯವಸ್ಥೆ ಮಾಡಲಾಗುವುದು. 

110 ಹಳ್ಳಿಗಳಲ್ಲಿ ನೀರಿ ಸಮಸ್ಯೆಗೆ ಸಮಗ್ರ ವ್ಯವಸ್ಥೆ:
ಬಿಬಿಎಂಪಿ ವ್ಯಾಪ್ತಿಗೆ ಬರುವ 110 ಹಳ್ಳಿಗಳಲ್ಲಿ ಹೆಚ್ಚು ಸಮಸ್ಯೆ ಇದ್ದು, ಹಳ್ಳಿಗಳಿಗೆ ಹೆಚ್ಚು ಒತ್ತು ನೀಡಿ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಿದೆ. ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ಬೋರ್‌ವೆಲ್‌ಗಳನ್ನು ಕೊರೆಯಬೇಕು. ಜೊತೆಗೆ ನೀರಿನ ಟ್ಯಾಂಕರ್ ಗಳ ವ್ಯವಸ್ಥೆ ಮಾಡಿಕೊಂಡು ನೀರಿನ ಸಮಸ್ಯೆ ಎದುರಾಗದಂತೆ ನೋಡಿಕೊಳ್ಳಬೇಕು. 110 ಹಳ್ಳಿಗಳಿಗೆ ಜಲಮಂಡಳಿಯಿಂದ 40000 ಸಂಪರ್ಕ ನೀಡಲಾಗಿದ್ದು, 110 ಹಳ್ಳಿಗಳಲ್ಲಿ ಕಾರ್ಯನಿರ್ವಹಿಸುವ ಜಲಮಂಡಳಿಯ ಅಧಿಕಾರಿ/ಸಿಬ್ಬಂದಿ ಪಾಲಿಕೆ ವಲಯ ಆಯುಕ್ತರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದಾರೆ. 

ಸಭೆಯಲ್ಲಿ ಯೋಜನಾ ವಿಭಾಗದ ವಿಶೇಷ ಆಯುಕ್ತರಾದ ಡಾ. ಕೆ. ಹರೀಶ್ ಕುಮಾರ್, ಎಲ್ಲಾ ವಲಯ ಆಯುಕ್ತರುಗಳು, ವಲಯ ಜಂಟಿ ಆಯುಕ್ತರು, ಮುಖ್ಯ ಅಭಿಯಂತರರು, ಪಾಲಿಕೆ/ಜಲಮಂಡಳಿ ಅಧಿಕಾರಿಗಳು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News