ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ರೆ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್

DCM DK Shivakumar: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.

Written by - Prashobh Devanahalli | Last Updated : Feb 3, 2024, 01:18 PM IST
  • ಬಿಜೆಪಿ ನಾಯಕರು ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ
  • ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ
  • ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ರೆ ರಾಜ್ಯಕ್ಕಾದ ಅನ್ಯಾಯ ಸರಿಪಡಿಸಲಿ: ಡಿಸಿಎಂ ಡಿ.ಕೆ.ಶಿವಕುಮಾರ್ title=

ಕಲಬುರಗಿ: ಬಿಜೆಪಿ ನಾಯಕರಿಗೆ ಮಾನ, ಮರ್ಯಾದೆ ಇದ್ದರೆ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸಲಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬಿಜೆಪಿ ನಾಯಕರು ರಾಜ್ಯಕ್ಕೆ ನ್ಯಾಯ ಒದಗಿಸಲು ವಿಫಲವಾದ ಬಗ್ಗೆ ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಅವರು ಒಂದು ದಿನವೂ ಪ್ರಧಾನಿ ಭೇಟಿ ಮಾಡಿ, ರಾಜ್ಯದ ಹಿತದ ಬಗ್ಗೆ ಧ್ವನಿ ಎತ್ತಲಿಲ್ಲ. ಮೊದಲು ಕೇಂದ್ರದ ಮೇಲೆ ಒತ್ತಡ ತಂದು ರಾಜ್ಯಕ್ಕೆ ಆಗಿರುವ ಅನ್ಯಾಯ ಸರಿಪಡಿಸಲಿ. ಇದೇ ಕಾರಣಕ್ಕೆ ರಾಜ್ಯದ ಜನ ಅವರನ್ನು ಧಿಕ್ಕರಿಸಿದ್ದಾರೆ ಎಂದರು. 

ಬರಗಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಪರಿಹಾರ ನೀಡದಿರುವುದು, ಬಜೆಟ್ ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯ, ಈ ಹಿಂದಿನ ಬಜೆಟ್ ನಲ್ಲಿ ಘೋಷಣೆ ಮಾಡಿದ ಅನುದಾನ ಬಿಡುಗಡೆ ಮಾಡದಿರುವುದರ ವಿರುದ್ಧ ಫೆ. 7ರಂದು ದೆಹಲಿಯಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು. 

ಇದನ್ನೂ ಓದಿ: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಒಣಮರಗಳ ತೆರವಿನ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿ: ಸಾರ್ವಜನಿಕ ಪ್ರಕಟಣೆ 

ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲಾ ಸಚಿವರು, ಶಾಸಕರು, ಸಂಸದರು ಇದೇ ಮೊದಲ ಬಾರಿಗೆ ಇಂತಹ ಪ್ರತಿಭಟನೆ ಮಾಡಲು ತೀರ್ಮಾನಿಸಿದ್ದೇವೆ. ಸಿದ್ದರಾಮಯ್ಯ ಅವರು ಕುಂಕುಮ ತಿರಸ್ಕಾರ ಮಾಡಿದ ವಿಚಾರವಾಗಿ ಕೇಳಿದಾಗ, ನನಗೆ ಸುಗಂಧ ರಾಜ ಹೂವು ಅಲರ್ಜಿ ಇದೆ. ಅದೇ ರೀತಿ ಬೇರೆಯವರಿಗೆ ಬೇರೆ, ಬೇರೆ ರೀತಿಯ ಅಲರ್ಜಿ ಇರುತ್ತದೆ. ಸಿದ್ದರಾಮಯ್ಯ ಕುಂಕುಮ ಇಟ್ಟುಕೊಳ್ಳುವುದಿಲ್ಲ ಎಂದು ಯಾರು ಹೇಳಿದರು? ಮೊನ್ನೆಯಷ್ಟೇ ಅವರು ಕುಂಕುಮ ಇಟ್ಟುಕೊಂಡಿದ್ದರು. ಹೆಂಗಸರಂತೆ ಅಗಲವಾಗಿ ಕುಂಕುಮ ಇಟ್ಟುಕೊಳ್ಳಲು ಆಗುತ್ತದೆಯೇ ಎಂದು ಪ್ರಶ್ನಿಸಿದರು.

ಜಾತಿ ಕಾರಣಕ್ಕೆ ಸ್ವಾಮೀಜಿಗಳಿಗೆ ಗರ್ಭಗುಡಿಗೆ ಪ್ರವೇಶ ನಿರಾಕರಣೆ ಬಗ್ಗೆ ಕೇಳಿದಾಗ, ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೆ. ಸಾಮಾನ್ಯವಾಗಿ ದೇವಾಲಯಗಳನ್ನು ಬೆಳಗ್ಗೆ ಮತ್ತು ಸಂಜೆ ವೇಳೆ ಸ್ವಚ್ಛ ಮಾಡುವುದು ಸಹಜ. ಈ ಪ್ರಕರಣದಲ್ಲಿ ಏನು ಉದ್ದೇಶ ಇದೆ ಎಂದು ಜಿಲ್ಲಾ ಸಚಿವರು, ಮುಜರಾಯಿ ಇಲಾಖೆ ಅಧಿಕಾರಿಗಳ ಜತೆ ಚರ್ಚೆ ಮಾಡುತ್ತೇನೆ. ನಮ್ಮಲ್ಲಿ ಇಂತಹ ಅಸ್ಪೃಶ್ಯತೆ ಇಲ್ಲ. ನಾವೆಲ್ಲರೂ ಒಂದೇ. ಮಾನವೀಯತೆಯಿಂದ ಎಲ್ಲರೂ ಒಟ್ಟಾಗಿ ಬದುಕಬೇಕು. ಎಲ್ಲಾ ಧರ್ಮದವರಿಗೂ ದೇವಾಲಯಗಳಲ್ಲಿ ಅವಕಾಶ ನೀಡುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: ಕರ್ನಾಟಕದಲ್ಲಿ ಕಾಂಗ್ರೆಸ್ ನಡೆಸುತ್ತಿರುವುದು ತುಘಲಕ್ ದರ್ಬಾರ್!: ಬಿಜೆಪಿ ಆಕ್ರೋಶ 

ಡಿ.ಕೆ. ಸುರೇಶ್ ಅವರ ಹೇಳಿಕೆ ಬಗ್ಗೆ ಕೇಳಿದಾಗ, ಇಡೀ ಭಾರತ ಒಂದು. ಕಾಂಗ್ರೆಸ್ ಪಕ್ಷ ಭಾರತವನ್ನು ಸದಾ ಒಗ್ಗಟ್ಟಾಗಿ ಇಟ್ಟಿದೆ. ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ನಮ್ಮ ನಾಯಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಸುರೇಶ್ ಅವರು ಕೂಡ ದೇಶವನ್ನು ಒಗ್ಗಟ್ಟಾಗಿ ಇಡಬೇಕು, ಸಮಾನತೆಯಿಂದ ದೇಶದ ಸಂಪತ್ತು ಹಂಚಬೇಕು ಎಂದು ಧ್ವನಿ ಎತ್ತಿದ್ದಾರೆ ಎಂದು ತಿಳಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News