Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ಧರೆಗುರುಳಿದ ಮರಗಳು, ವಾಹನ ಸವಾರರ ಪರದಾಟ

Bengaluru Rain Updates: ಬೆಂಗಳೂರಿನಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಧಾರಕಾರ ಮಳೆ ಸುರಿದಿದ್ದು, ಹಲವೆಡೆ ಮರಗಳು ಧರೆಗುರುಳಿವೆ. ಇದರಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ನಗರದಲ್ಲಿ ಕೆಲವು ಕಡೆ ಮನೆಗಳಿಗೆ ನೀರು ನುಗ್ಗಿದ್ದು, ಜನ ಪರದಾಡುವಂತಾಯಿತು. 

Written by - Chetana Devarmani | Last Updated : May 1, 2023, 08:43 PM IST
  • ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆ
  • ಧಾರಾಕಾರ ಮಳೆಗೆ ಧರೆಗುರುಳಿದ ಮರಗಳು
  • ವಾಹನ ಸವಾರರ ಪರದಾಟ
Bengaluru Rains: ಬೆಂಗಳೂರಿನಲ್ಲಿ ಧಾರಾಕಾರ ಮಳೆ.. ಧರೆಗುರುಳಿದ ಮರಗಳು, ವಾಹನ ಸವಾರರ ಪರದಾಟ title=
Rain

ಬೆಂಗಳೂರು: ದಕ್ಷಿಣದ ಹಲವು ರಾಜ್ಯಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದಲೇ ನಗರದಲ್ಲಿ ಮೋಡ ಕವಿದ ವಾತಾವರಣವಿತ್ತು. ಸಂಜೆಯ ವೇಳೆ ಕೋರಮಂಗಲ, ಮಡಿವಾಳ, ಶಾಂತಿನಗರ, ಬಸವನಗುಡಿ, ಚಾಮರಾಜಪೇಟೆ, ಎಂಜಿ ರಸ್ತೆ, ಇಂದಿರಾನಗರ, ಶಿವಾಜಿನಗರ, ಹಲಸೂರು, ಗಾಂಧಿನಗರ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆ ಜೋರಾಗಿ ಸುರಿಯಿತು. 

ಹಲವು ಪ್ರದೇಶಗಳ ರಸ್ತೆಯಲ್ಲೆಲ್ಲ ನೀರು ಹರಿಯಿತು. ರಾಜಕಾಲುವೆ ಹಾಗೂ ಚರಂಡಿಯ ತ್ಯಾಜ್ಯ ರಸ್ತೆಗೆ ಬಂದಿತ್ತು. ಮಳೆ ನೀರು ರಸ್ತೆಯಲ್ಲಿ ಹರಿದಿದ್ದರಿಂದ ವಾಹನಗಳ ಸಂಚಾರಕ್ಕೆ ಅಡ್ಡಿಯಾಯಿತು. ಇದರಿಂದಾಗಿ ವಾಹನ ಸವಾರರು ಪರದಾಡುವಂತಾಯಿತು. ನಗರದ ಹಲವೆಡೆ ಜಲಾವೃತಗೊಂಡಿದ್ದರಿಂದ ವಾಹನ ಸಂಚಾರಕ್ಕೂ ಅಡ್ಡಿಯಾಗಿತ್ತು. ಸುದೀರ್ಘ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಿಂದಾಗಿ ಹಲವು ಮನೆಗಳಿಗೆ ಹಾನಿಯಾಗಿದೆ ಎಂದು ವರದಿಯಾಗಿದೆ. ಮನೆಗಳಿಗೆ ನೀರು ನುಗ್ಗಲಾರಂಭಿಸಿತು. 

ಇದನ್ನೂ ಓದಿ: ರಾಜ್ಯಾದ್ಯಂತ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆ..

ಶಿವಾನಂದ ವೃತ್ತ, ಮೆಜೆಸ್ಟಿಕ್‌ ಬಳಿಯ ರೈಲ್ವೆ ಕೆಳ ಸೇತುವೆಯಲ್ಲಿ ನೀರು ನಿಂತುಕೊಂಡಿದೆ. ಈ ರಸ್ತೆಯಲ್ಲಿ ವಾಹನಗಳು ನಿಧಾನಗತಿಯಲ್ಲಿ ಸಾಗುತ್ತಿವೆ. ಹೊಸೂರು ರಸ್ತೆ, ಬಳ್ಳಾರಿ ರಸ್ತೆ, ತುಮಕೂರು ರಸ್ತೆ, ಕನಕಪುರ ರಸ್ತೆಯಲ್ಲೂ ಮಳೆ ಜೋರಾಗಿತ್ತು. ಅಲ್ಲೆಲ್ಲ ಸಂಚಾರ ದಟ್ಟಣೆ ಕಂಡು ಬಂದಿತು. ವರುಣಾರ್ಭಟಕ್ಕೆ ರಾಜಧಾನಿ ಜನರು ಪರದಾಡುವಂತಾಯಿತು. ನಾಳೆ ನಾಡಿದ್ದು ಕೂಡ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಭಾನುವಾರ (ನಿನ್ನೆ) ರಾತ್ರಿ ಕೂಡ ಧಾರಾಕಾರ ಮಳೆಯಾಗಿದೆ. ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿತ್ತು. ನಗರದ ಹಲವೆಡೆ ಜಲಾವೃತವಾಗಿತ್ತು. ಸತತ ಮಳೆಯಿಂದ ಹೆಣ್ಣೂರು, ಬ್ಲೆಸಿಂಗ್ ಗಾರ್ಡನ್ ಲೇಔಟ್ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದ್ದವು. ಭಾರೀ ಮಳೆಯಿಂದಾಗಿ ವಾಹನ ಸಂಚಾರಕ್ಕೂ ತೊಂದರೆ ಉಂಟಾಗಿತ್ತು. ಜನವಸತಿ ಪ್ರದೇಶಗಳಿಗೆ ನೀರು ನುಗ್ಗಿ, ಜನ ಪರದಾಡುವಂತಾಯಿತು. ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ ಸುಮಾರು 26 ಮಿಮೀ ಮಳೆಯಾಗಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಬಿಜೆಪಿ ಅಲೆಯನ್ನು ತಡೆಯಲು ಕಾಂಗ್ರೆಸ್ ಗೆ ಸವಾಲು ಹಾಕುತ್ತೇನೆ – ಸಿಎಂ ಬೊಮ್ಮಾಯಿ

ರಾಜಧಾನಿ ಸೇರಿದಂತೆ ರಾಜ್ಯಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಿಗೆ ಇಂದಿನಿಂದ ಮೂರು ದಿನಗಳ ಕಾಲ ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೀದರ್, ಕಲಬುರುಗಿ, ಯಾದಗಿರಿ, ರಾಯಚೂರು, ಚಿಕ್ಕಮಗಳೂರು, ಹಾಸನ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಕೊಡುಗು, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News