ಈ ವರ್ಷ ನಿರೀಕ್ಷೆಗಿಂತ ಕಡಿಮೆ ಮಳೆ; ಬೆಂಗಳೂರಿನ ನೀರು ನೆರೆ ಜಿಲ್ಲೆಗಳಿಗೆ

ಈ ವರ್ಷದ ಮಾನ್ಸೂನ್ ಮಳೆ ಕಳೆದ ನಾಲ್ಕು ವರ್ಷಕ್ಕಿಂತ ಕಡಿಮೆ ಇದೆ. 22 ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯ ಕೊರತೆ ಉಂಟಾಗಿದೆ. ಈ ಭಾಗಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದ ಕೆರೆಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.

Written by - Prashobh Devanahalli | Edited by - Manjunath Naragund | Last Updated : Jun 27, 2023, 09:04 PM IST
  • ಕಳೆದ ಐದು ವರ್ಷದಲ್ಲಿ ರಾಜ್ಯ ನೆರೆ-ಬರ ಎರಡನ್ನೂ ನೋಡಿದೆ. ಕನಿಷ್ಟ 1.20 ಲಕ್ಷ ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ.
  • ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ ನೆರೆಯ ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ ಇತ್ತು
  • ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯತೆ ಇದೆ” ಎಂದು ಅವರು ಅಭಿಪ್ರಾಯಪಟ್ಟರು.
ಈ ವರ್ಷ ನಿರೀಕ್ಷೆಗಿಂತ ಕಡಿಮೆ ಮಳೆ; ಬೆಂಗಳೂರಿನ ನೀರು ನೆರೆ ಜಿಲ್ಲೆಗಳಿಗೆ title=

ಬೆಂಗಳೂರು : ಈ ವರ್ಷದ ಮಾನ್ಸೂನ್ ಮಳೆ ಕಳೆದ ನಾಲ್ಕು ವರ್ಷಕ್ಕಿಂತ ಕಡಿಮೆ ಇದೆ. 22 ಜಿಲ್ಲೆಗಳಲ್ಲಿ ಈಗಾಗಲೇ ಸಾಕಷ್ಟು ಮಳೆಯ ಕೊರತೆ ಉಂಟಾಗಿದೆ. ಈ ಭಾಗಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರಿನ ಪೂರೈಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ಈ ಭಾಗದ ಕೆರೆಗಳನ್ನು ಪುನಶ್ಚೇತನಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೃಷ್ಣಭೈರೇಗೌಡ ಅವರು ತಿಳಿಸಿದರು.

ಮಂಗಳವಾರ ತಮ್ಮ ಕಚೇರಿಯಲ್ಲಿ ವಿಶ್ವಬ್ಯಾಂಕ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಪ್ರಸ್ತಾವನೆಯನ್ನು ಮುಂದಿಟ್ಟ ಸಚಿವ ಕೃಷ್ಣಭೈರೇಗೌಡ,ಬೆಂಗಳೂರಿನ ನೆರೆಯ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರದಲ್ಲಿ ಕಳೆದ ಕೆಲ ವರ್ಷಗಳಿಂದ ಮಳೆ ಕೊರತೆ ಇದೆ. ಆದರೆ, ಕಳೆದೆರೆಡು ವರ್ಷ ಬೆಂಗಳೂರಿನಲ್ಲಿ ಮಳೆಗೆ ಪ್ರವಾಹವೇ ನಿರ್ಮಾಣವಾಗಿತ್ತು. ಇದರ ಜೊತೆಗೆ ಬೆಂಗಳೂರಿನಲ್ಲಿ ದಿನಕ್ಕೆ 2,000 ಮಿಲಿಯನ್ ಲೀಟರ್ ನೀರನ್ನು ಬಳಸಲಾಗುತ್ತಿದೆ. ಈ ನೀರನ್ನು ಸಹ ಸಂಸ್ಕರಿಸಿ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳ ಕೆರೆಗಳನ್ನು ಪುನಶ್ಚೇತನಗೊಳಿಸಿ ಅಲ್ಲಿಗೆ ಈ ನೀರನ್ನು ಹರಿಯಬಿಡುವ ಯೋಜನೆ ಇದೆ. ಈ ಯೋಜನೆ ಶೇ.100 ರಷ್ಟು ಜಾರಿಯಾದರೆ ಬರ ನೆರೆಗೆ ಸಂಪೂರ್ಣ ಪರಿಹಾರ ಸಿಗಲಿದೆ, ಎಂದರು.

ಬೆಂಗಳೂರಿನಲ್ಲಿ ಪ್ರತಿ ವರ್ಷ ಮಳೆಗಾಲದಲ್ಲಿ ತಲೆದೋರುವ ಪ್ರವಾಹ  ಮತ್ತು ಬೆಂಗಳೂರಿನ ನೆರೆಯ ಜಿಲ್ಲೆಗಳಲ್ಲಿ ಉಂಟಾಗುತ್ತಿರುವ ಬರ ಪರಿಸ್ಥಿತಿಗೆ ಶಾಶ್ವತ ಪರಿಹಾರದ ಯೋಜನೆಯನ್ನು ಸಿದ್ದಪಡಿಸಲಾಗಿದ್ದು, ಈ ಯೋಜನೆಗಳ ಅನುಷ್ಠಾನಕ್ಕೆ ವಿಶ್ವಬ್ಯಾಂಕ್ನಿಂದ ಹಣ ಸಹಾಯದ ನಿರೀಕ್ಷೆ ಇದೆ ಎಂದು ಕಂದಾಯ ಸಚಿವರಾದ ಕೃಷ್ಣಭೈರೇಗೌಡ ತಿಳಿಸಿದರು.

ಇದನ್ನೂ ಓದಿ-ʻಟಗರು ಪಲ್ಯʼದ ʻ7 ಸ್ಟಾರ್​ ಸುಲ್ತಾನ್ʼನ ಕುರುಬಾನಿ ಕ್ಯಾನ್ಸಲ್.. ಚಿತ್ರತಂಡ, ಅಭಿಮಾನಿಗಳ ಒತ್ತಾಯಕ್ಕೆ ಮಣಿದ ಮಾಲೀಕ

ಕಳೆದ ಐದು ವರ್ಷದಲ್ಲಿ ರಾಜ್ಯ ನೆರೆ-ಬರ ಎರಡನ್ನೂ ನೋಡಿದೆ. ಕನಿಷ್ಟ 1.20 ಲಕ್ಷ ಕೋಟಿ ರೂ. ರಾಜ್ಯಕ್ಕೆ ನಷ್ಟವಾಗಿದೆ. ಕಳೆದ ಐದು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಮಳೆಗಾಲದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ ನೆರೆಯ ಜಿಲ್ಲೆಗಳಲ್ಲಿ ಬರಗಾಲದ ಸ್ಥಿತಿ ಇತ್ತು. ಈ ಸಮಸ್ಯೆಗೆ ಶಾಶ್ವತ ಪರಿಹಾರವನ್ನು ಕಂಡುಕೊಳ್ಳುವ ಅಗತ್ಯತೆ ಇದೆ” ಎಂದು ಅವರು ಅಭಿಪ್ರಾಯಪಟ್ಟರು.

ಯೋಜನೆಯನ್ನು ವಿವರಿಸಿದ ಸಚಿವರು “ಬೆಂಗಳೂರಿನಲ್ಲಿ ಮಳೆಗಾಲದ ಪ್ರವಾಹದ ಪರಿಸ್ಥಿತಿಗೆ ಅವೈಜ್ಞಾನಿಕ ಒಳಚರಂಡಿ ವ್ಯವಸ್ಥೆ ಹಾಗೂ ಒತ್ತುವರಿ ಕಾರಣ. ಸೂಕ್ತ ಒಳಚರಂಡಿ ವ್ಯವಸ್ಥೆ ಇಲ್ಲದೆ, ನೆರೆಯ ಬಗ್ಗೆ ಮಾತನಾಡುವುದೇ ಅಪ್ರಸ್ತುತ. ಹೀಗಾಗಿ ಬೆಂಗಳೂರಿನ ಒಳಚರಂಡಿ ವ್ಯವಸ್ಥೆಯನ್ನು ವೈಜ್ಞಾನಿಕವಾಗಿ ಮರು ನಿರ್ಮಾಣ ಮಾಡಬೇಕಿದೆ. ಅಲ್ಲದೆ, ಈ ನೀರನ್ನು ಸಂಸ್ಕರಿಸಿ ಬೆಂಗಳೂರು ಹಾಗೂ ನೆರೆಯ ಜಿಲ್ಲೆಗಳ ಕೆರೆಗಳಿಗೆ ಹರಿಸುವ ಮೂಲಕ ನೆರೆಯನ್ನೂ ತಡೆಗಟ್ಟಬಹುದು, ಬರವನ್ನೂ ನಿವಾರಿಸಬಹುದು” ಎಂದು ಸಚಿವರು ತಿಳಿಸಿದರು.ಅಲ್ಲದೆ, “ಕೆಸಿ ವ್ಯಾಲಿ ಯೋಜನೆ ಮೂಲಕ ಈಗಾಗಲೇ ಬೆಂಗಳೂರಿನ ತ್ಯಾಜ್ಯ ನೀರಿನ್ನು ಸಂಸ್ಕರಿಸಿ ಕೆರೆಗಳಿಗೆ ಹರಿಸುವ ಕೆಲಸ ನಡೆಯುತ್ತಿದೆ. ಈ ಮೂಲಕ ಕಳೆದ 25 ವರ್ಷಗಳಿಂದ ತುಂಬದ ಕೆರೆಗಳು ಇದೀಗ ನೀರಿನಿಂದ ಮೈದುಂಬಿವೆ” ಎಂದು ಸಚಿವರು ಮಾಹಿತಿ ನೀಡಿದರು.

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

 

Trending News