ಲೋಕಸಭಾ ಚುನಾವಣೆ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಜೊತೆ ಸಭೆ

Lok Sabha Election : ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಇಂದು ನಡೆಸಿದ ವೀಡಿಯೋ ಸಂವಾದವನ್ನು ಉದ್ದೇಶಿಸಿ ಮಾತನಾಡಿದರು   

Written by - Zee Kannada News Desk | Last Updated : Mar 25, 2024, 11:53 PM IST
  • ನಗರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮ-ತಮ್ಮ ಸಮುಚ್ಛಯಗಳಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಿ ತಪ್ಪದೆ ಮತದಾನ ಮಾಡುವಂತೆ ಮಾಡಬೇಕೆಂದು ಮನವಿ ಮಾಡಿದರು.
  • ಮತದಾನದ ಕುರಿತು ಎಲ್ಲರಿಗೂ ಅರಿವು ಮೂಡಿಸುವ ಜೊತೆಗೆ ತಪ್ಪದೆ ಮತದಾನ ಮಾಡುವಂತೆ ಎಲ್ಲರಿಗೂ ಪ್ರೇರೇಪಿಸಲು ತಿಳಿಸಿದರು.
  • ಮತಗಟ್ಟೆಗಳ ಬಳಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಲಾಗುತ್ತಿ
ಲೋಕಸಭಾ ಚುನಾವಣೆ ಸಂಬಂಧ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಜೊತೆ ಸಭೆ title=

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಶ್ರೀ ತುಷಾರ್ ಗಿರಿ ನಾಥ್ ರವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳಲ್ಲಿ  ನಗರದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ತಮ್ಮ-ತಮ್ಮ ಸಮುಚ್ಛಯಗಳಲ್ಲಿ ಮತದಾನದ ಪ್ರಾಮುಖ್ಯತೆಯ ಬಗ್ಗೆ ಅರಿವು ಮೂಡಿಸಿ ತಪ್ಪದೆ ಮತದಾನ ಮಾಡುವಂತೆ ಮಾಡಬೇಕೆಂದು ಮನವಿ ಮಾಡಿದರು.

ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಇಂದು ನಡೆಸಿದ ವೀಡಿಯೋ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ 28 ವಿಧಾನಸಭಾ ಕ್ಷೇತ್ರಗಳು 4 ಲೋಕಸಭಾ ಕ್ಷೇತ್ರಗಳಿಗೆ ಬರಲಿದ್ದು, ಮತದಾನದ ಪ್ರಮಾಣವನ್ನು ಕಳೆದ ಬಾರಿಗಿಂತ ಹೆಚ್ಚಳ ಮಾಡಬೇಕಿದ್ದು, ಅದಕ್ಕೆ ತಮ್ಮ ಸಹಕಾರ ಅತ್ಯಗತ್ಯವಿದೆ ಎಂದು ಹೇಳಿದರು. 

ಇದನ್ನು ಓದಿ : RCB Vs PBKS : ತವರಿನಲ್ಲಿ ಮೊದಲ ವಿಕ್ಟರಿ ಹೊಡೆದ RCB : ರೋಚಕ ಗೆಲುವಿಗೆ ಕೈಜೋಡಿಸಿದ  ದಿನೇಶ್ ಕಾರ್ತಿಕ್

ನಗರದಲ್ಲಿ ಬರುವ ದೊಡ್ಡ ದೊಡ್ಡ ಸಮುಚ್ಛಯಗಳಲ್ಲಿ ಮತಗಟ್ಟೆಗಳನ್ನು ಸ್ಥಾಪಿಸಲು ಚುನಾವಣಾ ಆಯೋಗವು ನಿರ್ದೇಶಿಸಿದೆ. ಈ ನಿಟ್ಟಿನಲ್ಲಿ ನಿಮ್ಮ ಸಮುಚ್ಛಯಗಳಲ್ಲಿಯೇ ಮತಗಟ್ಟೆಗಳನ್ನು ಸ್ಥಾಪಿಸಿ ಮತದಾನ ಮಾಡಬಹುದಾಗಿದೆ. ಲೋಕಸಭಾ ಚುನಾವಣೆಯ ಸಂಪೂರ್ಣ ಮಾಹಿತಿಯನ್ನು ಚುನಾವಣಾ ವಿಭಾಗದಿಂದ ನೀಡಲಾಗುವುದು. ತಾವುಗಳು ತಮ್ಮ ಸಮುಚ್ಛಯಗಳಲ್ಲಿ ಬಿತ್ತರಿಸಿಕೊಂಡು ಮತದಾನದ ಕುರಿತು ಎಲ್ಲರಿಗೂ ಅರಿವು ಮೂಡಿಸುವ ಜೊತೆಗೆ ತಪ್ಪದೆ ಮತದಾನ ಮಾಡುವಂತೆ ಎಲ್ಲರಿಗೂ ಪ್ರೇರೇಪಿಸಲು ತಿಳಿಸಿದರು. 

ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘಗಳು ತಮ್ಮ-ತಮ್ಮ ವ್ಯಾಪ್ತಿಯಲ್ಲಿ ಸಭೆಗಳನ್ನು ಏರ್ಪಡಿಸಿಕೊಂಡು ಮತದಾನ ಮಾಡುವ ಬಗ್ಗೆ ಹೆಚ್ಚು-ಹೆಚ್ಚು ಅರಿವು ಮೂಡಿಸುವ ಕೆಲಸ ಮಾಡಬೇಕು. ಮತದಾನ ಮಾಡುವ ಕುರಿತು ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಜಾಗೃತಿ ಮೂಡಿಸುವ ಕೆಲಸ ಮಾಡಲು ತಿಳಿಸಿದರು. 

ಅಪಾರ್ಟ್ಮ್ಂಟ್ ಗಳಲ್ಲಿ 85 ವರ್ಷ ಮೇಲ್ಪಟ್ಟವರು ಹಾಗೂ ವಿಶೇಷ ಚೇತನರು ಇದ್ದಲ್ಲಿ ಅಂತಹವರಿಗೆ ಅಂಚೆ ಮತದಾನ ಮಾಡುವ ಅವಕಾಶವಿದ್ದು, ಆ ಕುರಿತು ಮಾಹಿತಿ ನೀಡಿ ಬೂತ್ ಮಟ್ಟದ ಅಧಿಕಾರಿಗಳಿಂದ 12ಡಿ ನಮೂನೆಗಳನ್ನು ಭರ್ತಿ ಮಾಡಿಸಬೇಕು ಎಂದು ಹೇಳಿದರು. 

ಮತಗಟ್ಟೆಗಳ ಬಳಿ ಅಗತ್ಯ ಸೌಲಭ್ಯಗಳ ವ್ಯವಸ್ಥೆ:
 
ಮತಗಟ್ಟೆಗಳ ಬಳಿ ಯಾವುದೇ ರೀತಿಯ ಸಮಸ್ಯೆ ಆಗದಂತೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಮಾಡಲಾಗುತ್ತಿದೆ. ಅದರಂತೆ ಶೌಚಾಲಯ, ಕುಡಿಯುವ ನೀರು, ಚೇರ್ ಗಳು, ಪ್ಯಾನ್, ವಿದ್ಯುತ್ ವ್ಯವಸ್ಥೆ, ವಿಕಲಚೇತನರಿಗಾಗಿ ರ‍್ಯಾಂಪ್ ವ್ಯವಸ್ಥೆ ಸೇರಿದಂತೆ ಇನ್ನಿತರೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಸರತಿ ಸಾಲು ಕೂಡಾ ವ್ಯವಸ್ಥಿತವಾಗಿ ಇರುವಂತೆ ವ್ಯವಸ್ಥೆ ಮಾಡಿಕೊಳ್ಳಲಾಗಿರುತ್ತದೆ. 

ಇದನ್ನು ಓದಿ : ಅನ್ ಪ್ಲಗ್ಡ್ ವಿತ್ ಮಯೂರ : ಏಪ್ರಿಲ್ 7 ರಂದು ಭಾರತೀಯ ಸಂಗೀತ ನಿರ್ದೇಶಕರಿಗಾಗಿ ನಡೆಯಲಿದೆ ಸಂಗೀತ ರಸ ಸಂಜೆ

ಈ ವೇಳೆ ಸ್ವೀಪ್ ಮೇಲ್ವಿಚಾರಣಾ ಸಮಿತಿಯ ಅಧ್ಯಕ್ಷರಾದ ಕಾಂತರಾಜು, ಬೆಂಗಳೂರು ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿಯಾದ ಪ್ರತಿಭ, ನಿವಾಸಿ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.  

Trending News