ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ

ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;

Written by - Prashobh Devanahalli | Last Updated : May 20, 2024, 07:49 PM IST
    • ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಡೆವಲಪರ್ ಗಳಿಗೆ ನೋಟೀಸ್
    • ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದ ಡಿಸಿಎಂ ಡಿಕೆ ಶಿವಕುಮಾರ್
    • ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ಶಿವಕುಮಾರ್
ಮೂಲಸೌಕರ್ಯ ಕಲ್ಪಿಸದ ಖಾಸಗಿ ಲೇಔಟ್’ಗಳ ಡೆವಲಪರ್’ಗಳಿಗೆ ನೋಟೀಸ್: ಡಿಸಿಎಂ ಡಿಕೆ ಶಿವಕುಮಾರ್ ಸೂಚನೆ title=
File Photo

ಬೆಂಗಳೂರು: ಮೂಲಸೌಕರ್ಯ ವ್ಯವಸ್ಥೆಗಳನ್ನು ಸರಿಯಾಗಿ ನೀಡದ ಖಾಸಗಿ ಲೇಔಟ್ ಗಳ ಡೆವಲಪರ್ ಗಳಿಗೆ ನೋಟೀಸ್ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು.

ರಾಚೇನಹಳ್ಳಿ ಕೆರೆಯ ಬಳಿ ರಾಜಕಾಲುವೆ ಪರಿಶೀಲಿಸಿದ ನಂತರ ಶಿವಕುಮಾರ್ ಅವರು ಮಾಧ್ಯಮಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದರು. ಅವರು ಹೇಳಿದ್ದಿಷ್ಟು;

ಇದನ್ನೂ ಓದಿ: ಅಂದು ಕಸ ಹೆಕ್ಕಿ ಜೀವನ ನಡೆಸುತ್ತಿದ್ದಾತ.. ಇಂದು ಕ್ರಿಕೆಟ್ ಲೋಕಕ್ಕೇ ‘ಬಾಸ್’! ಈತ RCBಯ ಸ್ಟಾರ್ ಬ್ಯಾಟ್ಸ್’ಮನ್ ಕೂಡ ಹೌದು

ಖಾಸಗಿ ಲೇಔಟ್ ಗಳಲ್ಲಿ ನೀರು ಹರಿಯಲು ಸೂಕ್ತ ವ್ಯವಸ್ಥೆ ರೂಪಿಸದ ಕಾರಣ ಮನೆಗಳಿಗೆ ನೀರು ನುಗ್ಗಿದೆ. ಮಳೆ ನೀರು ಹಾಗೂ ಕೊಳಚೆ ನೀರನ್ನು ಒಟ್ಟಿಗೆ ಬಿಟ್ಟಿರುವ ಕಾರಣಕ್ಕೆ ಸಮಸ್ಯೆಗಳು ಉಂಟಾಗುತ್ತಿವೆ. ಲೇಔಟ್ ಗಳನ್ನು ರೂಪಿಸುವಾಗ ಸೂಕ್ತ  ವ್ಯವಸ್ಥೆ ಮಾಡದಿರುವುದು ಡೆವಲಪರ್ ಗಳ ತಪ್ಪು. ಜನರಿಂದ ಹಣ ಪಡೆದು ಮಳೆ ನೀರು ಹರಿಯಲು ಸೂಕ್ತ ವ್ಯವಸ್ಥೆ ಮಾಡದೇ ಇರುವ ಕಾರಣಕ್ಕೆ ಜನ ತೊಂದರೆ ಅನುಭವಿಸುತ್ತಿದ್ದಾರೆ. ಡೆವಲಪರ್ ಗಳು ತಮ್ಮ ಕರ್ತವ್ಯವನ್ನು ಸರಿಯಾಗಿ ನಿಭಾಯಿಸಿಲ್ಲ. ಅವರಿಂದ ಆಗಿರುವ ತೊಂದರೆ ನಿವಾರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.

ಬೆಂಗಳೂರಿನ ಜನತೆಗೆ ತೊಂದರೆ ಆಗಬಾರದು

ಬ್ರಾಂಡ್ ಬೆಂಗಳೂರು ಯೋಜನೆ ಮೂಲಕ ಈ ತೊಂದರೆಗಳಿಗೆ ಮುಕ್ತಿ ಸಿಗಬಹುದೇ ಎಂದು ಕೇಳಿದಾಗ, "ಪರಿಹಾರ ನೀಡಬೇಕು ಎಂಬ ಉದ್ದೇಶದಿಂದಲೇ ತೊಂದರೆಯಾದ ಜಾಗಗಳಿಗೆ ಭೇಟಿ ನೀಡಿದ್ದೇನೆ. ಕೇವಲ ಕಿವಿಯಲ್ಲಿ ಕೇಳಬಾರದು, ಕಣ್ಣಲ್ಲಿ ನೋಡಬೇಕು ಎಂದು ಅಧಿಕಾರಿಗಳ ಜೊತೆ ಬಂದಿದ್ದೇನೆ ಎಂದರು.

ಪ್ರತಿ ವರ್ಷ ಎಲ್ಲೆಲ್ಲಿ ಮಳೆಯಿಂದ ತೊಂದರೆ ಆಗುತ್ತದೆಯೋ ಆ ಪ್ರದೇಶಗಳನ್ನು ಗುರುತಿಸಿ ಹಂತ, ಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದರು.

ರಾಜಕಾಲುವೆ ಒತ್ತುವರಿ ಬಗ್ಗೆ ಕೇಳಿದಾಗ "ಎಲ್ಲೆಲ್ಲಿ ಖಾಸಗಿ ಲೇಔಟ್ ನವರು ಒತ್ತುವರಿ ಮಾಡಿದ್ದಾರೋ ಅಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು. ಎಸ್ ಟಿಪಿ ಅಳವಡಿಕೆ ಮಾಡದವರಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.

ಸ್ಕೈ ಡೆಕ್ ನಿರ್ಮಾಣದ ಬಗ್ಗೆ ಕೇಳಿದಾಗ, "ಬೆಂಗಳೂರಿಗೆ ಒಂದು ಒಳ್ಳೆಯ ಪ್ರವಾಸಿ ಕೇಂದ್ರ ಬೇಕು ಎನ್ನುವ ಆಲೋಚನೆ ನಮ್ಮಲಿದೆ. ಅಧಿಕಾರಿಗಳು ಯೋಜನಾ ವರದಿ ನೀಡಿದ್ದಾರೆ. ಟೆಂಡರ್ ಕರೆಯಲು ಸಿದ್ಧತೆ ಮಾಡಿಕೊಂಡಿದ್ದು, ಪಾರ್ಕಿಂಗ್, ಜಾಗದ ಲಭ್ಯತೆ ಮತ್ತಿತರ ಅಂಶಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆ ಬಗ್ಗೆ ಕೇಳಿದಾಗ "ನಮಗೂ ಚುನಾವಣೆ ನಡೆಸಬೇಕು ಎನ್ನುವ ಅಭಿಲಾಷೆ ಇದೆ. ಈ ವಿಚಾರ ನ್ಯಾಯಾಲಯದಲ್ಲಿ ಇರುವ ಕಾರಣ ತಡವಾಗುತ್ತಿದೆ" ಎಂದರು.

ಮಳೆಗಾಲ ಆರಂಭದ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸ್ಥಳಗಳಿಗೆ ಡಿಸಿಎಂ ಭೇಟಿ ನೀಡಿ ಪರಿಶೀಲಿಸಿದರು. ಯಲಹಂಕದ ರಮಣಶ್ರೀ ಗಾರ್ಡೇನಿಯಾ ಲೇಔಟ್ ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳ ಜತೆ ಚರ್ಚೆ ನಡೆಸಿದರು.

"ಕಳೆದ ಎರಡು ವರ್ಷಗಳ ಹಿಂದೆ ಈ ಭಾಗದಲ್ಲಿ ಕಾಲುವೆ ಇರಲಿಲ್ಲ. ಪಾಲಿಕೆ ವತಿಯಿಂದ ಕಾಲುವೆ ನಿರ್ಮಿಸಿ ಅದನ್ನು ಮುಂದೆ ತೆಗೆದುಕೊಂಡು ಹೋಗದೆ ಇಲ್ಲಿಗೆ ನಿಲ್ಲಿಸಿದ್ದಾರೆ. ಇದರಿಂದಾಗಿ ಸಣ್ಣ ಮಳೆಗೆ ಮನೆಗಳ ಒಳಗೆ ನೀರು ನುಗ್ಗಿದೆ. ಈ ಕಾಲುವೆ ಮುಂದೆ ವಿಸ್ತರಣೆ. ಮಳೆ ನೀರು ಕಾಲುವೆ ಹಾಗು ಚರಂಡಿಯನ್ನು ಪ್ರತ್ಯೇಕವಾಗಿ ಮಾಡಬೇಕು. ಇಲ್ಲಿರುವ ಕೆರೆಗೆ ಕೊಳಚೆ ನೀರು ಬಿಡಬಾರದು" ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಉಪಮುಖ್ಯಮಂತ್ರಿ, "ಮುಂದೆ ಅರಣ್ಯ ಇಲಾಖೆ ಜಾಗ ಇರುವ ಕಾರಣ, ಅವರು ಕಾಲುವೆಯನ್ನು ಮುಂದೆ ವಿಸ್ತರಿಸಲು ಅನುಮತಿ ನೀಡಿರಲಿಲ್ಲ. ಇಂದು ಬೆಳಗ್ಗೆ ಪಾಲಿಕೆ ಅಧಿಕಾರಿಗಳು ಅರಣ್ಯ ಅಧಿಕಾರಿಗಳ ಜತೆ ಸಭೆ ಮಾಡಿದ್ದು, ಕಾಲುವೆ ಮುಂದಕ್ಕೆ ತೆಗೆದುಕೊಂಡು ಹೋಗಲು ಅನುಮತಿ ಪಡೆಯಲಾಗಿದೆ. ಮಳೆ ನೀರು ಹಾಗೂ ಚರಂಡಿ ನೀರು ಹರಿಯಲು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಲಾಗುವುದು. ಆದಷ್ಟು ಬೇಗ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಇನ್ನು ಬೆಂಗಳೂರಿನ ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಸುವುದಿಲ್ಲ. ಸಂಸ್ಕರಿಸಿದ ನೀರನ್ನು ಮಾತ್ರ ಬಿಡಲಾಗುವುದು. ಈ ಬಾರಿ  ಏಳು ಸಾವಿರ ಕೊಳವೆ ಬಾವಿ ಬತ್ತಿದ ಪರಿಣಾಮ ನೀರಿನ ಸಮಸ್ಯೆ ಎದುರಾಗಿದ್ದು, ಮುಂದೆ ಇಂತಹ ಸಮಸ್ಯೆ ಬಾರದಂತೆ ಎಚ್ಚರ ವಹಿಸಲಾಗುವುದು" ಎಂದು ತಿಳಿಸಿದರು.

ನಂತರ ಉಪಮುಖ್ಯಮಂತ್ರಿ ರಾಚೇನಹಳ್ಳಿ ಕೆರೆ ಪಕ್ಕದಲ್ಲಿರುವ ಜವಾಹರ್ ಲಾಲ್ ನೆಹರು ಆಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ (JNCSAR)ದಲ್ಲಿ ಹಾದುಹೋಗಿರುವ ರಾಜಕಾಲುವೆ ಪರಿಶೀಲನೆ ನಡೆಸಿದರು. ಈ ರಾಜಕಾಲುವೆ ತಡೆಗೋಡೆ ಎತ್ತರ ನಿರ್ಮಾಣ ಕಾಮಗಾರಿ ಪರಿಶೀಲನೆ ನಡೆಸಿದರು. ಈ ವೇಳೆ "ಮುಂದಿನ ಒಂದು ತಿಂಗಳ ಒಳಗಾಗಿ ಈ ಕಾಮಗಾರಿ ಪೂರ್ಣಗೊಳಿಸಲಾಗುವುದು. ಅಷ್ಟರ ಒಳಗಾಗಿ ಮತ್ತೆ ಮಳೆ ಬಂದರೆ ಪ್ರವಾಹ ಪರಿಸ್ಥಿತಿ ತಡೆಯಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ" ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಇದಾದ ಬಳಿಕ ಗೆದ್ದಲಹಳ್ಳಿ ಬಳಿ ರಾಜಕಾಲುವೆ ಕಾಮಗಾರಿ ಪರಿಶೀಲನೆ ನಡೆಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ವೇಳೆ ಸ್ಥಳೀಯ ನಿವಾಸಿಗಳು, "ಪ್ರತಿ ಬಾರಿ ಮಳೆ ಬಂದರೂ ಇಲ್ಲಿ ಮನೆಯೊಳಗೆ ನೀರು ನುಗ್ಗುತ್ತದೆ. ಈ ಸಮಸ್ಯೆಗೆ ಪರಿಹಾರ ಕಲ್ಪಿಸಿ" ಎಂದು ಮನವಿ ಮಾಡಿದರು.

ಇದನ್ನೂ ಓದಿ: ಈ ಆರೋಗ್ಯ ಸಮಸ್ಯೆಯಿದ್ದವರು ಶುಂಠಿ ಟೀ ಕುಡಿಯಲೇಬಾರದು! ರುಚಿಗಿಂತ ಅಪಾಯವೇ ಹೆಚ್ಚು!

ಇದಕ್ಕೆ ಪ್ರತಿಕ್ರಿಯಿಸಿದ ಶಿವಕುಮಾರ್ ಅವರು, "ಖಾಸಗಿ ಬಡಾವಣೆ ಮಾಡಿರುವವರು ಸರಿಯಾದ ರೀತಿಯಲ್ಲಿ ಮೂಲಸೌಕರ್ಯ ಒದಗಿಸದ ಕಾರಣ ಈ ಸಮಸ್ಯೆ ಎದುರಾಗಿದೆ. ನಿಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದಲೇ ಇಲ್ಲಿಗೆ ಬಂದು ಪರಿಶೀಲನೆ ಮಾಡುತ್ತಿದ್ದೇವೆ" ಎಂದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News