ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ, ಮುಂದುವರೆದ ಚಳಿ

Karnataka Rain Update: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ  ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Written by - Yashaswini V | Last Updated : Nov 24, 2022, 06:29 PM IST
  • ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಕಡಿಮೆ ಒತ್ತಡದ ಪ್ರದೇಶ ಇತ್ತೀಚಿನ ಮಳೆಗೆ ಕಾರಣವಾಗಿದೆ.

    ಈ ಪ್ರದೇಶದಲ್ಲಿ ಚಂಡಮಾರುತವು ದುರ್ಬಲಗೊಳ್ಳುವವರೆಗೆ ಬೆಂಗಳೂರಿನಲ್ಲಿ ಇನ್ನೂ 2 ಮಳೆಯಾಗುವ ನಿರೀಕ್ಷೆಯಿದೆ
  • ಇಂದು (ಗುರುವಾರ) ಮುಂಜಾನೆಯಿಂದಲೇ ಕೆಲವು ಪ್ರದೇಶಗಳಲ್ಲಿ ಸೋನೆ ಮಳೆ
ರಾಜ್ಯದಲ್ಲಿ ಇನ್ನೂ ಎರಡು ದಿನ ಮಳೆ, ಮುಂದುವರೆದ ಚಳಿ  title=
Rain Alert

Karnataka Weather Update: ರಾಜ್ಯ ರಾಜಧಾನಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚುಮು ಚುಮು ಚಳಿಯ ಜೊತೆಗೆ ತುಂತುರು ಸೋನೆ ಮುಂದುವರೆದಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಮಳೆಯ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಚೆನ್ನೈ, ಪುದುಚೇರಿ, ಆಂಧ್ರ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದರ ಎಫೆಕ್ಟ್ ಬೆಂಗಳೂರಿಗೂ ಸಹ ತಟ್ಟಲಿದೆ. 

ಇದನ್ನೂ ಓದಿ- Kodi Shree : ದೇಶಾದ್ಯಂತ ಜಲಪ್ರಳಯ ಎದುರಾಗಲಿದೆ : ಕೋಡಿ ಶ್ರೀಗಳ ಭವಿಷ್ಯ

ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಮಳೆಯ ಮುನ್ಸೂಚನೆ  ನೀಡಲಾಗಿದ್ದು ಈ ಭಾಗಗಳಲ್ಲಿ ಸಾಮಾನ್ಯದಿಂದ ಹಗುರ ಮಳೆ ಆಗಲಿದೆ. ಅಲ್ಲದೇ ಕೆಲವು ಕಡೆಗಳಲ್ಲಿ ಮಂಜು ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

ಇಂದು (ಗುರುವಾರ) ಮುಂಜಾನೆಯಿಂದಲೇ ಕೆಲವು ಪ್ರದೇಶಗಳಲ್ಲಿ ಸೋನೆ ಮಳೆಯಾಗುತ್ತಿದ್ದು, ಇಡೀ ದಿನ ಚಳಿ ವಾತಾವರಣ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ ಸುಮಾರು 25 ಮತ್ತು 19 ಡಿಗ್ರಿ ಸೆಲ್ಸಿಯಸ್ ಆಗಿರುವ ಸಾಧ್ಯತೆಯಿದೆ ಎನ್ನಲಾಗಿದೆ.

ಇದನ್ನೂ ಓದಿ- ಮಳೆಗೆ ಹತ್ತಿ ಬೆಳೆ ಸಂಪೂರ್ಣ ಹಾಳು, ವಿಷದ ಬಾಟಲಿ ಹಿಡಿದು ರೈತ ಕಣ್ಣೀರು

ಈಗಾಗಲೇ ಮೋಡ ಮುಸುಕಿದ ವಾತಾವರಣದ ಜೊತೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಮಾನ್ಯ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಪ್ರದೇಶಗಳಲ್ಲೂ  ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.  

ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಕರ್ನಾಟಕದ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ನಿರೀಕ್ಷೆ ಇದೆ ಎಂದು ತಿಳಿದುಬಂದಿದೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News