ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ

ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 19ರ ಬಳಿಕ ಮಳೆಯ ತೀವ್ರತೆಯಲ್ಲಿ ಕೊಂಚ ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Written by - Manjunath Naragund | Last Updated : Jul 17, 2022, 03:54 PM IST
  • ಇದಷ್ಟೇ ಅಲ್ಲದೆ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಜುಲೈ-18 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.
ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆ ಸಾಧ್ಯತೆ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯಾದ್ಯಂತ ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 19 ರ ಬಳಿಕ ಮಳೆಯ ತೀವ್ರತೆಯಲ್ಲಿ ಕೊಂಚ ಇಳಿಕೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 48 ಗಂಟೆಗಳ ಕಾಲ ಮಳೆಯಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ನೈರುತ್ಯ ಮುಂಗಾರು ಚುರುಕಾಗಿರಲಿದೆ.ಹೀಗಾಗಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಗು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಬೆಳಗಾವಿ, ಹಾಗೂ ಹಾಸನ ಜಿಲ್ಲೆಗೆ ಇಂದು ಮತ್ತು ನಾಳೆ ಹಳದಿ ಅಲರ್ಟ್ ನ್ನು ಘೋಷಿಸಲಾಗಿದೆ.

ಇದನ್ನೂ ಓದಿ: Singapore Open 2022: ಫೈನಲ್‌ಗೆ ಲಗ್ಗೆಯಿಟ್ಟ ಪಿ.ವಿ ಸಿಂಧು

ಇದಷ್ಟೇ ಅಲ್ಲದೆ ಉತ್ತರ ಒಳನಾಡು ಜಿಲ್ಲೆಗಳಾದ ಬೀದರ್, ಕಲಬುರ್ಗಿ ಜಿಲ್ಲೆಗಳಿಗೆ ಜುಲೈ-18 ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ತೀರದಲ್ಲಿ ಪ್ರತಿ ಗಂಟೆಗೆ 40 ಕಿ.ಮೀ ನಿಂದ 50 ಕಿ.ಮೀ ವೇಗದಲ್ಲಿ ಬಿರುಗಾಳಿ ಬಿಸುತ್ತಿದ್ದು ಮುಂದಿನ 48 ಗಂಟೆಗಳ ಅವಧಿಯಲ್ಲಿ 60 ಕಿ.ಮೀ. ತಲುಪುವ ಸಾಧ್ಯತೆ ಇದೆ ಎಂದ ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ: ದೇಶದಲ್ಲಿ ವೇಗವಾಗಿ ಹರಡುತ್ತಿದೆ ಕೋವಿಡ್‌: ಒಂದೇ ದಿನದಲ್ಲಿ 20ಸಾವಿರಕ್ಕೂ ಹೆಚ್ಚು ಕೇಸ್‌ ದಾಖಲು!

ಈ ಭಾಗಗಳಲ್ಲಿ ಬಿರುಗಾಳಿ ತೀವ್ರಗೊಳ್ಳುವುದರಿಂದ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ.ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಮುಂದುವರೆಯಲಿರುವುದರಿಂದ ಅಲ್ಲಲ್ಲಿ ತುಂತುರು ಮಳೆ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಮಾಹಿತಿ ನೀಡಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News