ಮದ್ಯಾಹ್ನದ ನಿದ್ರೆ ಆರೋಗ್ಯಕ್ಕೆ ಒಳ್ಳೆಯದಾ ಅಥವಾ... ಇಲ್ಲಿದೆ ಉತ್ತರ !

Afternoon Sleep Good or Bad: ನ್ಯಾಷನಲ್ ಸ್ಲೀಪ್ ಫೌಂಡೇಶನ್ ಪ್ರಕಾರ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ವಯಸ್ಕರು ಮಧ್ಯಾಹ್ನ ನಿದ್ರೆ ಮಾಡುತ್ತಾರೆ.ಸಣ್ಣ ನಿದ್ದೆಗಳು ಜಾಗರೂಕತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ ಎಂದು ಸಂಶೋಧನೆಯೊಂದು ಹೇಳುತ್ತದೆ. Lifestyle News In Kannada  

Written by - Nitin Tabib | Last Updated : Oct 4, 2023, 07:42 PM IST
  • ಹಾರ್ವರ್ಡ್ ಹೆಲ್ತ್ ವರದಿ ಹೇಳುವಂತೆ ಹಗಲಿನಲ್ಲಿ ಒಂದು ಸಣ್ಣ ನಿದ್ದೆ ಅಥವಾ ನಿದ್ರೆಯು ಜ್ಞಾಪಕಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ದೇಹವನ್ನು ಸಕ್ರಿಯವಾಗಿರಿಸುತ್ತದೆ.
  • ಆದಾಗ್ಯೂ, ಇದು ಅಭ್ಯಾಸವಾದರೆ ದೀರ್ಘಾವಧಿಯಲ್ಲಿ ಅನೇಕ ನಷ್ಟಗಳನ್ನು ಉಂಟುಮಾಡಬಹುದು. ಹೀಗಾಗಿ ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ.
  • ನೀವು ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ದೆ ಮಾಡಿದರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎನ್ನುತ್ತಾರೆ ಸಂಶೋಧಕರು.
ಮದ್ಯಾಹ್ನದ ನಿದ್ರೆ ಆರೋಗ್ಯಕ್ಕೆ ಒಳ್ಳೆಯದಾ ಅಥವಾ... ಇಲ್ಲಿದೆ ಉತ್ತರ ! title=

ಬೆಂಗಳೂರು: ಮಧ್ಯಾಹ್ನ ಊಟ ಮಾಡಿದ  ನಂತರ ನಿದ್ದೆ ಬರುವುದು ಸಹಜ. ಆರೋಗ್ಯ ತಜ್ಞರ ಪ್ರಕಾರ, ನಾವು ಮಧ್ಯಾಹ್ನ ಆಹಾರವನ್ನು ಸೇವಿಸಿದಾಗ, ಜೀರ್ಣಾಂಗ ವ್ಯವಸ್ಥೆಯಲ್ಲಿ ರಕ್ತ ಪರಿಚಲನೆ ಹೆಚ್ಚಾಗುತ್ತದೆ. ಈ ಕಾರಣದಿಂದಾಗಿ, ಮೆದುಳಿಗೆ ರಕ್ತ ಪೂರೈಕೆಯು ಕಡಿಮೆಯಾಗುವ ಸಾಧ್ಯತೆ ಇದ್ರುತ್ತದೆ. ಈ ಕಾರಣದಿಂದಾಗಿ, ನಿದ್ರೆ ಮತ್ತು ಆಯಾಸದ ಸಮಸ್ಯೆ ಎದುರಾಗುವುದು ಸಾಮಾನ್ಯ. ತಿಂದ ನಂತರ ದೇಹದಲ್ಲಿ ಗ್ಲೂಕೋಸ್ ಪ್ರಮಾಣ ಹೆಚ್ಚುತ್ತದೆ ಎಂದೂ ಹೇಳಲಾಗುತ್ತದೆ. ಇದರಿಂದಾಗಿ ಒಬ್ಬರು ಹೆಚ್ಚು ನಿದ್ರೆ ಮಾಡುತ್ತಾರೆ. ಇದೊಂದು ಸಾಮಾನ್ಯ ಪ್ರಕ್ರಿಯೆ, ಆತಂಕ ಪಡುವ ಅವಶ್ಯಕತೆ ಇಲ್ಲ, ಆದರೆ ಪ್ರತಿದಿನ ಮಧ್ಯಾಹ್ನ ಮಲಗುವ ಅಭ್ಯಾಸ ನಿಮಗೆ ಬಂದರೆ, ನಿಮ್ಮ ಆರೋಗ್ಯದ ಮೇಲೆ ಯಾವ ಪರಿಣಾಮ ಬೀರುತ್ತದೆ,  ತಿಳಿದುಕೊಳ್ಳೋಣ ಬನ್ನಿ,
 
ಮಧ್ಯಾಹ್ನ ಮಲಗುವುದು ಒಳ್ಳೆಯದು ಅಥವಾ ಕೆಟ್ಟದ್ದೋ?
ನ್ಯಾಷನಲ್ ಸ್ಲೀಪ್ ಫೌಂಡೇಶನ್ ಪ್ರಕಾರ, ಯುನೈಟೆಡ್ ಸ್ಟೇಟ್ಸ್‌ನಲ್ಲಿ ಸುಮಾರು ಮೂರನೇ ಒಂದು ಭಾಗದಷ್ಟು ವಯಸ್ಕರು ಮಧ್ಯಾಹ್ನ ನಿದ್ರೆ ಮಾಡುತ್ತಾರೆ. ಜಾಗರೂಕತೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸಲು ಸಣ್ಣ ನಿದ್ರೆ ಸಹಾಯ ಮಾಡುತ್ತದೆ ಎಂದು ಕೆಲವು ಸಂಶೋಧನೆಗಳು ಸೂಚಿಸುತ್ತವೆ. ಆದಾಗ್ಯೂ, ಇದು ಅಭ್ಯಾಸವಾಗಿದ್ದರೆ ಅದು ನಕಾರಾತ್ಮಕ ಪರಿಣಾಮಗಳನ್ನು ಉಂಟುಮಾಡಬಹುದು ಎನ್ನಲಾಗುತ್ತದೆ.
 
ಹಗಲಿನಲ್ಲಿ ಮಲಗಿದರೆ ಏನು ಪರಿಣಾಮ
ಹಾರ್ವರ್ಡ್ ಹೆಲ್ತ್ ವರದಿ ಹೇಳುವಂತೆ ಹಗಲಿನಲ್ಲಿ ಒಂದು ಸಣ್ಣ ನಿದ್ದೆ ಅಥವಾ ನಿದ್ರೆಯು ಜ್ಞಾಪಕಶಕ್ತಿಯನ್ನು ಸುಧಾರಿಸಲು ಸಹಾಯ ಮಾಡುತ್ತದೆ ಮತ್ತು ದೇಹವನ್ನು ಸಕ್ರಿಯವಾಗಿರಿಸುತ್ತದೆ. ಆದಾಗ್ಯೂ, ಇದು ಅಭ್ಯಾಸವಾದರೆ ದೀರ್ಘಾವಧಿಯಲ್ಲಿ ಅನೇಕ ನಷ್ಟಗಳನ್ನು ಉಂಟುಮಾಡಬಹುದು. ಹೀಗಾಗಿ ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ. ನೀವು ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ದೆ ಮಾಡಿದರೆ ಗಂಭೀರ ಆರೋಗ್ಯ ಸಮಸ್ಯೆಗಳು ಉಂಟಾಗಬಹುದು ಎನ್ನುತ್ತಾರೆ ಸಂಶೋಧಕರು.

ಇದನ್ನೂ ಓದಿ-ಈ ಎಣ್ಣೆ ನಿಮ್ಮ ಬಿಳಿಕೂದಲುಗಳಿಗೆ ಶಾಶ್ವತವಾಗಿ ಗುಡ್ ಬೈ ಹೇಳುತ್ತೇ, ಜೀವನವಿಡೀ ಬಲಿಷ್ಠ ಕಪ್ಪುಕೂದಲು ನಿಮ್ಮದಾಗುತ್ತವೆ!
 
ನೀವು ಹಗಲಿನಲ್ಲಿ ಮಲಗಬೇಕೇ ಅಥವಾ ಬೇಡವೇ?
ಹಗಲಿನಲ್ಲಿ ತಡವಾಗಿ ಮಲಗುವ ವಯಸ್ಕರಿಗೆ ಮಧುಮೇಹ, ಹೃದ್ರೋಗ ಮತ್ತು ಖಿನ್ನತೆಯಂತಹ ಸಮಸ್ಯೆಗಳ ಹೆಚ್ಚಿನ ಅಪಾಯವಿದೆ ಎಂದು ಹಾರ್ವರ್ಡ್ ತಜ್ಞರು ಹೇಳುತ್ತಾರೆ. ಹಗಲಿನಲ್ಲಿ ಮಲಗುವುದು ಎಂದರೆ ನೀವು ರಾತ್ರಿಯಲ್ಲಿ ಸಾಕಷ್ಟು ನಿದ್ದೆ ಮಾಡುತ್ತಿಲ್ಲ, ಇದು ಅನೇಕ ದೀರ್ಘಕಾಲದ ಕಾಯಿಲೆಗಳನ್ನು ಹೆಚ್ಚಿಸುತ್ತದೆ. ಆದ್ದರಿಂದ, ರಾತ್ರಿಯಲ್ಲಿ ಸಾಕಷ್ಟು ನಿದ್ರೆ ಪಡೆಯಿರಿ. ಹಗಲಿನಲ್ಲಿ ಹೆಚ್ಚು ಹೊತ್ತು ನಿದ್ದೆ ಮಾಡುವುದರಿಂದ ನಿದ್ರೆಯ ಚಕ್ರಕ್ಕೆ ತೊಂದರೆಯಾಗಬಹುದು. ಹೀಗಾಗಿ ಹಗಲಿನಲ್ಲಿ ಲಘು ನಿದ್ರೆ ಮಾಡುವುದು ಒಳ್ಳೆಯದು ಎನ್ನುತ್ತಾರೆ ಆರೋಗ್ಯ ತಜ್ಞರು. ಒಬ್ಬ ವ್ಯಕ್ತಿಯು ಹಗಲಿನಲ್ಲಿ 20-30 ನಿಮಿಷಗಳಿಗಿಂತ ಹೆಚ್ಚು ಕಾಲ ಮಲಗಬಾರದು. ಇಲ್ಲದಿದ್ದರೆ ನಷ್ಟ ಸಂಭವಿಸಬಹುದು.

ಇದನ್ನೂ ಓದಿ-ದೇಹದಲ್ಲಿ ಹಿಮೋಗ್ಲೋಬಿನ್ ಅಥವಾ ರಕ್ತದ ಕೊರೆತೆ ಇದ್ದರೆ, ಈ ಸುಲಭ ಮನೆಮದ್ದುಗಳನ್ನು ಟ್ರೈ ಮಾಡಿ ನೋಡಿ!

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಖಚಿತಪಡಿಸುವುದಿಲ್ಲ. ಅನುಸರಿಸುವ ಮುನ್ನ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)

ಇದನ್ನೂ ನೋಡಿ-

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News