ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ Neeraj Chopra: ಮೊದಲ ಬಾರಿಗೆ ಈ ಸಾಧನೆಗೈದ ದಾಖಲೆಗಳ ಶೂರ

ನೀರಜ್ ಚೋಪ್ರಾ ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದಿದ್ದಾರೆ. 24ರ ಹರೆಯದ ನೀರಜ್ ಚೋಪ್ರಾ ಅವರು ಈ ಪ್ರಶಸ್ತಿಯ ಮೊದಲ ಪ್ರಯತ್ನದಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆದರು. ಇದು ಅವರ ವೃತ್ತಿ ಜೀವನದಲ್ಲಿ ಮೂರನೇ ಅತ್ಯುತ್ತಮ ಪ್ರಯತ್ನವಾಗಿದೆ. ನೀರಜ್ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದರು.

Written by - Bhavishya Shetty | Last Updated : Aug 27, 2022, 08:58 AM IST
    • ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ನೀರಜ್ ಚೋಪ್ರಾ
    • ಡೈಮಂಡ್ ಲೀಗ್ ಮೀಟ್‌ನ ಲಾಸಾನ್ನೆ ಸ್ಟೇಜ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ
    • ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾರಿಂದ ಮತ್ತೊಂದು ಸಾಧನೆ
ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ Neeraj Chopra: ಮೊದಲ ಬಾರಿಗೆ ಈ ಸಾಧನೆಗೈದ ದಾಖಲೆಗಳ ಶೂರ  title=
Neeraj Chopra

Neeraj Chopra: ಭಾರತದ ಸ್ಟಾರ್ ಜಾವೆಲಿನ್ ಆಟಗಾರ ನೀರಜ್ ಚೋಪ್ರಾ ತಮ್ಮ ಬತ್ತಳಿಕೆಯಲ್ಲಿ ಮತ್ತೊಂದು ದಾಖಲೆಯನ್ನು ಸೇರಿಸಿಕೊಂಡಿದ್ದಾರೆ. ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕವನ್ನು ಗೆದ್ದುಕೊಟ್ಟ ನೀರಜ್ ಚೋಪ್ರಾ ಶುಕ್ರವಾರ ಮತ್ತೊಮ್ಮೆ ಇತಿಹಾಸವನ್ನು ಸೃಷ್ಟಿಸಿದರು. ಡೈಮಂಡ್ ಲೀಗ್ ಮೀಟ್‌ನ ಲಾಸಾನ್ನೆ ಸ್ಟೇಜ್ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ನೀರಜ್ ಚೋಪ್ರಾ ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದಿದ್ದಾರೆ. 24ರ ಹರೆಯದ ನೀರಜ್ ಚೋಪ್ರಾ ಅವರು ಈ ಪ್ರಶಸ್ತಿಯ ಮೊದಲ ಪ್ರಯತ್ನದಲ್ಲಿ 89.08 ಮೀಟರ್ ದೂರ ಜಾವೆಲಿನ್ ಎಸೆದರು. ಇದು ಅವರ ವೃತ್ತಿ ಜೀವನದಲ್ಲಿ ಮೂರನೇ ಅತ್ಯುತ್ತಮ ಪ್ರಯತ್ನವಾಗಿದೆ. ನೀರಜ್ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದರು. ಮೂರನೇ ಯತ್ನದಲ್ಲಿ ಭಾಗವಹಿಸದೇ ನಾಲ್ಕನೇ ಯತ್ನ ವಿಫಲವಾಯಿತು. ಅವರು ಮೊದಲ ಪ್ರಯತ್ನದಲ್ಲಿಯೇ ಲೌಸನ್ನೆ ಡೈಮಂಡ್ ಲೀಗ್ ಪ್ರಶಸ್ತಿಯನ್ನು ಗೆದ್ದರು. 

ಇದನ್ನೂ ಓದಿ: Smart TV: ಕೇವಲ 7,999 ರೂ.ಗೆ ಈ ಅತ್ಯುತ್ತಮ ಸ್ಮಾರ್ಟ್ ಟಿವಿ ಖರೀದಿಸಿ

ಪ್ರಶಸ್ತಿ ಗೆಲ್ಲುವುದರೊಂದಿಗೆ ನೀರಜ್ ಚೋಪ್ರಾ ಸೆ.7 ಮತ್ತು 8ರಂದು ಜ್ಯೂರಿಚ್‌ನಲ್ಲಿ ನಡೆಯಲಿರುವ ಡೈಮಂಡ್ ಲೀಗ್‌ನ ಫೈನಲ್ ತಲುಪಿದ್ದಾರೆ. ಇದರೊಂದಿಗೆ 2023ರಲ್ಲಿ ಹಂಗೇರಿಯ ಬುಡಾಪೆಸ್ಟ್‌ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್‌ಶಿಪ್‌ಗೂ ಅರ್ಹತೆ ಪಡೆದಿದ್ದಾರೆ. ನೀರಜ್ ಚೋಪ್ರಾ ಮತ್ತೊಮ್ಮೆ ಭಾರತೀಯರಿಗೆ ಖುಷಿಯಾಗುವ ಅವಕಾಶ ನೀಡಿದ್ದಾರೆ.

ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. ಇದರ ನಂತರ ಅವರು ಗಾಯದ ಕಾರಣ 2022 ರ ಕಾಮನ್‌ವೆಲ್ತ್ ಗೇಮ್ಸ್‌ನಿಂದ ಹೊರಗುಳಿದಿದ್ದರು. ಇದರಿಂದಾಗಿ ಭಾರತೀಯ ಅಭಿಮಾನಿಗಳು ಬೇಸರಗೊಂಡಿದ್ದರು. ಆದರೆ ಇದೀಗ ಅವರು ಸಖತ್ ಕಮ್ ಬ್ಯಾಕ್ ಮಾಡಿರೋದು ಸಂತಸ ತಂದಿದೆ. 

ಇದನ್ನೂ ಓದಿ: Arecanut Today Price: ಶಿವಮೊಗ್ಗದಲ್ಲಿ ಇಂದಿನ ಅಡಿಕೆ ಧಾರಣೆ ಹೇಗಿದೆ..?

ಹರಿಯಾಣದ ಪಾಣಿಪತ್ ನಿವಾಸಿ ನೀರಜ್ ಚೋಪ್ರಾ ಡೈಮಂಡ್ ಲೀಗ್ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೋಪ್ರಾಗೂ ಮೊದಲು, ಡಿಸ್ಕಸ್ ಎಸೆತಗಾರ ವಿಕಾಸ್ ಗೌಡ ಡೈಮಂಡ್ ಲೀಗ್ ಕೂಟದ ಅಗ್ರ ಮೂರರಲ್ಲಿ ಸ್ಥಾನ ಪಡೆದ ಏಕೈಕ ಭಾರತೀಯ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News