ಟೆಸ್ಟ್ ಸರಣಿಗೆ ವೇಳಾಪಟ್ಟಿ ಪ್ರಕಟ: 21 ವರ್ಷದ ಈ ಯುವ ಆಟಗಾರನಿಗೆ ಮಣೆ ಹಾಕಿದ ಸಮಿತಿ!

PAK vs SL 2 Match Test Series: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ನ 2023-25ರ ಚಕ್ರದಲ್ಲಿ ಶ್ರೀಲಂಕಾ ಸರಣಿಯು ಪಾಕಿಸ್ತಾನದ ಮೊದಲ ನಿಯೋಜನೆಯಾಗಿದೆ. ಇದಕ್ಕೂ ಮುನ್ನ 2022ರಲ್ಲಿ ಶ್ರೀಲಂಕಾದಲ್ಲಿ ಉಭಯ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿ 1-1ರಲ್ಲಿ ಡ್ರಾದಲ್ಲಿ ಅಂತ್ಯಗೊಂಡಿತ್ತು.

Written by - Bhavishya Shetty | Last Updated : Jun 21, 2023, 11:41 AM IST
    • ಪಾಕಿಸ್ತಾನ ಕ್ರಿಕೆಟ್ ತಂಡವು ಮುಂಬರುವ ಜುಲೈ ತಿಂಗಳಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಹೋಗಬೇಕಾಗಿದೆ
    • ಮೊದಲ ಟೆಸ್ಟ್ ಪಂದ್ಯ ಜುಲೈ 16 ರಂದು ಗಾಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭ
    • ಈ ಟೆಸ್ಟ್ ಸರಣಿಗೆ ಪಾಕಿಸ್ತಾನ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ
ಟೆಸ್ಟ್ ಸರಣಿಗೆ ವೇಳಾಪಟ್ಟಿ ಪ್ರಕಟ: 21 ವರ್ಷದ ಈ ಯುವ ಆಟಗಾರನಿಗೆ ಮಣೆ ಹಾಕಿದ ಸಮಿತಿ! title=
Pakistan Cricket

PAK vs SL 2 Match Test Series: ಪಾಕಿಸ್ತಾನ ಕ್ರಿಕೆಟ್ ತಂಡವು ಮುಂಬರುವ ಜುಲೈ ತಿಂಗಳಲ್ಲಿ ಶ್ರೀಲಂಕಾ ಪ್ರವಾಸಕ್ಕೆ ಹೋಗಬೇಕಾಗಿದೆ. ಅಲ್ಲಿ ತಂಡವು ಎರಡು ಟೆಸ್ಟ್‌ಗಳ ಸರಣಿಯನ್ನು ಆಡಲಿದೆ. ಉಭಯ ತಂಡಗಳ ನಡುವಿನ ಮೊದಲ ಟೆಸ್ಟ್ ಪಂದ್ಯ ಜುಲೈ 16 ರಂದು ಗಾಲೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಎರಡನೇ ಟೆಸ್ಟ್ ಜುಲೈ 24-28 ರವರೆಗೆ ಕೊಲಂಬೊದ ಸಿಂಹಳೀಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ನಡೆಯಲಿದೆ. ಬಾಬರ್ ಆಜಮ್ ಅವರ ತಂಡವು ಜುಲೈ 9 ರಂದು ಶ್ರೀಲಂಕಾವನ್ನು ತಲುಪಲಿದೆ ಮತ್ತು ಜುಲೈ 11 ರಂದು ಎರಡು ದಿನಗಳ ಅಭ್ಯಾಸ ಪಂದ್ಯವನ್ನು ಆಡಲಿದೆ.

ಇದನ್ನೂ ಓದಿ: ಶೀಘ್ರದಲ್ಲೇ Android ಬೀಟಾದಲ್ಲಿ ಮೆಟಾ ಕ್ವೆಸ್ಟ್ ಹೊಂದಾಣಿಕೆಯನ್ನು ಸೇರಿಸಲಿದೆ ವಾಟ್ಸಪ್!

ಎರಡು ತಂಡಗಳ ನಡುವೆ ಎರಡು ಪಂದ್ಯಗಳ ಟೆಸ್ಟ್ ಸರಣಿ:

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ನ 2023-25ರ ಚಕ್ರದಲ್ಲಿ ಶ್ರೀಲಂಕಾ ಸರಣಿಯು ಪಾಕಿಸ್ತಾನದ ಮೊದಲ ನಿಯೋಜನೆಯಾಗಿದೆ. ಇದಕ್ಕೂ ಮುನ್ನ 2022ರಲ್ಲಿ ಶ್ರೀಲಂಕಾದಲ್ಲಿ ಉಭಯ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿ 1-1ರಲ್ಲಿ ಡ್ರಾದಲ್ಲಿ ಅಂತ್ಯಗೊಂಡಿತ್ತು. ಶ್ರೀಲಂಕಾ ಪ್ರವಾಸದಲ್ಲಿ, ಪಾಕಿಸ್ತಾನವು 342 ರನ್‌ ಗಳ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟಿತು ಮತ್ತು ಮೊದಲ ಟೆಸ್ಟ್ ಅನ್ನು ನಾಲ್ಕು ವಿಕೆಟ್‌ ಗಳಿಂದ ಗೆದ್ದುಕೊಂಡಿತು. ಆದರೆ ಎರಡನೇ ಟೆಸ್ಟ್‌ ನಲ್ಲಿ ಆತಿಥೇಯರು 246 ರನ್‌ಗಳ ಜಯದೊಂದಿಗೆ ಸರಣಿಯನ್ನು ಸಮಬಲಗೊಳಿಸಿದರು. ಪಾಕಿಸ್ತಾನ ಕೊನೆಯದಾಗಿ 2014ರಲ್ಲಿ ಕೊಲಂಬೊದ ಸಿಂಘಲ್ಲಿ ಸ್ಪೋರ್ಟ್ಸ್ ಕ್ಲಬ್‌ ನಲ್ಲಿ ಟೆಸ್ಟ್ ಆಡಿತ್ತು. ಈ ಮೈದಾನದಲ್ಲಿ ಆರು ಟೆಸ್ಟ್‌ಗಳನ್ನು ಆಡಿದ್ದು, ಒಂದರಲ್ಲಿ ಗೆದ್ದಿದ್ದರೆ, ನಾಲ್ಕು ಪಂದ್ಯಗಳಲ್ಲಿ ಸೋತಿದೆ.

ಪಾಕಿಸ್ತಾನ ತಂಡ ಪ್ರಕಟ:

ಈ ಟೆಸ್ಟ್ ಸರಣಿಗೆ ಪಾಕಿಸ್ತಾನ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಬಾಬರ್ ಅಜಮ್ ತಂಡದ ನಾಯಕರಾಗಿ ಕಾಣಿಸಿಕೊಳ್ಳಲಿದ್ದು, ಮೊಹಮ್ಮದ್ ರಿಜ್ವಾನ್ ಅವರಿಗೆ ಉಪನಾಯಕತ್ವವನ್ನು ನೀಡಲಾಗಿದೆ. ಇದರೊಂದಿಗೆ ಗಾಯದ ಸಮಸ್ಯೆಯಿಂದ ಕಳೆದ ಒಂದು ವರ್ಷದಿಂದ ತಂಡದಿಂದ ಹೊರಗುಳಿದಿದ್ದ ವೇಗಿ ಶಾಹೀನ್ ಅಫ್ರಿದಿ ವಾಪಸಾಗಿದ್ದು, 21ರ ಹರೆಯದ ಯುವ ಆಟಗಾರ ಮೊಹಮ್ಮದ್ ಹುರೈರಾ ಅವರಿಗೂ ಅವಕಾಶ ನೀಡಲಾಗಿದೆ. ಹುರೈರಾ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದಲ್ಲಿ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಇದುವರೆಗೆ ಆಡಿರುವ 24 ಪಂದ್ಯಗಳಲ್ಲಿ 68.24 ಸರಾಸರಿಯೊಂದಿಗೆ 2252 ರನ್ ಗಳಿಸಿದ್ದಾರೆ. 8 ಶತಕ ಹಾಗೂ ಅರ್ಧ ಶತಕಗಳನ್ನು ಸಹ ಆಡಿದ್ದಾರೆ.

ಇದನ್ನೂ ಓದಿ: Biparjoy Cyclone Update: ಬಿಪರ್ಜೋಯ್ ಹಿನ್ನೆಲೆ ಬಂದ ಕ್ಲೈಮ್ ಗಳನ್ನು ತ್ವರಿತ ಇತ್ಯರ್ಥಪಡಿಸಿ, ವಿಮಾ ಕಂಪನಿಗಳಿಗೆ ಐಆರ್ಡಿಎಐ ನಿರ್ದೇಶನ

ಟೆಸ್ಟ್ ಸರಣಿಗಾಗಿ ಪಾಕಿಸ್ತಾನ ತಂಡ:

ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್-ಕೀಪರ್/ಉಪನಾಯಕ), ಅಮೀರ್ ಜಮಾಲ್, ಅಬ್ದುಲ್ಲಾ ಶಫೀಕ್, ಅಬ್ರಾರ್ ಅಹ್ಮದ್, ಹಸನ್ ಅಲಿ, ಇಮಾಮ್-ಉಲ್-ಹಕ್, ಮೊಹಮ್ಮದ್ ಹುರೈರಾ, ಮೊಹಮ್ಮದ್ ನವಾಜ್, ನಸೀಮ್ ಶಾ, ನೋಮನ್ ಅಲಿ, ಸಲ್ಮಾನ್ ಅಲಿ ಅಘಾ, ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್), ಸೌದ್ ಶಕೀಲ್, ಶಾಹೀನ್ ಅಫ್ರಿದಿ ಮತ್ತು ಶಾನ್ ಮಸೂದ್.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News