ಕಮಿಷನ್ ದಂಧೆ ನಡೆಯುತ್ತಿರುವುದಕ್ಕೆ ಸರ್ಕಾರ ಕುಖ್ಯಾತಿಯಾಗಿದೆ. ಶಿಕ್ಷಕರ ವರ್ಗಾವಣೆ ಕಮಿಷನ್ ದಂಧೆ ಊಹಾಪೋಹಗಳು ಇವೆ. ವರ್ಗಾವಣೆ ನೀತಿಯನ್ನು ಸರ್ಕಾರ ತರಬೇಕು. ಏಕಾಏಕಿ ವರ್ಗಾವಣೆಯಿಂದ ಶಿಕ್ಷಣಕ್ಕೆ ಅಡ್ಡಿ ಆಗುತ್ತಿದೆ ಎಂದು ಬೈಕ್ ಹರಿಪ್ರಸಾದ್ ಆರೋಪಿಸಿದ್ದಾರೆ.
ಜಲ ಸಂಪನ್ಮೂಲ ಇಲಾಖೆಯ ನಿವೃತ್ತ ಕಾರ್ಯದರ್ಶಿ ಬಿ.ಜಿ. ಗುರುಪಾದಸ್ವಾಮಿ (ಎಂಜಿನಿಯರಿಂಗ್ ಪರಿಣಿತ) ಹಾಗೂ ರಾಜ್ಯ ಲೆಕ್ಕಪತ್ರ ಇಲಾಖೆಯ ನಿವೃತ್ತ ನಿರ್ದೇಶಕ ಕೆ. ನಂದಕುಮಾರ್ (ಹಣಕಾಸು ವಿಷಯ ಪರಿಣಿತ) ಈ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಗುಜರಾತ್ನ ಕೆವಾಡಿಯಾದಲ್ಲಿ 14ನೇ ಆವೃತ್ತಿಯ ಸೆಂಟ್ರಲ್ ಹೆಲ್ತ್ ಕೌನ್ಸಿಲ್ ಆಫ್ ಹೆಲ್ತ್ ಅಂಡ್ ಫ್ಯಾ ಮಿಲಿ ವೆಲ್ ಫೇರ್ ನಡೆಸುತ್ತಿರುವ “ಸ್ವಾಸ್ಥ್ಯ ಚಿಂತನ್ ಶಿವಿರ್” ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮಾತನಾಡಿದ್ದಾರೆ. ಮಾನಸಿಕ ಆರೋಗ್ಯ ಚಿಕಿತ್ಸೆಯಲ್ಲಿ ಕರ್ನಾಟಕ ಮಾದರಿ ವ್ಯವಸ್ಥೆಯನ್ನು ಜಾರಿ ಮಾಡಿದೆ ಎಂದು ಅವರು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ನಕಾರಾತ್ಮಕವಾಗಿ ಅಭಿಪ್ರಾಯ ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೀಕ್ರೆಟ್ ಆಪರೇಷನ್ ನಡೆಸಿದ್ದಾರೆ. ರಾಜ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಂದ ರಾಜ್ಯ ರಾಜಕೀಯದ ಮಾಹಿತಿ ಪಡೆದಿದ್ದಾರೆ.
ತರಬೇತಿ ವಿಭಾಗದ ಡಿಜಿಪಿಯಾಗಿ ಡಾ.ಪಿ. ರವೀಂದ್ರನಾಥ್, ಡಿಸಿಆರ್ಇ ಎಡಿಜಿಪಿಯಾಗಿ ಅರುಣ್ ಚಕ್ರವರ್ತಿ ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಎಡಿಜಿಪಿಯಾಗಿ ಹರಿಶೇಖರನ್ ಅವರನ್ನು ನೇಮಕಗೊಳಿಸಲಾಗಿದೆ.
ಪರಿಷ್ಕೃತ ಸೂಚನಾ ಪತ್ರ ಹೊರಡಿಸಿರುವ ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್, ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು.
2022-23 ನೇ ಸಾಲಿಗೆ ಎ,ಬಿ,ಸಿ,ಡಿ ಗ್ರೂಫ್ ಅಧಿಕಾರಿಗಳು/ನೌಕರರು, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಲು ಇಲಾಖೆ ಸಚಿವರಿಗೆ ಅಧಿಕಾರ ನೀಡಿ ಆದೇಶ ಹೊರಡಿಸಿದೆ.ಇಲಾಖೆಯ ಶೇ.6 ರಷ್ಟು ಮೀರದಂತೆ ವರ್ಗಾವಣೆ ಮಾಡಲು ಸೂಚನೆ ನೀಡಿದೆ.
Ration Card: ಕೋವಿಡ್ ನಂತರದ ಕಾಲದಲ್ಲಿ ಜನರ ಆರೋಗ್ಯ ಪರಿಸ್ಥಿತಿಯ ಮೇಲೆ ಹೆಚ್ಚಿನ ನಿಗಾ ಇಡುವ ಅಗತ್ಯವಿದ್ದು, ಪಡಿತರ ಯೋಜನೆಗಳನ್ನು ಕ್ರಮ ಬದ್ಧಗೊಳಿಸಿ ಜನರಿಗೆ ಸಿರಿಧಾನ್ಯ, ಜೋಳ ಒದಗಿಸುವುದು ಒಳ್ಳೆಯದು ಎಂಬುದು ತಜ್ಞರ ಸಲಹೆಯಾಗಿದೆ.
ಸರ್ಕಾರದ ವಿರುದ್ಧ 30% ಕಮಿಷನ್ ಆರೋಪ ಮಾಡಿರೋ ದಿಂಗಾಲೇಶ್ವರ ಸ್ವಾಮೀಜಿ ಬಿಜೆಪಿ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಆರೋಪ ಮಾಡಿರೋ ಸ್ವಾಮೀಜಿ ಸಾಕ್ಷಿ ನೀಡಲಿ ಎಂದು ಬಿಜೆಪಿ ನಾಯಕರು ಸವಾಲು ಹಾಕಿದ್ದಾರೆ. ಮಾಡಿರೋ ಆರೋಪಕ್ಕೆ ದಿಂಗಾಲೇಶ್ವರ ಸ್ವಾಮೀಜಿ ಸಾಕ್ಷಿ ನೀಡ್ತಾರಾ ಅನ್ನೋದು ಕುತೂಹಲ ಮೂಡಿಸಿದೆ.
ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರೇ ತಪ್ಪು ಮಾಡಿದ್ರೂ ಅವರಿಗೆ ಶಿಕ್ಷೆ ಕೊಟ್ಟೇ ಕೊಡ್ತೀವಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ. ಪೊಲೀಸ್ ಠಾಣೆ ಮೇಲೆ ದಾಳಿ ಮಾಡೋದು ಅಕ್ಷಮ್ಯ ಅಪರಾಧ ಅಂತಾ ಸಿಎಂ ಹೇಳಿದ್ದಾರೆ. ಇನ್ನು ಸಂಪುಟ ವಿಸ್ತರಣೆ ವಿಚಾರವಾಗಿ ಹೈಕಮಾಂಡ್ ಕರೆದ ಕೂಡ್ಲೇ ದೆಹಲಿಗೆ ತೆರಳೋದಾಗಿ ಸಿಎಂ ಹೇಳಿದ್ದಾರೆ.
PSI ನೇಮಕಾತಿಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮವಾಗಿ ಆಯ್ಕೆಯಾದವರ ವಿರುದ್ಧ ಕ್ರಮ ಜರುಗಿಸಬೇಕು.. ಆದ್ರೆ ಪ್ರಾಮಾಣಿಕ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಿ ಆದೇಶ ಪ್ರತಿ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ. ಯಾರೋ ಕೆಲವ್ರು ಮಾಡಿದ ಆಕ್ರಮದಿಂದ ಪ್ರಾಮಾಣಿಕರಿಗೆ ತೊಂದರೆ ಆಗ್ತಿದೆ ಅಂತಾ ಅಸಮಾಧಾನ ಹೊರ ಹಾಕಿದ್ದಾರೆ.
ರಾಜ್ಯ ಬಿಜೆಪಿ ಸಚಿವಾಕಾಂಕ್ಷಿಗಳಿಗೆ ಶೀಘ್ರವೇ ಸಿಹಿ ಸುದ್ದಿ ಸಿಗುವ ಲಕ್ಷಣಗಳು ಗೋಚರಿಸುತ್ತಿವೆ.ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಸಹಮತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದ್ದು,ಈ ಮಾಸಾಂತ್ಯಕ್ಕೆ ಸಂಪುಟ ಪುನಃರಚನೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಕಮಿಷನ್ ವಿಚಾರವಾಗಿ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದು, ಇದೊಂದೇ ವಿಕೆಟ್ ಅಲ್ಲ, ನಿಷ್ಪಕ್ಷಪಾತವಾಗಿ ತನಿಖೆ ನಡೆಸಿದ್ರೆ ಸರ್ಕಾರದ ಅರ್ಧ ಕ್ಯಾಬಿನೆಟ್ ಖಾಲಿಯಾಗುತ್ತದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಮೇಕೆದಾಟುನಲ್ಲಿ ಡ್ಯಾಮ್ ನಿರ್ಮಾಣ ಮಾಡುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಮಂಡಿಸಿದ್ದ ನಿರ್ಣಯಕ್ಕೆ ಈಗ ಕರ್ನಾಟಕ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿ ವಿಧಾನಸಭೆಯಲ್ಲಿ ಇಂದು ಖಂಡನಾ ನಿರ್ಣಯ ಮಂಡಿಸಿದೆ.ಈಗ ರಾಜ್ಯ ಸರ್ಕಾರದ ನಿರ್ಣಯವನ್ನು ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕರಿಸಲಾಗಿದೆ.
ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಸಂಭವಿಸಿದ ಖಾಸಗಿ ಬಸ್ ದುರಂತದಲ್ಲಿ ಅಸುನೀಗಿದವರಿಗೆ ರಾಜ್ಯ ಸರಕಾರ ಕನಿಷ್ಠ 25 ಲಕ್ಷ ರೂ.ಪರಿಹಾರ ನೀಡಬೇಕು. 5 ಲಕ್ಷ ರೂ.ಕೊಟ್ಟು ಕೈತೊಳೆದುಕೊಳ್ಳುವುದು ಸರಿಯಲ್ಲ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.