ಮುಕುಲ್ ರಾಯ್ ಇಂದು ಮಮತಾ ಬ್ಯಾನರ್ಜಿ ಅವರನ್ನು ಭೇಟಿ ಆಗುತ್ತಿರುವುದರಿಂದ ಅವರಿಗೆ ಟಿಎಂಸಿ ಬಾಗಿಲು ತೆರೆಯಬಹುದು ಎಂದು ಹೇಳಲಾಗುತ್ತಿದೆ. ಈ ನಡುವೆ ಚುನಾವಣಾ ಸಮಯದಲ್ಲಿ ಪಕ್ಷ ಬಿಟ್ಟು ಹೋದವರನ್ನು ಮತ್ತೆ ಸೇರಿಸಿಕೊಳ್ಳಬಾರದೆಂಬ ಕೂಗು ಟಿಎಂಸಿಯಲ್ಲಿ ಕೇಳಿಬರುತ್ತಿದೆ. ರಾಜಕಾರಣದಲ್ಲಿ ಏನು ಬೇಕಾದರೂ ಆಗಬಹುದು. ಕಾದುನೋಡಬೇಕು.
ಯಾಸ್ ಚಂಡಮಾರುತದ ಕುರಿತು ಪ್ರಧಾನಿ ಮೋದಿ ಕರೆದಿದ್ದ ಸಭೆಗೆ ಸಿಎಂ ಮಮತಾ ಅವರು ಗೈರು ಹಾಜರಾಗುವ ಮೂಲಕ ಸಾಂವಿಧಾನಿಕ ನೀತಿಗಳನ್ನು ಹತ್ಯೆಗೈದಿದ್ದಾರೆ ಎಂದು ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ದಾ ಟೀಕಾ ಪ್ರಹಾರ ನಡೆಸಿದ್ದಾರೆ.
ಚುನಾವಣೆಗೆ ಮುನ್ನ ಬಿಜೆಪಿಗೆ ಸೇರಿದ್ದ ಮಾಜಿ ಟಿಎಂಸಿ ಶಾಸಕ ಸೋನಾಲಿ ಗುಹಾ ಅವರು ಶನಿವಾರ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಪತ್ರ ಬರೆದು, ಪಕ್ಷವನ್ನು ತೊರೆದಿದ್ದಕ್ಕಾಗಿ ಕ್ಷಮೆಯಾಚಿಸಿದರು.ಅಷ್ಟೇ ಅಲ್ಲದೆ ತಮ್ಮನ್ನು ಪಕ್ಷಕ್ಕೆ ವಾಪಸ್ ಕರೆದುಕೊಳ್ಳಲು ವಿನಂತಿಸಿಕೊಂಡರು.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದು, ಕೊರೊನಾ ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಬಳಸಲಾಗುವ ಉಪಕರಣಗಳು ಮತ್ತು ಔಷಧಿಗಳ ಮೇಲಿನ ಎಲ್ಲಾ ರೀತಿಯ ತೆರಿಗೆ ಮತ್ತು ಕಸ್ಟಮ್ಸ್ ಸುಂಕವನ್ನು ಮನ್ನಾ ಮಾಡುವಂತೆ ಕೋರಿದ್ದಾರೆ.
ಏಕರೂಪದ ಲಸಿಕೆ ನೀತಿ ಇರಬೇಕು ಮತ್ತು ಇತ್ತೀಚಿನ ಹಂತದ ನೂತನ ಭೇದಾತ್ಮಕ ಬೆಲೆ ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದೆ.ಲಸಿಕೆಗಳು ಲಭ್ಯವಾಗುವಂತೆ ಮತ್ತು ರಾಜ್ಯಗಳಿಗೆ ಉಚಿತವಾಗಿ ನೀಡುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರವು ತಕ್ಷಣದ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಬಂಗಾಳ ಹೇಳಿದೆ.
ದೇಶದಲ್ಲಿ ಬಿಜೆಪಿಯ ಅವನತಿ ಪರ್ವ ಶುರುವಾಗಿದೆ. ಪಶ್ಚಿಮ ಬಂಗಾಳದಲ್ಲಿ ದುಡ್ಡು, ಅಧಿಕಾರ ಮತ್ತು ತೋಳ್ಬಲದ ವಾಮಮಾರ್ಗದ ಮೂಲಕ ಸ್ವಲ್ಪಮಟ್ಟಿಗೆ ಬಲವನ್ನು ಹೆಚ್ಚಿಸಿಕೊಂಡರೂ ಗೆಲುವಿನ ದಡದ ಸಮೀಪಕ್ಕೆ ಬರಲಾಗದೆ ಮುಖ ಭಂಗ ಅನುಭವಿಸಿದೆ ಎಂದು ರಾಜ್ಯ ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.
ಕೂಚ್ ಬೆಹರ್ ಗುಂಡಿನ ದಾಳಿ ಸಂತ್ರಸ್ತರ ಶವಗಳೊಂದಿಗೆ ರ್ಯಾಲಿಯನ್ನು ಪ್ರಸ್ತಾಪಿಸುವ ಆಡಿಯೋ ಟೇಪ್ ಹೊರಹೊಮ್ಮಿದ ನಂತರ ತಮ್ಮ ಪೋನ್ ನ್ನು ಟ್ಯಾಪ್ ಮಾಡಲಾಗುತ್ತಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿದ್ದಾರೆ.ಅಷ್ಟೇ ಅಲ್ಲದೆ ಸಿಐಡಿ ತನಿಖೆಗೆ ಆದೇಶಿಸುವುದಾಗಿ ಹೇಳಿದ್ದಾರೆ.
ಮೂರನೇ ಹಂತದ ಚುನಾವಣೆಗೆ ಮುನ್ನ ಏಪ್ರಿಲ್ 3 ರಂದು ಹೂಗ್ಲಿ ಜಿಲ್ಲೆಯ ತಾರಕೇಶ್ವರದಲ್ಲಿ ಪ್ರಚಾರ ನಡೆಸುತ್ತಿರುವಾಗ ಕೋಮುವಾದಿ ಆಧಾರದ ಮೇಲೆ ಮತಗಳನ್ನು ಬಹಿರಂಗವಾಗಿ ಕೇಳಬೇಕು ಎಂಬ ಹೇಳಿಕೆ ವಿಚಾರವಾಗಿ ಕುರಿತು ಚುನಾವಣಾ ಆಯೋಗವು ಬುಧವಾರ ಸಂಜೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ನೋಟಿಸ್ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.