Hassan Suicide case: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ..!

Hassan Guest lecturer Suicide case: ಸೋಮಶೇಖರ್ ಮತ್ತು ಭಾಗ್ಯ ದಂಪತಿಯ ಪುತ್ರಿ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಮೇ 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ. ​

Written by - Puttaraj K Alur | Last Updated : May 11, 2024, 11:02 AM IST
  • ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ
  • ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ಆತ್ಮಹತ್ಯೆಗೆ ಶರಣು
  • ಅವಿವಾಹಿತರಾಗಿದ್ದ ದೀಪಾ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ
Hassan Suicide case: ನೇಣು ಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ..! title=
ಅತಿಥಿ ಉಪನ್ಯಾಸಕಿ ಆತ್ಮಹತ್ಯೆ!

Hassan Suicide case: ಅತಿಥಿ ಉಪನ್ಯಾಸಕಿಯೊಬ್ಬರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಗಾಯತ್ರಿ ಬಡಾವಣೆಯಲ್ಲಿ ದೀಪಾ (34) ಆತ್ಮಹತ್ಯೆಗೆ ಶರಣಾಗಿದ್ದಾರೆ.  

ಸೋಮಶೇಖರ್ ಮತ್ತು ಭಾಗ್ಯ ದಂಪತಿಯ ಪುತ್ರಿ ದೀಪಾ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಅವಿವಾಹಿತರಾಗಿದ್ದ ದೀಪಾ ಮೇ 9ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಇದನ್ನೂ ಓದಿ: ಲವರ್‌ ಬೆಸ್ಟ್‌ ಬಾಯ್‌ ಫ್ರೇಂಡ್‌ ಮೇಲೆ ದಾಳಿ..! ಲಾಂಗ್‌ ಬೀಸಿ ಕೈ ಕಟ್‌ ಮಾಡಿದ ಪಾಗಲ್‌ ಪ್ರೇಮಿ

ಮನೆಯ ಛಾವಣಿಗೆ ಸೀರೆಯಿಂದ ನೇಣು ಬಿಗಿದುಕೊಂಡು ದೀಪಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಅವರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವೆಂದು ಪೊಲೀಸರು ತಿಳಿಸಿದ್ದಾರೆ. ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. 

ದೀಪಾ ಅವರ ಸಹೋದರ ಬೆಂಗಳೂರಿನಲ್ಲಿ ಸಾಫ್ಟ್ ವೇರ್‌ಇಂಜಿನಿಯರ್‌ ಆಗಿ ಕೆಲಸ ಮಾಡುತ್ತಿದ್ದಾರೆ. ಈ ಕುರಿತು ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Meghalaya : ಯುವತಿಯೊಬ್ಬರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ, ಇಬ್ಬರನ್ನು ಹೊಡೆದು ಕೊಂದ ಜನ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News