ಸರ್ಕಾರದ ಬಳಿ ಹಣಕಾಸಿನ ಕೊರತೆಯಿಲ್ಲ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ನೀಡಬೇಕಾದ ವೇತನವನ್ನ ನಿಯಮನುಸಾರ ಪಾವತಿಸಲಾಗಿದೆ. 108 ಅಂಬ್ಯುಲೆನ್ಸ್ ಸಿಬ್ಬಂದಿಗಳಿಗೆ ಯೋಜನೆಯನ್ನ ನಿರ್ವಹಿಸುತ್ತಿರುವ ಸಂಸ್ಥೆ ಜಿವಿಕೆ ಇಎಂಆರ್ ನವರು ವೇತನ ನೀಡಬೇಕು.
ಬೆಂಗಳೂರಿನಲ್ಲಿ ಇಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ಮುಸ್ಲಿಂ ಮೀಸಲಾತಿ ವಿಚಾರವಾಗಿ ಮೋದಿಯವರು ಸುಳ್ಳು ಹೇಳಿದ್ದಾರೆ. ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಏಲ್ಲಿ ಮುಸ್ಲಿಂಮರಿಗೆ ನೀಡಲಾಗಿದೆ. ಮೋದಿಯವರು ದಾಖಲೆ ಕೊಡಬೇಕು. ಇಲ್ಲವಾದರೆ ದೇಶದ ಜನರ ಕ್ಷಮೆ ಕೇಳಬೇಕು ಎಂದರು.
ಬೆಂಗಳೂರು: ಒಂದು ರಾಜ್ಯ ಸುಪ್ರೀಂ ಕೋರ್ಟ್ ಮೂಲಕ ಬರ ಪರಿಹಾರ ಪಡೆಯುವ ಪರಿಸ್ಥಿತಿ ನಿರ್ಮಾಣಕ್ಕೆ ಕೇಂದ್ರ ಬಿಜೆಪಿ ಸರ್ಕಾರವೇ ಹೊಣೆ. ಪ್ರಕೃತಿ ವಿಕೋಪಗಳ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುದರ ಬಗ್ಗೆ ನಿಯಮಗಳನ್ನ ರಚಿಸಲಾಗಿದೆ.
ಬೆಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೋದಿಯವರು ಮೊದಲು 5 ವರ್ಷ ಕೇಳಿದ್ದರು. ಆದರೆ ಅವರು ಅಧಿಕಾರಕ್ಕೇರಿ 10 ವರ್ಷಗಳೇ ಕಳೆದಿವೆ. ಈಗ ಮತ್ತೆ 23 ವರ್ಷ ಸಮಯ ಕೇಳ್ತಿದ್ದಾರೆ. ಅಂದರೆ 10 ವರ್ಷಗಳಲ್ಲಿ ಜನರ ಬದುಕಿನಲ್ಲಿ ಅಚ್ಚೇ ದಿನಗಳು ಬರಲಿಲ್ಲ ಎಂಬುದನ್ನ ಮೋದಿಯವರೇ ಒಪ್ಪಿಕೊಂಡಂತಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹಠಾತ್ ಹೃದಯಾಘಾತಗಳನ್ನ ತಡೆಯುವಲ್ಲಿ ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಗೆ ಧಾರವಾಡದಲ್ಲಿ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕೃತ ಚಾಲನೆ ನೀಡಿದರು. ಪುನೀತ್ ರಾಜಕುಮಾರ್ ಅವರನ್ನ ನೆನಪಿಸಿಕೊಂಡ ಸಚಿವ ದಿನೇಶ್ ಗುಂಡೂರಾವ್ ಅವರು, ಜನರ ಜೀವ ಉಳಿಸುವ ಇಂಥಹ ಕಾರ್ಯಕ್ರಮಗಳಿಗೆ ಪುನೀತ್ ರಾಜಕುಮಾರ್ ಅವರು ಮೇಲಿಂದಲೇ ಆಶೀರ್ವಾದ ಮಾಡುತ್ತಾರೆ ಎಂದು ಹೇಳಿದರು.
ಬಿಎಸ್ ವೈ ವಿರುದ್ದ ಎಫ್ ಐಆರ್ ದಾಖಲಾದ ಬಗ್ಗೆ ಹುಬ್ಬಳ್ಳಿಯಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ. ನಾನು ಈ ಬಗ್ಗೆ ಹೆಚ್ಚು ಮಾತನಾಡುವುದಿಲ್ಲ. ಕಾನೂನು ತನಿಖೆ ಆಗಬೇಕು. ದೂರು ನೀಡಡ ಕೂಡಲೇ ದೋಷಿ, ನಿರ್ದೋಷಿ ಎಂದು ಹೇಳುವುದಕ್ಕೆ ಸಾಧ್ಯವಿಲ್ಲ ಎಂದಿದ್ದಾರೆ.
Dinesh Gundurao : ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ಮ ಚಿಕಿತ್ಸಾಲೆಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ಜಾರಿ ತರಲಾಗಿದೆ
ಉಣ್ಣೆ ಕಡಿತವನ್ನು ತಡೆಗಟ್ಟಲು ಬಳಸಲಾಗುವ DEPA ತೈಲವನ್ನು ಸಾರ್ವಜನಿಕರಿಗೆ ಬಳಸಲು ಉಚಿತವಾಗಿ ನೀಡಲಾಗಿದೆ. ರಾಜ್ಯಮಟ್ಟದಿಂದ ಈವರೆಗೆ 62794 DEPA ಬಾಟಲ್ಗಳನ್ನು ವಿತರಿಲಾಗಿದೆ. ರಾಜ್ಯ ಮಟ್ಟದಿಂದ ಅಧಿಕಾರಿಗಳು, RRT ತಂಡ ನಿಯಮಿತವಾಗಿ ಭೇಟಿ ನೀಡುತ್ತಿದ್ದು, ಸಮಯೋಚಿತ ಮಾರ್ಗದರ್ಶನವನ್ನು ನೀಡುತ್ತಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ
Health Minister Dinesh Gundurao: ಪಶ್ಚಿಮ ಘಟ್ಟದ ಭಾಗದಲ್ಲಿ ಮಂಗನ ಕಾಯಿಲೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮುಂಜಾಗೃತೆ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಿರಿಯ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Dinesh Gundurao: ಆರಂಭದಲ್ಲೇ ಕ್ಯಾನ್ಸರ್ ಪತ್ತೆಹಚ್ಚುವ ನಿಟ್ಟಿನಲ್ಲಿ ಹೆಚ್ಚಿನ ತಪಾಸಣೆ ಅವಶ್ಯಕತೆಯಿದ್ದು, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಕ್ಯಾನ್ಸರ್ ಸ್ಕ್ರೀನಿಂಗ್ ಗೆ ಒತ್ತು ನೀಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
Dinesh Gundurao: ನೂರಿತ ತಜ್ಞ ವೈದ್ಯರಿಂದ ನಮ್ಮ ಗ್ರಾಮೀಣ ಪ್ರದೇಶದ ಜನರಿಗೆ ಚಿಕಿತ್ಸೆ ದೊರೆಯುವಂತಾಗಬೇಕು. ಸೂಪರ್ ಸ್ಪೆಷಾಲಿಟಿ ಚಿಕಿತ್ಸೆಗಾಗಿ ಹಳ್ಳಿಗಾಡಿನ ಜನರಿಗೆ ದೂರದ ಜಿಲ್ಲೆಗಳಿಗೆ ಬರುವುದು ಕಷ್ಟವಾಗುತ್ತಿದೆ. ತಾಲೂಕು ಆಸ್ಪತ್ರೆಗಳಲ್ಲಿಯೇ ಸೂಪರ್ ಸ್ಪೆಷಾಲಿಟಿ ಕೇರ್ ಅನ್ನ ಒದಗಿಸುವ ನಿಟ್ಟಿನಲ್ಲಿ ಟೆಲಿಐಸಿಯೂ ವ್ಯವಸ್ಥೆ ಸಹಕಾರಿ.
Health Minister Dinesh Gundurao: ಪೌರ ಕಾರ್ಮಿಕರು ಸದಾ ನಗರದ ಸ್ವಚ್ಛತೆಗಾಗಿ ಶ್ರಮಿಸುವ ಶ್ರಮಿಕ ವರ್ಗದವರು. ಅಂಥವರನ್ನು ಗುರುತಿಸಿ ತಮ್ಮ ಕಚೇರಿಯಲ್ಲಿ ಗಣರಾಜ್ಯೋತ್ಸವದಂದು ಧ್ವಜಾರೋಹಣ ನೆರವೇರಿಸಲು ಸಚಿವರು ಸೂಚನೆ ನೀಡಿದ್ದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು 75ನೇ ಗಣರಾಜ್ಯೋತ್ಸವದಂದ ತಮ್ಮ ಶಾಸಕರ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಲು ಅವಕಾಶ ಕಲ್ಪಿಸಿಕೊಡುವ ಮೂಲಕ ಪೌರ ಕಾರ್ಮಿಕರನ್ನ ಗೌರವಿಸಿದ್ದಾರೆ.
Dinesh Gundurao : ಹೆಣ್ಣು ಭ್ರೂಣ ಹತ್ಯೆ ತಡೆಗೆ ಈಗಾಗಲೇ ಆರೋಗ್ಯ ಇಲಾಖೆ ಕಾರ್ಯಪಡೆಗಳನ್ನ ರಚಿಸಿದ್ದು, ಇನ್ನಷ್ಟು ಬಿಗಿ ಕ್ರಮಗಳನ್ನ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ನಮ್ಮ ಪಕ್ಷದ ಚೌಕಟ್ಟಿನ ಅಡಿಯಲ್ಲಿ ಎಲ್ಲ ಚರ್ಚೆ ಮಾಡಿದ್ದೇವೆ ನಾವೆಲ್ಲ ಸೇರಿ ಒಟ್ಟಾರೆ ಪಕ್ಷದ ಚುನಾವಣಾ ಕೆಲಸ ಮಾಡಬೇಕು ಕಾರ್ಯಕರ್ತರು, ಶಾಸಕರ ಸಮಸ್ಯೆ ಕುರಿತಂತೆ ಚರ್ಚೆ ಮಾಡಿದ್ದೇವೆ ಬೆಂಗಳೂರಿನಲ್ಲಿ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.